Breaking News
Hiring Reporter’s For more Information Contact Above Number 876 225 4007 . Program producer
Home / ಸುದ್ದಿ / ಕಾರ್ಮಿಕರ ಕಾನೂನು ತಿದ್ದುಪಡಿ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ

ಕಾರ್ಮಿಕರ ಕಾನೂನು ತಿದ್ದುಪಡಿ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ

Spread the love

ಹುಬ್ಬಳ್ಳಿ:- ವಿವಿಧ ಕಾರ್ಮಿಕರ ಕಾನೂನುಗಳನ್ನು ತಿದ್ದುಪಡಿ ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘ ನಗರದಲ್ಲಿಂದು ಪ್ರತಿಭಟನೆ ಪ್ರತಿಭಟನೆ ಮಾಡಿದರು. ನಗರದ ಸ್ಟೇಷನ್ ರಸ್ತೆಯಿಂದ ನೂರಾರು ಕಟ್ಡಡ ಕಾರ್ಮಿಕರು ಸಿದ್ದಪ್ಪ ಕಂಬಳಿ ಮಾರ್ಗವಾಗಿ, ಸಂಗೊಳ್ಳಿ ವೃತ್ತದ ಮೂಲಕ ತಹಶಿಲ್ದಾರರ ಕಚೇರಿ ವರೆಗೆ ಬೃಹತ್ ಪ್ರತಿಭಟನಾ ರ್ಯಾಲಿ ಮಾಡಿದರು. ಈ ವೇಳೆ ಕೇಂದ್ರ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ತಮ್ಮ ಆಕ್ರೋಶ ಹೊರ ಹಾಕಿದರು. ಈ ವೇಳೆ ತಹಶಿಲ್ದಾರರ ಮೂಲಕ ಪ್ರಧಾನಿಮಂತ್ರಿಗೆ ಮನವಿ ಸಲ್ಲಿಸಿದ ಅವರು, ಕೇಂದ್ರ ಸರಕಾರದ ಉದ್ದೇಶಿತ ಸಾಮಾಜಿಕ ಸುರಕ್ಷಾ (ಸಂಹಿತೆ) ಕಲ್ಯಾಣ ಮಸೂದೆ – 2019 ನ್ನು ಕೈ ಬಿಡುವಂತೆ, ಹಾಗೂ ಕಟ್ಟಡ ಕಾರ್ಮಿಕ ಕಾನೂನು 1996, ಸೆಸ್ ಕಾನೂನು ಮತ್ತು ಕಟ್ಟಡ ಕಾರ್ಮಿಕ ಮಂಡಳಿ ಹಾಗೂ ಕಾರ್ಮಿಕರ ಬದುಕನ್ನು ರಕ್ಷಿಸಲು ಒತ್ತಾಯಿಸುವಂತೆ ಒತ್ತಾಯಿಸಿದರು. ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಎ.ಎಸ್.ಪೀರಜಾದೆ, ಜಿಲ್ಲಾ ಮುಖಂಡ ಬಿ.ಎ.ಮುದೋಳ, ಜಿಲ್ಲಾ ಸಂಚಾಲಕ ಮಹೇಶ ಪತ್ತಾರ, ಜಿಲ್ಲಾ ಅಧ್ಯಕ್ಷ ಎಮ್.ಎಮ್.ಶೇಖ ಸೇರಿದಂತೆ ನೂರಾರು ಕಟ್ಟಡ ಕಾರ್ಮಿಕರು ಇದ್ದರು.

Check Also

ಡಿ ಬಾಸ್ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ

Spread the loveಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಚಿತ್ರತಂಡದಿಂದ ಮತ್ತೊಂದು ಸಿಹಿ ಸುದ್ದಿ ಅಭಿಮಾನಿಗಳಿಗೆ ಸಿಕ್ಕಿದೆ. ‘ರಾಬರ್ಟ್’ ಬಿಡುಗಡೆಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!