Hiring Reporter’s For more Information Contact Above Number 876 225 4007 . Program producer
Home / ಸುದ್ದಿ / ಡಿಕೆಶಿ ಬಂಧನ ಡಿಸಿ ಕಚೇರಿ ಎದುರು ಕಾಂಗ್ರೆಸ್ ಪ್ರತಿಭಟನೆ

ಡಿಕೆಶಿ ಬಂಧನ ಡಿಸಿ ಕಚೇರಿ ಎದುರು ಕಾಂಗ್ರೆಸ್ ಪ್ರತಿಭಟನೆ

Spread the love

ಧಾರವಾಡ :ಮಾಜಿ ಸಚಿವ ಡಿ.ಕೆ ಶಿವಕುಮಾರ್ ಬಂಧನ ಖಂಡಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಹುಬ್ಬಳ್ಳಿ ಧಾರವಾಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರದಲ್ಲಿರುವ ಬಿಜೆಪಿ ಸರಕಾರ ರಾಜಕೀಯ ಜಿದ್ದಿಗಾಗಿ ಶಿವಕುಮಾರ್ ಅವರನ್ನು ಬಂಧಿಸಿದೆ. ಹೀಗಾಗಿ ‌ಕೂಡಲೇ ಡಿಕೆಶಿ ಅವರನ್ನು ಬಿಡುಗಡೆ ಮಾಡಬೇಕೆಂದು ಕೈ ಕಾರ್ಯಕರ್ತರು ಒತ್ತಾಯಿಸಿದರು.
ಈ ವೇಳೆ ಕಾಂಗ್ರೆಸ್ ಮುಖಂಡ ರಾಬರ್ಟ್‌ ದದ್ದಾಪುರಿ ಮಾತನಾಡಿ ರಾಜಕೀಯ ಜಿದ್ದಿಗಾಗಿ ಕೇಂದ್ರದಲ್ಲಿರುವ ಬಿಜೆಪಿ ಸರಕಾರ ಶಿವಕುಮಾರ್ ಅವರನ್ನು ಬಂಧಿಸಿದೆ. ಅವರನ್ನು ಬಿಡುಗಡೆ ಮಾಡುವ ವರೆಗೂ ಪ್ರತಿಭಟನೆ ಮಾಡಲಾಗುತ್ತದೆ ಎಂದರು.
ಡಿ.ಸಿ.ಸಿ ಅದ್ಯಕ್ಷ ಅಲ್ತಾಪ ಹಳ್ಳೂರ, ಇಸ್ಮಾಯಿಲ್ ತಮಟಗಾರ ,ರಾಬರ್ಟ್ ದದ್ದಾಪುರಿ, ರಾಣಿ ಚೆನ್ನಮ್ಮ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಮಲಕಾರಿ ಹಾಗೂ ಸತಿಶ್ ಮೆಹೆರವಾಡೆ, ನೂರಾರು ಕಾರ್ಯಕರ್ತರ ಹಾಗೂ ಅಭಿಮಾನಿಗಳು ಇದ್ದರು.

Check Also

ಪಡಿತರ ಚೀಟಿದಾರರಿಗೆ ಆಹಾರ ಖಾತೆ ಸಚಿವರಿಂದ ಮತ್ತೊಂದು ಗುಡ್ ನ್ಯೂಸ್

Spread the loveಚಿತ್ರದುರ್ಗ: ಕೇಂದ್ರ ಮತ್ತು ರಾಜ್ಯ ಸರ್ಕಾರದ ವತಿಯಿಂದ ವಿತರಿಸುತ್ತಿರುವ ಪಡಿತರವನ್ನು ಸರಿಯಾದ ಸಮಯಕ್ಕೆ ಜನರಿಗೆ ವಿತರಿಸಲು ಅಗತ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!