Breaking News
Hiring Reporter’s For more Information Contact Above Number 876 225 4007 . Program producer
Home / ಸುದ್ದಿ / ಕಾರು-ಲಾರಿ ನಡುವೆ ಭೀಕರ ಅಪಘಾತ; ಐವರ ದುರ್ಮರಣ.

ಕಾರು-ಲಾರಿ ನಡುವೆ ಭೀಕರ ಅಪಘಾತ; ಐವರ ದುರ್ಮರಣ.

Spread the love

ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಐವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ನವಲಗುಂದ ಬಳಿ ನಡೆದಿದೆ. ಘಟನೆಯಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಇಬ್ಬರು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮತ್ತೋರ್ವನ ಸ್ಥಿತಿ ಚಿಂತಾಜನಕವಾಗಿದೆ. ಮೃತರನ್ನು ರವಿ ಹಂಡಿ, ಲೇಖಾಶ್ರೀ ಹಂಡಿ, ಜವೀನ್ ಕುಮಾರ್ ಹಂಡಿ ಹಾಗೂ ಇಬ್ಬರು ಮಕ್ಕಳಾದ ಶರಣ್ ಮತ್ತು ವರ್ಷ ಅಂತ ಗುರುತಿಸಲಾಗಿದೆ. ಮೃತರು ಬಾಗಲಕೋಟೆಯ ಕಾಂಗ್ರೆಸ್​ ಮುಖಂಡ ಆನಂದ ಜಿಗಜಿಣಗಿಯವರ ಕುಟುಂಬದವರು ಎಂದು ತಿಳಿದುಬಂದಿದೆ.ಹುಬ್ಬಳ್ಳಿಯಿಂದ ಬಾಗಲಕೋಟೆಯತ್ತ ಹೊರಟಿದ್ದ ಕಾರು, ಎದುರಿನಿಂದ ಬಂದ ಆಂಧ್ರ ಮೂಲದ ಲಾರಿಗೆ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ನವಲಗುಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

Check Also

ಹುಬ್ಬಳ್ಳಿಯಲ್ಲಿ ಮೀತಿಮಿರಿದ ಕಳ್ಳರ ಹಾವಳಿ: ಗಾಜು ಒಡೆದು ಉಪಕರಣ ದೋಚುವ ಕಳ್ಳರು

Spread the loveಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಕಳ್ಳತನ ಪ್ರಕರಣಗಳು ದಿನದಿಂದ‌ ದಿನಕ್ಕೆ ಹೆಚ್ಚಾಗುತ್ತಿದ್ದು,ಇಷ್ಟು ದಿನ ಸರಗಳ್ಳತನ, ಬೈಕ್ ಕಳ್ಳತನ, ಕಾರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!