Breaking News
Hiring Reporter’s For more Information Contact Above Number 876 225 4007 . Program producer
Home / ಸುದ್ದಿ / ಕರ್ನಾಟಕ / ಕಾಂಗ್ರೆಸ್ ಮುಖಂಡರ ಮೇಲೆ ಐಟಿ ದಾಳಿ ಖಂಡಿಸಿ ಪ್ರತಿಭಟನೆ

ಕಾಂಗ್ರೆಸ್ ಮುಖಂಡರ ಮೇಲೆ ಐಟಿ ದಾಳಿ ಖಂಡಿಸಿ ಪ್ರತಿಭಟನೆ

ಹುಬ್ಬಳ್ಳಿ:-ಕಾಂಗ್ರೆಸ್ ಮುಖಂಡ ಪರಮೇಶ್ವರ ಅವರ ಆಸ್ತಿಗಳ ಮೇಲೆ ಐಟಿ ದಾಳಿ ಹಾಗೂ ಅವರ ಪಿಎ ರಮೇಶ ಆತ್ಮಹತ್ಯೆಯನ್ನು ಖಂಡಿಸಿ ಹು-ಧಾ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಂಬೇಡ್ಕರ್ ವೃತ್ತದ ಬಳಿ ಪ್ರತಿಭಟನೆ ನಡೆಸಿದರು. ಬಿಜೆಪಿ ಸರ್ಕಾರ ದ್ವೇಷದ ರಾಜಕಾರಣ ಮಾಡುವುದಿಲ್ಲ ಎಂದು ಹೇಳುತ್ತಲೇ, ದ್ವೇಷದ ರಾಜಕಾರಣ ಮಾಡುತ್ತಿದ್ದು, ಬಿಜೆಪಿ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ಐಟಿ ಅಧಿಕಾರಿಗಳ ಮೇಲೆ ಒತ್ತಡ ಹಾಕುವ ದಾಳಿ ಮಾಡಿಸುತ್ತಿದೆ. ಅಲ್ಲದೇ ಕಾಂಗ್ರೆಸ್ ಮುಖಂಡರನ್ನು ಟಾರ್ಗೆಟ್ ಮಾಡಿ ಐಟಿ ದಾಳಿಗಳು ನಡೆಯುತ್ತಿದ್ದು, ಕಾಂಗ್ರೆಸ್ ನಾಯಕರ ನೈತಿಕತೆಯನ್ನು ಕುಗ್ಗಿಸುವ ಪ್ರಯತ್ನ ಇದಾಗಿದೆ. ಕೂಡಲೇ ಬಿಜೆಪಿ ದ್ವೇಷದ ರಾಜಕಾರಣವನ್ನು ಬಿಡಬೇಕೆಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ , ಪದಾಧಿಕಾರಿಗಳು ಸೇರಿದಂತೆ ಮುಂತಾದವರು ಇದ್ದರು.

Share

About Shaikh BIG TV NEWS, Hubballi

Check Also

Featured Video Play Icon

ಎಲ್ಲಡೆ ಶಿವನ ಆರಾಧನೆ ಭಕ್ತಿಯಲ್ಲಿ ಮಿಂದೆದ್ದ ಹುಬ್ಬಳ್ಳಿಯ ಜನರು | MAHA SHIVARATRI | BIG TV NEWS

Shaikh BIG TV NEWS, Hubballi See author's posts Share

Leave a Reply

Your email address will not be published. Required fields are marked *

error: Content is protected !!