Breaking News
Hiring Reporter’s For more Information Contact Above Number 876 225 4007 . Program producer
Home / ಕ್ರೀಡೆ / ಇತರ ಕ್ರೀಡೆಗಳು / ಕೆ.ಪಿ.ಎಲ್.‌ಮ್ಯಾಚ್ ಫಿಕ್ಸಿಂಗ್: ಇಬ್ಬರು ಆಟಗಾರರ ಬಂಧನ.

ಕೆ.ಪಿ.ಎಲ್.‌ಮ್ಯಾಚ್ ಫಿಕ್ಸಿಂಗ್: ಇಬ್ಬರು ಆಟಗಾರರ ಬಂಧನ.

ಬೆಂಗಳೂರು: ಕರ್ನಾಟಕ ಪ್ರೀಮಿಯರ್ ಲೀಗ್(ಕೆಪಿಎಲ್) ಪಂದ್ಯಾವಳಿಯ ಮ್ಯಾಚ್ ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದ ಕರ್ನಾಟಕ ತಂಡದ 2 ಆಟಗಾರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
2019ರ ಕೆಪಿಎಲ್ ಫೈನಲ್ ಪಂದ್ಯದಲ್ಲಿ ಮ್ಯಾಚ್ ಫಿಕ್ಸಿಂಗ್ ನಡೆದಿತ್ತು ಎಂಬ ಆರೋಪವಿದೆ. ಈ ಹಿನ್ನೆಲೆ ತನಿಖೆ ತೀವ್ರಗೊಳಿಸಿದ ಸಿಸಿಬಿ ಪೊಲೀಸರ ಬಲೆಗೆ ಬಳ್ಳಾರಿ ಟಸ್ಕರ್ಸ್ ತಂಡದ ಇಬ್ಬರು ಆಟಗಾರರು ಸಿಕ್ಕಿಬಿದ್ದಿದ್ದಾರೆ.
ಬಳ್ಳಾರಿ ಟಸ್ಕರ್ಸ್ ತಂಡದ ನಾಯಕ ಸಿಎಂ ಗೌತಮ್ ಹಾಗೂ ಅಬ್ರರ್ ಖಾಜಿ ಬಂಧನಕ್ಕೊಳಗಾದ ಆಟಗಾರರು. ಪಂದ್ಯದಲ್ಲಿ ನಿಧಾನಗತಿಯ ಬ್ಯಾಟಿಂಗ್ ಮಾಡುವುದಾಗಿ ಆಟಗಾರರು 20 ಲಕ್ಷ ರೂ. ಹಣ ಪಡೆದಿದ್ದರು. ಬುಕ್ಕಿಗಳ ಬಳಿ ಹಣ ಪಡೆದು ಇಬ್ಬರು ಆಟಗಾರರು ನಿಧಾನಗತಿಯ ಬ್ಯಾಟಿಂಗ್ ನಡೆಸಿದ್ದರು ಎಂಬ ಆರೋಪ ಕೇಳಿಬಂದಿತ್ತು.
ಸಿಎಂ ಗೌತಮ್ ಅವರು ಕರ್ನಾಟಕದ ಪರವಾಗಿ ರಣಜಿ ಪಂದ್ಯಗಳಲ್ಲಿ, ಐಪಿಎಲ್‌ನಲ್ಲಿ ಮುಂಬೈ, ಆರ್‌ಸಿಬಿ ಹಾಗೂ ಡೆಲ್ಲಿ ಡೇರ್ ಡೆವಿಲ್ಸ್ ಪರ ಆಟವಾಡಿದ್ದರು. ಇತ್ತ ಅಬ್ರರ್ ಖಾಜಿ ಕೂಡ ಕರ್ನಾಟಕ ತಂಡದ ರಣಜಿ ಆಟಗಾರರಾಗಿದ್ದಾರೆ. ಸದ್ಯ ಇಬ್ಬರು ಆಟಗಾರರನ್ನು ಬಂಧಿಸಿದ ಸಿಸಿಬಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಆಗಸ್ಟ್ 31ರಂದು ಮೈಸೂರಿನಲ್ಲಿ ಬಳ್ಳಾರಿ ಟಸ್ಕರ್ಸ್ ಮತ್ತು ಹುಬ್ಬಳ್ಳಿ ಟೈಗರ್ಸ್ ನಡುವೆ ಕೆಪಿಎಲ್ ಫೈನಲ್ ಪಂದ್ಯ ನಡೆದಿತ್ತು.

Share

About ramu BIG TV NEWS, Kolar

Check Also

ಟ್ರಂಪ್ ನೀತಿ ರದ್ದುಗೊಳಿಸಿದ ಜೋ ಬೈಡನ್.

ವಾಷಿಂಗ್ಟನ್: ರಾಷ್ಟ್ರೀಯ ವಲಸೆ ಕಾನೂನು ನ್ಯಾಯಯುತ ಹಾಗೂ ದಕ್ಷವಾಗಿ ಕಾರ್ಯನಿರ್ವಹಿಸುತ್ತಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವ ಭಾಗವಾಗಿ ಅಮೆರಿಕ ಅಧ್ಯಕ್ಷ ಜೋ ಬೈಡನ್, ಡೊನಾಲ್ಡ್ …

Leave a Reply

Your email address will not be published. Required fields are marked *

error: Content is protected !!