Breaking News
Hiring Reporter’s For more Information Contact Above Number 876 225 4007 . Program producer
Home / ಸುದ್ದಿ / ಕರ್ನಾಟಕ / ತಾಲೂಕು ಮಟ್ಟದ ಅಧಿಕಾರಿಗಳ ಸಮಾಲೋಚನಾ ಸಭೆ.

ತಾಲೂಕು ಮಟ್ಟದ ಅಧಿಕಾರಿಗಳ ಸಮಾಲೋಚನಾ ಸಭೆ.

ಮಂಡ್ಯ: ಪಟ್ಟಣದ ನಾಲ್ವಡಿ ಕೃಷ್ಣರಾಜ ಒಡೆಯರ್ ಕೃಷ್ಣರಾಜಪೇಟೆಯ ಪಟ್ಟಣದಲ್ಲಿಅನುಷ್ಠಾನ ಕುರಿತು ಮಂಡ್ಯಲೋಕಸಭಾ ಸದಸ್ಯೆ ಸುಮಲತಾ ಅಂಬರೀಶ್ ಮಾಹಿತಿ ಪಡೆದು ಜನಪರವಾಗಿ ಕೆಲಸ ಮಾಡುವಂತೆ ನಿರ್ದೇಶನ ನೀಡಿದರು.ತಾಲ್ಲೂಕಿನ ಜನಸಾಮಾನ್ಯರ ಕುಂದುಕೊರತೆಗಳನ್ನು ಆಲಿಸಿ ಮನವಿ ಸ್ವೀಕರಿಸಿದ ಸುಮಲತಾ ಅಧಿಕಾರಿಗಳು ಜನಸಾಮಾನ್ಯರ ನೋವಿಗೆ ಧನಿಯಾಗಬೇಕು.ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸಿ ಪರಿಹಾರವನ್ನು ದೊರಕಿಸಿಕೊಡಬೇಕು.ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಫಲವು ಗ್ರಾಮೀಣ ಜನರಿಗೆ ತಲುಪುವ ದಿಕ್ಕಿನಲ್ಲಿ ಬದ್ಧತೆಯಿಂದ ಕೆಲಸ ಮಾಡಬೇಕು ಎಂದು ಸಂಸದೆ ಸುಮಲತಾ ಮನವಿ ಮಾಡಿದರು.ನಾನು ಜಿಲ್ಲೆಯ ಜನತೆಯ ಸ್ವಾಭಿಮಾನದ ಪ್ರತಿನಿಧಿಯಾಗಿದ್ದೇನೆ. ರಚನಾತ್ಮಕ ಟೀಕೆಗಳನ್ನು ಸ್ವಾಗತಿಸುತ್ತೇನೆ. ಜಿಲ್ಲೆಯ ಅಭಿವೃದ್ಧಿಯು ನನ್ನ ಮೂಲ ಮಂತ್ರವಾಗಿದೆ.ನಾನು ಯಾವುದೇ ಪಕ್ಷವನ್ನು ಸೇರಲು ಅರ್ಜಿ ಸಲ್ಲಿಸಿಲ್ಲ, ಬಿಜೆಪಿ ಪಕ್ಷದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸದೇ ಬಹಿರಂಗವಾಗಿ ನನ್ನನ್ನು ಬೆಂಬಲಿಸಿದರು.ಆದ್ದರಿಂದ ಅವರ ಆಹ್ವಾನದ ಮೇರೆಗೆ ಮಂಡ್ಯದಲ್ಲಿ ಬಿಜೆಪಿ ಪಕ್ಷದ ಕೋರ್ ಕಮಿಟಿಯ ಸಭೆಯಲ್ಲಿ ಭಾಗವಹಿಸಿದ್ದೇನೆ.ಇದರಲ್ಲಿ ವಿಶೇಷ ಅರ್ಥವನ್ನು ಹುಡುಕುವುದು ಬೇಡ ಎಂದು ಸುಮಲತಾ ಮನವಿ ಮಾಡಿದರು.ಸಭೆಯಲ್ಲಿ ಅನರ್ಹ ಶಾಸಕ ಡಾ.ನಾರಾಯಣಗೌಡ, ತಾ.ಪಂ ಅಧ್ಯಕ್ಷೆ ಜಯಲಕ್ಷ್ಮೀ ಸ್ವಾಮಿನಾಯಕ, ಜಿ.ಪಂ ಸದಸ್ಯ ಎಲ್.ದೇವರಾಜು, ಪಾಂಡವಪುರ ಉಪವಿಭಾಗಾಧಿಕಾರಿ ಶೈಲಜಾ, ತಹಶೀಲ್ದಾರ್ ಎಂ.ಶಿವಮೂರ್ತಿ, ತಾ.ಪಂ ಸದಸ್ಯೆ ಮೀನಾಕ್ಷಿ, ಪದ್ಮ, ನಿಂಗೇಗೌಡ ಸೇರಿದಂತೆ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Share

About Bora nayak BIG TV NEWS, Mandya

Check Also

Featured Video Play Icon

ಎಲ್ಲಡೆ ಶಿವನ ಆರಾಧನೆ ಭಕ್ತಿಯಲ್ಲಿ ಮಿಂದೆದ್ದ ಹುಬ್ಬಳ್ಳಿಯ ಜನರು | MAHA SHIVARATRI | BIG TV NEWS

Shaikh BIG TV NEWS, Hubballi See author's posts Share

Leave a Reply

Your email address will not be published. Required fields are marked *

error: Content is protected !!