Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಟಿಪ್ಪರ್ ಬೈಕ್ ಗಳ ನಡುವೆ ಸರಣಿ ಅಪಘಾತ : ಇಬ್ಬರು ಸಾವು

ಟಿಪ್ಪರ್ ಬೈಕ್ ಗಳ ನಡುವೆ ಸರಣಿ ಅಪಘಾತ : ಇಬ್ಬರು ಸಾವು

ಮಂಡ್ಯ:- ಎರಡು ಬೈಕ್ ಗಳು ಮತ್ತು ಟಿಪ್ಪರ್ ನಡುವೆ ಸರಣಿ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟ ಘಟನೆ ಮಂಡ್ಯದ ಮುರುಕನಹಳ್ಳಿ ಬಳಿ ನಡೆದ ಘಟನೆ.

ಪುರ ಗ್ರಾಮದ ಸುಲೋಚನ(26) ಮತ್ತು ಹೊನ್ನೇನಹಳ್ಳಿ ಗ್ರಾಮದ ಕುಮಾರ (26) ಮೃತ ವ್ಯಕ್ತಿಗಳಾಗಿದ್ದು, ಸುಲೋಚನ ತಮ್ಮ ಗಂಡ ಕೃಷ್ಣೇಗೌಡರ ಜೊತೆಗೆ ಮರಡಹಳ್ಳಿ ಗ್ರಾಮದಿಂದ ತಮ್ಮ ಊರಿಗೆ ತೆರಳುತ್ತಿದ್ದ ವೇಳೆ ಎದುರುಗಡೆಯಿಂದ ಬರುತ್ತಿದ್ದ ಬೈಕಿನ ನಡುವೆ ಮುಖಾಮುಕಿ ಡಿಕ್ಕಿ ಸಂಭವಿಸಿದ್ದೆ. ಈ ವೇಳೆ ಬೈಕ್ ನಲ್ಲಿ ಹಿಂದೆ ಕುಳಿತಿದ್ದ ಸುಲೋಚನ ರಸ್ತೆಗೆ ಬಿದ್ದಾಗ ಹಿಂಬದಿ ಬರುತ್ತಿದ್ದ ಟಿಪ್ಪರ್ ಬೈಕ್ ಮೇಲೆ ಹರಿದು ಹರಿದ ಪರಿಣಾಮ ಸುಲೋಚನ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇನ್ನೂ ಮತ್ತೊಂದು ಬೈಕಿನಲ್ಲಿದ್ದ ಕುಮಾರ ಎಂಬಾತನಿಗೆ ಗಂಭೀರ ಸ್ವರೂಪದ ಪೆಟ್ಟಾಗಿ ಮೈಸೂರಿಗೆ ಚಿಕಿತ್ಸೆಗೆ ಕರೆದೊಯ್ಯುವ ವೇಳೆ ಮಾರ್ಗ ಮದ್ಯದಲ್ಲಿ ಮೃತಪಟ್ಟಿದ್ದಾರೆ. ಅಪಘಾತದ ಸ್ಥಳಕ್ಕೆ ಸಿಪಿಐ ಸುಧಾಕರ್ ಭೇಟಿ ನೀಡಿ ಪರಿಶೀಲಿಸದ್ದು, ಈ ಕುರಿತು ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share

About solaragoppa

Check Also

ಡಿಕೆಶಿ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. …

Leave a Reply

Your email address will not be published. Required fields are marked *

error: Content is protected !!