Breaking News
Hiring Reporter’s For more Information Contact Above Number 876 225 4007 . Program producer
Home / ಸುದ್ದಿ / ಅಧಿವೇಶನದಲ್ಲಿ ಮಾಧ್ಯಮ ನಿರ್ಬಂಧ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ.

ಅಧಿವೇಶನದಲ್ಲಿ ಮಾಧ್ಯಮ ನಿರ್ಬಂಧ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ.

ಹುಬ್ಬಳ್ಳಿ: ಕರ್ನಾಟಕ ರಾಜ್ಯ ಸರ್ಕಾರದಿಂದ ವಿಧಾನಸಭಾ ಅಧಿವೇಶನದ ಕಲಾಪದ ವೇಳೆಯಲ್ಲಿ ಮಾಧ್ಯಮಗಳ ಮೇಲೆ ನಿರ್ಬಂಧ ಹೇರಿರುವುದನ್ನು ಖಂಡಿಸಿ ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿತು. ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿರುವ ಮಾಧ್ಯಮಕ್ಕೆ ಅಧಿವೇಶನದಲ್ಲಿ ನಿರ್ಬಂಧ ಹೇರಿರುವುದು ಖಂಡನೀಯವಾಗಿದೆ. ಮಾಧ್ಯಮಗಳು ಸಾರ್ವಜನಿಕ ಹಾಗೂ ಸರ್ಕಾರದ ನಡುವಿನ ಕೊಂಡಿಯಂತೆ ಕಾರ್ಯನಿರ್ವಹಿಸುತ್ತವೆ. ಮಾಧ್ಯಮಗಳಿಗೆ ಈ ರೀತಿ ನಿರ್ಬಂಧ ಹೇರಿರುವುದು ಸರಿಯಲ್ಲ ಅಲ್ಲದೇ ಪ್ರತಿಯೊಂದು ಅಧಿವೇಶನಗಳು ಸಾರ್ವಜನಿಕರಿಗೆ ಅರ್ಥವಾಗಬೇಕೆಂದರೆ ಮಾಧ್ಯಮಗಳು ಪ್ರಮುಖ ಪಾತ್ರವಹಿಸುತ್ತವೆ. ಅಧಿವೇಶನಗಳು ಪಾರದರ್ಶಕತೆಯಿಂದ ನಡೆಯಬೇಕಿದ್ದರೆ ಅದು ಮಾಧ್ಯಮಗಳಿಗೆ ಪ್ರವೇಶಕ್ಕೆ ಅನುಮತಿ ನೀಡಿದಾಗ ಮಾತ್ರ ಆದರೆ ಇದೀಗ ರಾಜ್ಯ ಸರ್ಕಾರ ಮಾಧ್ಯಮಗಳನ್ನು ಹೊರಗಿಟ್ಟು ಅಧಿವೇಶನ ನಡೆಸುವುದು ಸರಿಯಲ್ಲ. ಕೂಡಲೇ ಮಾಧ್ಯಮಗಳ ಮೇಲೆ ಹೇರಿರುವ ನಿರ್ಬಂಧವನ್ನು ಮರಳಿ ಪಡೆಯಬೇಕೆಂದು ಆಗ್ರಹಿಸಿದರು. ಅಲ್ಲದೇ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ಹೊರಹಾಕಿದರು. ಪ್ರತಿಭಟನೆಯಲ್ಲಿ ಇಮ್ರಾನ್ ಯಲಿಗಾರ,ಮದನ ಕುಲಕರ್ಣಿ, ವಿನೋದ ಅಸೂಟಿ, ತಾರಾದೇವಿ ವಾಲಿ, ಪ್ರವೀಣ ಶಲವಡಿ ಸೇರಿದಂತೆ ಯುವ ಕಾಂಗ್ರೆಸಿನ ಹಾಗೂ ಕಾಂಗ್ರೆಸ್ ಪಕ್ಷದ ಎಲ್ಲಾ ವಿಭಾಗದ ಮುಖಂಡರು, ಚುನಾಯಿತ, ನಾಮನಿರ್ದೇಶಿತ ಪದಾಧಿಕಾರಿಗಳು, ಪಕ್ಷದ ಕಾರ್ಯಕರ್ತರು ಇದ್ದರು.

Share

About Shaikh BIG TV NEWS, Hubballi

Check Also

Featured Video Play Icon

ಎಲ್ಲಡೆ ಶಿವನ ಆರಾಧನೆ ಭಕ್ತಿಯಲ್ಲಿ ಮಿಂದೆದ್ದ ಹುಬ್ಬಳ್ಳಿಯ ಜನರು | MAHA SHIVARATRI | BIG TV NEWS

Shaikh BIG TV NEWS, Hubballi See author's posts Share

Leave a Reply

Your email address will not be published. Required fields are marked *

error: Content is protected !!