Breaking News
Hiring Reporter’s For more Information Contact Above Number 876 225 4007 . Program producer
Home / ಸುದ್ದಿ / ಕರ್ನಾಟಕ / ತೈಲ ಬೆಲೆಯ ಅಲ್ಪ ಹೊರೆ ಇಳಿಸಲು ಮುಂದಾದ ಸಿಎಂ ಹೆಚ್ ಡಿ ಕುಮಾರಸ್ವಾಮಿ..

ತೈಲ ಬೆಲೆಯ ಅಲ್ಪ ಹೊರೆ ಇಳಿಸಲು ಮುಂದಾದ ಸಿಎಂ ಹೆಚ್ ಡಿ ಕುಮಾರಸ್ವಾಮಿ..

ಆಂಕರ್: ಹೈದರಾಬಾದ್ ಕರ್ನಾಟಕದಾದ್ಯಂತ ವಿಮೋಚನಾ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಹೈ.ಕ. ಭಾಗದ ಕೇಂದ್ರ ಸ್ಥಾನ ಕಲಬುರ್ಗಿಯಲ್ಲಿ ನಡೆದ ಕಾರ್ಯಕ್ರಮದಲ್ಲಿಮುಖ್ಯಮಂತ್ರಿ ಕುಮಾರಸ್ವಾಮಿ ಭಾಗಿಯಾಗುವ ಮೂಲಕ ವಿಮೋಚನಾ ದಿನಾಚರಣೆಗೆ ಮೆರುಗು ತಂದರು. ವಿಶೇಷ ವಿಮಾನದ ಮೂಲಕ ಆಗಮಿಸಿದ ಕುಮಾರಸ್ವಾಮಿ, ಸರ್ದಾರ್ ಪಟೇಲ್ ವೃತ್ತಕ್ಕೆ ತೆರಳಿ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ನಂತರ ಡಿ.ಎ.ಆರ್. ಮೈದಾನಕ್ಕೆ ಆಗಮಿಸಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವಕೀರಿಸಿದರು. ಈ ವೇಳೆ ಮಾತನಾಡಿದ ಕುಮಾರಸ್ವಾಮಿ, ಹಿಂದುಳಿದ ಹೈದರಾಬಾದ್ ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಗೆ ಸಮ್ಮಿಶ್ರ ಸರ್ಕಾರ ಬದ್ಧವಾಗಿದೆ ಎಂದರು. ಇನ್ಮು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸೆಸ್ ತೆರಿಗೆಯನ್ನು ಪ್ರತಿ ಲೀಟರ್ ಗೆ ಕನಿಷ್ಟ 2 ರೂಪಾಯಿ ಇಳಿಕೆ ಮಾಡುವುದಾಗಿ ಘೋಷಣೆ ಮಾಡಿದರು.
ದೇಶದ ಇತರೆ ಭಾಗಗಳಿಗೆ 1947  ಆಗಷ್ಟ್ 15 ರಂದು ಸ್ವಾತಂತ್ರ್ಯ ದೊರೆತ್ರೆ ಹೈದರಾಬಾದ್ ಪ್ರಾಂತ್ಯದಲ್ಲಿ ಮಾತ್ರ ವಿಮೋಚನಾ ಚಳವಳಿ ಅಂದೇ ಆರಂಭಗೊಂಡಿತ್ತು. ಹಿರಿಯ ಹೋರಾಟಗಾರರ ಸತತ ಹೋರಾಟದ ಫಲವಾಗಿ 1948 ರ ಸೆಪ್ಟೆಂಬರ್ 17 ರಂದು ಹೈದರಾಬಾದ್ ಪ್ರಾಂತ್ಯ ವಿಮೋಚನೆಗೊಂಡು, ಭಾರತದ ಒಕ್ಕೂಟದಲ್ಲಿ ವಿಲೀನಗೊಂಡಿತು. ಅದರ ಸ್ಮರಣಾರ್ಥ ಹೈದರಾಬಾದ್ ಕರ್ನಾಟಕದಾದ್ಯಂತ ಇಂದು ಸಂಭ್ರಮದಿಂದ ವಿಮೋಚನಾ ದಿನ ಆಚರಿಸಲಾಯಿತು. ಹೈದರಾಬಾದ್ ಕರ್ನಾಟಕದ ಕೇಂದ್ರ ಸ್ಥಾನ ಕಲಬುರ್ಗಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಕುಮಾಸ್ವಾಮಿ ಭಾಗಿಯಾದರು. ವಿಶೇಷ ವಿಮಾನದ ಮೂಲಕ ಕಲಬುರ್ಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಕುಮಾರಸ್ವಾಮಿ, ಸರ್ದಾರ್ ಪಟೇಲ್ ವೃತ್ತಕ್ಕೆ ತೆರಳಿ ಸರ್ದಾರ್ ವಲ್ಲಭಭಾಯಿ ಪಟೇಲರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ನಂತರ ಡಿ.ಎ.ಆರ್. ಮೈದಾನಕ್ಕೆ ತೆರಳಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದರು. ನಂತರ ವಿವಿಧ ತುಕಡಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಜನಪದ ಕಲಾ ತಂಡಗಳ ನೃತ್ಯ ಗಮನ ಸೆಳೆಯಿತು. ಹಿರಿಯ ಸ್ವಾತಂತ್ರ್ಯ ಹೋರಾಟಗಾರರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. 
ಈ ಸಂದರ್ಭದಲ್ಲಿ ಮಾತನಾಡಿದ ಕುಮಾರಸ್ವಾಮಿ, ಹೈದರಾಬಾದ್ ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಗೆ ಸಮ್ಮಿಶ್ರ ಸರ್ಕಾರ ಬದ್ಧವಾಗಿದೆ. ಹೈ.ಕ. ಪ್ರದೇಶಾಭಿವೃದ್ಧಿ ಮಂಡಳಿಗೆ ಅಗತ್ಯ ಸಿಬ್ಬಂದಿಯನ್ನು ಕೊಡುವ ಜೊತೆಗೆ, ಹೈ.ಕ. ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಲಾವುದು ಎಂದರು. ಕಲಬುರ್ಗಿಯಲ್ಲಿ ಸ್ಥಾಪನೆಗೊಂಡಿರುವ ವಿಮಾನ ನಿಲ್ದಾಣ ಹಿಂದುಳಿದ ಹೈ.ಕ. ಭಾಗದ ಅಭಿವೃದ್ಧಿಯ ಹೆಬ್ಬಾಗಿಲು ಆಗಲಿದೆ ಎಂದರು.
ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಿಂದಾಗಿ ಜನಸಾಮಾನ್ಯರಿಗೆ ದೊಡ್ಡ ಹೊರೆಯಾಗಿ ಮಾರ್ಪಟ್ಟಿದೆ. ಜನರ ಮೇಲಿನ ಹೊರೆಯನ್ನು ಅಲ್ಪವಾದರೂ ಇಳಿಸಬೇಕೆಂದು ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಕನಿಷ್ಟ 2 ರೂಪಾಯಿ ಇಳಿಕೆ ಮಾಡುವುದಾಗಿ ಕುಮಾರಸ್ವಾಮಿ ಪ್ರಕಟಿಸಿದರು. ರಾಜ್ಯದ ಜನತೆಗೆ ಇದು ವಿಮೋಚನಾ ದಿನದ ಕೊಡುಗೆ ಎಂದು ಸಿಎಂ ತಿಳಿಸಿದರು. 
ಇದೇ ಸಂದರ್ಭದಲ್ಲಿ ಸಂತ ಸೇವಾಲಾಲ್ ಸಾಂಸ್ಕೃತಿಕ ಕೇಂದ್ರಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಚಾಲನೆ ನೀಡಿದರು. ನಂತರ ಹಿರಿಯ ಸ್ವಾತಂತ್ರ್ಯ ಹೋರಾಟಗಾರರನ್ನು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ತೋಟಗಾರಿಕಾ ಸಚಿವ ಎಂ.ಸಿ.ಮನಗೂಳಿ, ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಮತ್ತಿತರರು ಉಪಸ್ಥಿತರಿದ್ದರು.

Share

About Shaikh BIG TV NEWS, Hubballi

Check Also

Featured Video Play Icon

ಎಲ್ಲಡೆ ಶಿವನ ಆರಾಧನೆ ಭಕ್ತಿಯಲ್ಲಿ ಮಿಂದೆದ್ದ ಹುಬ್ಬಳ್ಳಿಯ ಜನರು | MAHA SHIVARATRI | BIG TV NEWS

Shaikh BIG TV NEWS, Hubballi See author's posts Share

Leave a Reply

Your email address will not be published. Required fields are marked *

error: Content is protected !!