Breaking News
Hiring Reporter’s For more Information Contact Above Number 876 225 4007 . Program producer
Home / ಕ್ರೀಡೆ / ಗಂಗೂಲಿ ಭೇಟಿ ಮಾಡಿದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ.

ಗಂಗೂಲಿ ಭೇಟಿ ಮಾಡಿದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ.

 

ಮುಂಬೈ: ಟೀಂ ಇಂಡಿಯಾ ಮಾಜಿ ನಾಯಕ ಸೌರವ್​ ಗಂಗೂಲಿ ಬಿಸಿಸಿಐ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಟೀಂ ಇಂಡಿಯಾ ನಾಯಕ ವಿರಾಟ್​ ಮತ್ತು ರೋಹಿತ್ ಶರ್ಮಾ, ಗಂಗೂಲಿ ಅವರನ್ನ ಭೇಟಿ ಮಾಡಿದ್ದಾರೆ.
ಭಾರತ ಮತ್ತು ಬಾಂಗ್ಲಾದೇಶ ವಿರುದ್ಧ ಟಿ-20 ಮತ್ತು ಟೆಸ್ಟ್​ ಸರಣಿಗೆ ಆಟಗಾರರನ್ನ ಆಯ್ಕೆ ಮಾಡುವ ಸಲುವಾಗಿ ಸೇರಿದ್ದ ಸಭೆಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ​ ಮತ್ತು ಆರಂಭಿಕ ಆಟಗಾರ ರೋಹಿತ್ ಶರ್ಮಾ ಹಾಜರಾಗಿದ್ದರು.ಸಭೆಯಲ್ಲಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ಆಯ್ಕೆ ಸಮಿತಿ ಅಧ್ಯಕ್ಷ ಎಂಎಸ್​ಕೆ ಪ್ರಸಾದ್, ಬಿಸಿಸಿಐ ನೂತನ ಕಾರ್ಯದರ್ಶಿ ಜೈ ಶಾ, ಟೀಂ ಇಂಡಿಯಾ ನಾಯಕ ವಿರಾಟ್​ ಕೊಹ್ಲಿ ಮತ್ತು ರೋಹಿತ್​ ಶರ್ಮಾ ಭಾಗಿಯಾಗಿದ್ದರು.ಈಗಾಗಲೇ ಬಾಂಗ್ಲಾ ವಿರುದ್ಧದ ಟಿ-20 ಮತ್ತು ಟೆಸ್ಟ್​ ಸರಣಿಗೆ 15 ಆಟಗಾರರ ತಂಡವನ್ನ ಬಿಸಿಸಿಐ ಘೋಷಣೆ ಮಾಡಿದೆ. ಟಿ-20 ಸರಣಿಯಿಂದ ವಿರಾಟ್​ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದ್ದು, ರೋಹಿತ್​ ಶರ್ಮಾಗೆ ನಾಯಕನ ಸ್ಥಾನ ನೀಡಲಾಗಿದೆ.

Share

About Vijayalakshmi

Check Also

ಅಂತರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ ಕ್ರಿಕೆಟಿಗ.

ರಾವಲ್ಪಿಂಡಿ : ಪಾಕಿಸ್ತಾನದ ವಿರುದ್ಧ ರಾವಲ್ಪಿಂಡಿಯಲ್ಲಿ ಟಿ20 ಸರಣಿ ಮುಗಿಯುತ್ತಿದ್ದಂತೆ ಜಿಂಬಾಬ್ವೆ ಮಾಜಿ ನಾಯಕ ಹಾಗೂ ಅನುಭವಿ ಆಲ್​ರೌಂಡರ್ ಎಲ್ಟನ್ ಚಿಗುಂಬುರ …

Leave a Reply

Your email address will not be published. Required fields are marked *

error: Content is protected !!