Breaking News
Hiring Reporter’s For more Information Contact Above Number 876 225 4007 . Program producer
Home / ಸುದ್ದಿ / ಕರ್ನಾಟಕ / ಕಾಂಗ್ರೆಸ್ ನಾಯಕರ ಮೇಲೆ ರಾಜಕೀಯ ದುರುದ್ಧೇಶದಿಂದ ಇಡಿ, ಐಟಿ ದಾಳಿ.

ಕಾಂಗ್ರೆಸ್ ನಾಯಕರ ಮೇಲೆ ರಾಜಕೀಯ ದುರುದ್ಧೇಶದಿಂದ ಇಡಿ, ಐಟಿ ದಾಳಿ.

ಮಂಡ್ಯ: ಇಡಿ, ಐಟಿ ಮತ್ತು ಸಿಬಿಐ ತನಿಖೆ ನಡೆಸಿ ಮಾನಸಿಕವಾಗಿ ಕಿರುಕುಳ ನೀಡುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಮಂಡ್ಯ ಕೃಷ್ಣರಾಜಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಮೈಸೂರು ಚನ್ನರಾಯಪಟ್ಟಣ ಮುಖ್ಯ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.ಕೆಯುಐಡಿಎಫ್ ಸಿ ಮಾಜಿಅಧ್ಯಕ್ಷ ಎಂ.ಡಿ.ಕೃಷ್ಣಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕಿಕ್ಕೇರಿ ಸುರೇಶ್, ಕೆ.ಆರ್.ರವೀಂದ್ರಬಾಬು, ಪುರಸಭೆ ಹಿರಿಯ ಸದಸ್ಯ ಡಿ.ಪ್ರೇಮಕುಮಾರ್ ಮತ್ತು ಜೆಡಿಎಸ್ ನಾಯಕ ಜಿಲ್ಲಾ ಪಂಚಾಯತ ಸದಸ್ಯ ರಾಮದಾಸ್ ನೇತೃತ್ವದಲ್ಲಿ ಜಮಾಯಿಸಿದ ನೂರಾರು ಕಾರ್ಯಕರ್ತರು ಪಟ್ಟಣದ ಎಂ.ಕೆ.ಬೊಮ್ಮೇಗೌಡ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ರಸ್ತೆ ತಡೆ ನಡೆಸಿ ಕೇಂದ್ರದ ಗೃಹಸಚಿವ ಅಮೀತ್ ಷಾ ಅವರ ಪ್ರತಿಕೃತಿಯನ್ನು ಚಪ್ಪಲಿಯಲ್ಲಿ ಹೊಡೆದು ಧಿಕ್ಕಾರದ ಘೋಷಣೆಯನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಕಾಂಗ್ರೆಸ್ ನಾಯಕರಾದ ಡಿ.ಕೆ.ಶಿವಕುಮಾರ್ ಮತ್ತು ಪಿ.ಚಿದಂಬರಂ ಅವರ ವಿರುದ್ಧ ಈಗಾಗಲೇ ಸೇಡಿನ ಕ್ರಮಕೈಗೊಂಡಿರುವ ಕೇಂದ್ರ ಸರ್ಕಾರ ಪ್ರಸ್ತುತ ಡಾ.ಜಿ.ಪರಮೇಶ್ವರ ಮತ್ತು ಮಾಜಿಸಚಿವ ಆರ್.ಎಲ್.ಜಾಲಪ್ಪ ಅವರ ಮೇಲೆ ಐಟಿ ದಾಳಿ ನಡೆಸಿ ಮಾನಸಿಕವಾಗಿ ಕಿರುಕುಳ ನೀಡಿ ಸಮಾಜದ ಮುಂದೆ ಕೆಟ್ಟ ಹೆಸರು ತರಲು ಸಂಚು ನಡೆಸಿದ್ದಾರೆ.ಆದ್ದರಿಂದ ಕೂಡಲೇ ಐಟಿ ದಾಳಿಯನ್ನು ಕೈಬಿಟ್ಟು ರಾಜ್ಯದ ಜನತೆಯ ಕ್ಷಮೆ ಯಾಚಿಸಬೇಕು ಎಂದು ಎಂ.ಡಿ.ಕೃಷ್ಣಮೂರ್ತಿ ಆಗ್ರಹಿಸಿದರು. ಮೈಸೂರು ಚನ್ನರಾಯಪಟ್ಟಣ ರಸ್ತೆ ತಡೆ ನಡೆಸಿ‌ ಪ್ರತಿಭಟನೆ ಮಾಡಿದ್ದರಿಂದ ಕೆಲ ಕಾಲ ರಸ್ತೆ ಸಂಚಾರ ಅವ್ಯವಸ್ಥೆಯಾಗಿತ್ತು. ಜನಸಾಮಾನ್ಯರು ಪರದಾಟ ನಡೆಸಬೇಕಾಯಿತು.

Share

About Site Default

Check Also

Featured Video Play Icon

ಎಲ್ಲಡೆ ಶಿವನ ಆರಾಧನೆ ಭಕ್ತಿಯಲ್ಲಿ ಮಿಂದೆದ್ದ ಹುಬ್ಬಳ್ಳಿಯ ಜನರು | MAHA SHIVARATRI | BIG TV NEWS

Shaikh BIG TV NEWS, Hubballi See author's posts Share

Leave a Reply

Your email address will not be published. Required fields are marked *

error: Content is protected !!