Breaking News
Hiring Reporter’s For more Information Contact Above Number 876 225 4007 . Program producer
Home / ಸುದ್ದಿ / ಕರ್ನಾಟಕ / ಕಡ್ಡಾಯವಾಗಿ ತೆರಿಗೆ ಪಾವತಿ ಮಾಡಿಸಿ; ಅಧಿಕಾರಿಗಳಿಗೆ ಡಿಸಿಎಂ ಸೂಚನೆ.

ಕಡ್ಡಾಯವಾಗಿ ತೆರಿಗೆ ಪಾವತಿ ಮಾಡಿಸಿ; ಅಧಿಕಾರಿಗಳಿಗೆ ಡಿಸಿಎಂ ಸೂಚನೆ.

ಬೆಂಗಳೂರು: ಹಲವು ವರ್ಷದಿಂದ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರು ಪಾವತಿ ಮಾಡಲು ಅಗತ್ಯ ಕ್ರಮವನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಸೂಚಿಸಿದರು.
ಮಂಗಳವಾರ ಬಿಬಿಎಂಪಿ ಹಣಕಾಸು ವಿಭಾಗಕ್ಕೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆಯನ್ನು ವೈಯಾಲಿಕಾವಲ್ ಬಿಬಿಎಂಪಿ‌ ಕಚೇರಿಯಲ್ಲಿ ನಡೆಸಿದ ಅವರು, ಈ ಸಾಲಿನಲ್ಲಿ ಈ ವರೆಗೂ 1614 ಕೋಟಿ ರೂ. ತೆರಿಗೆ ಸಂಗ್ರಹವಾಗಿದೆ. ಹೆಚ್ಚಾಗಿ ಕಮರ್ಷಿಯಲ್ ತೆರಿಗೆ ಪಾವತಿಯಾಗಬೇಕಿದೆ. ಇನ್ನೂ 2828 ಕೋಟಿ ರೂ. ಪಾವತಿ ಬಾಕಿ ಇದ್ದು, ಮುಂದಿನ ಮಾರ್ಚ್ ವರೆಗೂ ಅವಧಿ ಇದೆ. ಅಷ್ಟರೊಳಗೆ ಗುರಿಯಂತೆ ತೆರಿಗೆ ಸಂಗ್ರಹ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ‌ ನೀಡಿದರು.
ತೆರಿಗೆ ಪಾವತಿಯನ್ನು ಆನ್‌ಲೈನ್ ವ್ಯಾಪ್ತಿಗೆ ತಂದಿರುವ ಕಾರಣ ಬಾಕಿ ಉಳಿಸಿಕೊಂಡವರು ಬಾಕಿ ಪಾವತಿಸಿಯೇ ಈ ವರ್ಷದ ತೆರಿಗೆ ಕಟ್ಟಲು ಸಾಧ್ಯವಾಗಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.‌
ಬಾಕಿ ತೆರಿಗೆ ಪಾವತಿ ವಿಚಾರದಲ್ಲಿ‌ ಯಾವುದೇ ಹೊಂದಾಣಿಕೆಯಿಲ್ಲ.‌ ಎಲ್ಲ ಜೋನಲ್ ಅಧಿಕಾರಿಗಳು ಈ ಬಗ್ಗೆ ಗಂಭೀರತೆ ಹೊಂದಿ‌ ತೆರಿಗೆ ಪಾವತಿಗೆ ಜನರನ್ನು ಓಲೈಸಬೇಕು ಅಥವಾ ಇದಕ್ಕೆ ಇತರೆ ಮಾರ್ಗವಿದ್ದರೆ ಸೂಚಿಸಿ ಎಂದು ಹೇಳಿದರು.
ತೆರಿಗೆ ಪಾವತಿಯಾಗದಿದ್ದರೆ ಹೆಚ್ಚು ದಂಡ ಪ್ರಯೋಗಕ್ಕೆ ಅವಕಾಶವಿದ್ದರೆ ಪ್ರಯೋಗಿಸಿ. ಈ ಬಾರಿ ತೆರಿಗೆ ದಾಖಲೆ ನಿರ್ಮಿಸಬೇಕು ಎಂದು ಡಿಸಿಎಂ ಸೂಚನೆ ನೀಡಿದರು.
ಸಭೆಯಲ್ಲಿ ಆಯಾ ವಲಯಗಳ ಹಣಕಾಸು ಹಾಗೂ ಇತರೆ ಕಾಮಗಾರಿಗಳ ಮಾಹಿತಿಯನ್ನು ಪರಮೇಶ್ವರ್ ಪಡೆದರು. ಮೇಯರ್ ಸಂಪತ್ ರಾಜ್, ಆಯುಕ್ತ ಮಂಜುನಾಥ್ ಪ್ರಸಾದ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Share

About Shaikh BIG TV NEWS, Hubballi

Check Also

Featured Video Play Icon

ಎಲ್ಲಡೆ ಶಿವನ ಆರಾಧನೆ ಭಕ್ತಿಯಲ್ಲಿ ಮಿಂದೆದ್ದ ಹುಬ್ಬಳ್ಳಿಯ ಜನರು | MAHA SHIVARATRI | BIG TV NEWS

Shaikh BIG TV NEWS, Hubballi See author's posts Share

Leave a Reply

Your email address will not be published. Required fields are marked *

error: Content is protected !!