Breaking News
Hiring Reporter’s For more Information Contact Above Number 876 225 4007 . Program producer
Home / ಸುದ್ದಿ / ಕರ್ನಾಟಕ / ಗಾಂಧಿಜಿ ತತ್ವಾದರ್ಶ ಪ್ರಚಾರಕ್ಕಾಗಿ ಚಿಕ್ಕೋಡಿ ಲೋಕಸಭಾ ಅಭ್ಯರ್ಥಿ ಜೊಲ್ಲೆ ಪಾದಯಾತ್ರೆ.

ಗಾಂಧಿಜಿ ತತ್ವಾದರ್ಶ ಪ್ರಚಾರಕ್ಕಾಗಿ ಚಿಕ್ಕೋಡಿ ಲೋಕಸಭಾ ಅಭ್ಯರ್ಥಿ ಜೊಲ್ಲೆ ಪಾದಯಾತ್ರೆ.

ಬೆಳಗಾವಿ: ಮಹಾತ್ಮಾ ಗಾಂಧಿಯವರ 150 ನೇ ವರ್ಷಾಚರಣೆ ಅಂಗವಾಗಿ. ಎಲ್ಲಾ ಬಿಜೆಪಿ ಲೋಕಸಭಾ ಕ್ಷೇತ್ರದಲ್ಲಿ ಮಹಾತ್ಮಾ ಗಾಂಧಿಜೀಯವರ ತತ್ವ ಆದರ್ಶ ಪ್ರಚಾರ ಮಾಡಲು ಪಾದಯಾತ್ರೆ ಹಮ್ಮಿಕೊಂಡಿದ್ದು. ಚಿಕ್ಕೋಡಿ ಲೋಕಸಭಾ ಅಭ್ಯರ್ಥಿ ಅಣ್ಣಾಸಾಹೇಬ್ ಜೊಲ್ಲೆ ಇಂದು ಹುದಲಿ ಗ್ರಾಮದಲ್ಲಿ ಪಾದಯಾತ್ರೆ ಪ್ರಾರಂಭಿಸಿದರು.ಮಹಾತ್ಮಾ ಗಾಂಧಿಜಿಯವರು ಬೆಳಗಾವಿಗೆ ಭೇಟಿ ನೀಡೊದ್ದ ಸಂದರ್ಭದಲ್ಲಿ ಜಿಲ್ಲೆಯ ಹುದಲಿ ಗ್ರಾಮಕ್ಕೆ ಭೇಟಿ ನೀಡಿ ಇಲ್ಲಿ ಏಳು ದಿನಗಳ ಕಾಲ ವಾಸ್ತವ್ಯ ಹೂಡಿದ್ದರು. ಗಾಂಧಿಜಿಯವರ 150 ನೇ ವರ್ಷಾಚರಣೆ ಅಂಗವಾಗಿ ಬಿಜೆಪಿ ಎಲ್ಲಾ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸುಮಾರು 150 ಕಿ.ಮೀ ಪಾದಯಾತ್ರೆ ಮಾಡುತ್ತಿದ್ದು ಇದರಂತೆ ಇಂದು ಸಂಸದ ಅಣ್ಣಾಸಾಹೇಬ್ ಜೊಲ್ಲೆ ಹುದಲಿ ಗ್ರಾಮದಿಂದ ಪಾದಯಾತ್ರೆ ಹಮ್ಮಿಕೊಂಡರು.ಈ ಕಾರ್ಯಕ್ರಮದ ಕುರಿತು ಮಾತನಾಡಿದ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ. ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಗಾಂಧಿ ಜಯಂತಿ ನಿಮಿತ್ತ ಜನಾಂಧೋಲ ಆಗುವ ನಿಟ್ಟಿನಲ್ಲಿ ಎಲ್ಲ ಸಂಸದರು ಪಾದಯಾತ್ರೆ ನಡೆಸಬೇಕೆಂದು ಸೂಚನೆ ನೀಡಿದ್ದಾರೆ. ಕೇಂದ್ರದ ನಾಯಕರ ಸೂಚನೆ ಮೇರೆಗೆ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ 150 ಕಿ.ಮಿ ಗಿಂತಲೂ ಜಾಸ್ತಿ ಪಾದಯಾತ್ರೆ ಮಾಡಲಾಗುವುದು ಎಂದರು.

Share

About Site Default

Check Also

Featured Video Play Icon

ಎಲ್ಲಡೆ ಶಿವನ ಆರಾಧನೆ ಭಕ್ತಿಯಲ್ಲಿ ಮಿಂದೆದ್ದ ಹುಬ್ಬಳ್ಳಿಯ ಜನರು | MAHA SHIVARATRI | BIG TV NEWS

Shaikh BIG TV NEWS, Hubballi See author's posts Share

Leave a Reply

Your email address will not be published. Required fields are marked *

error: Content is protected !!