Breaking News
Hiring Reporter’s For more Information Contact Above Number 876 225 4007 . Program producer
Home / ಕ್ರೀಡೆ / ಕ್ರಿಕೆಟ್ / ಗೆಲುವಿನ ನಾಗಾಲೋಟದತ್ತ ಟೀಂ ಇಂಡಿಯಾ.

ಗೆಲುವಿನ ನಾಗಾಲೋಟದತ್ತ ಟೀಂ ಇಂಡಿಯಾ.

ವಿಶಾಖಪಟ್ಟಣಂ: ಟೀಂ ಇಂಡಿಯಾ ಮೊದಲ ಟೆಸ್ಟ್​​ನಲ್ಲಿ ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧ 203 ರನ್​ಗಳ ಭರ್ಜರಿ ಗೆಲುವು ದಾಖಲಿಸಿದ್ದು, ಇದರ ಜೊತೆಗೆ ಟೆಸ್ಟ್ ಚಾಂಪಿಯನ್​ಶಿಪ್​ ಅಂಕಪಟ್ಟಿಯಲ್ಲಿ ಭಾರಿ ಮುನ್ನಡೆ ಕಾಯ್ದುಕೊಂಡಿದೆ.ವಿಶಾಖಪಟ್ಟಣಂನ ವೈ ಎಸ್‌ ರಾಜಶೇಖರ ರೆಡ್ಡಿ ಮೈದಾನದಲ್ಲಿ ನಡೆದ ಪ್ರಥಮ ಟೆಸ್ಟ್ ಮ್ಯಾಚ್​ನಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್​ನಲ್ಲಿ ಪಾರಮ್ಯ ಮೆರೆಯುವ ಮೂಲಕ ಗೆಲುವಿನ ಓಟ ಆರಂಭಿಸಿದೆ.ಮೊದಲ ಟೆಸ್ಟ್​ನಲ್ಲಿ ಹೀಗೊಂದು ಅಪರೂಪದ ದಾಖಲೆ!ಟೆಸ್ಟ್ ಚಾಂಪಿಯನ್​ಶಿಪ್​ ಆರಂಭದಿಂದಲೂ ಪ್ರಥಮ ಸ್ಥಾನ ಕಾಯ್ದುಕೊಂಡಿರುವ ಟೀಂ ಇಂಡಿಯಾ ಸದ್ಯ ಮೂರು ಪಂದ್ಯಗಳಲ್ಲಿ ಮೂರನ್ನೂ ಗೆದ್ದು 160 ಅಂಕ ತನ್ನದಾಗಿಸಿಕೊಂಡಿದೆ. ನಂತರದ ಸ್ಥಾನದಲ್ಲಿರುವ ನ್ಯೂಜಿಲ್ಯಾಂಡ್ ಎರಡು ಪಂದ್ಯಗಳಲ್ಲಿ ಒಂದು ಗೆಲುವು ಹಾಗೂ ಒಂದು ಸೋಲಿನೊಂದಿಗೆ 60 ಅಂಕ ಪಡೆದಿದೆ. ಇಷ್ಟೇ ಪ್ರಮಾಣದ ಸೋಲು-ಗೆಲುವು ಹೊಂದಿರುವ ಶ್ರೀಲಂಕಾ ಸಹ 60 ಅಂಕದೊಂದಿಗೆ ಜಂಟಿಯಾಗಿ ಎರಡನೇ ಸ್ಥಾನದಲ್ಲಿದೆ.

Share

About Shaikh BIG TV NEWS, Hubballi

Check Also

ಅಂತರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ ಕ್ರಿಕೆಟಿಗ.

ರಾವಲ್ಪಿಂಡಿ : ಪಾಕಿಸ್ತಾನದ ವಿರುದ್ಧ ರಾವಲ್ಪಿಂಡಿಯಲ್ಲಿ ಟಿ20 ಸರಣಿ ಮುಗಿಯುತ್ತಿದ್ದಂತೆ ಜಿಂಬಾಬ್ವೆ ಮಾಜಿ ನಾಯಕ ಹಾಗೂ ಅನುಭವಿ ಆಲ್​ರೌಂಡರ್ ಎಲ್ಟನ್ ಚಿಗುಂಬುರ …

Leave a Reply

Your email address will not be published. Required fields are marked *

error: Content is protected !!