Breaking News
Hiring Reporter’s For more Information Contact Above Number 876 225 4007 . Program producer
Home / ಸುದ್ದಿ / ದೇಶ-ವಿದೇಶ / ತ್ರಿವಳಿ ತಲಾಖ್​​ ಸುಗ್ರೀವಾಜ್ಞೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ

ತ್ರಿವಳಿ ತಲಾಖ್​​ ಸುಗ್ರೀವಾಜ್ಞೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ

ನವದೆಹಲಿ: ತ್ರಿವಳಿ ತಲಾಖ್​​ ನಿಷೇಧಕ್ಕೆ ಹೊರಡಿಸಲಾಗಿದ್ದ ಸುಗ್ರೀವಾಜ್ಞೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್​ ವಜಾಗೊಳಿಸಿದೆ. ಕಳೆದ ಸೆಪ್ಟೆಂಬರ್​​ನಲ್ಲಿ ಕೇಂದ್ರ ಸರ್ಕಾರ, ತ್ರಿವಳಿ ತಲಾಖ್​ ನಿಷೇಧಕ್ಕೆ ಸುಗ್ರೀವಾಜ್ಞೆ ಹೊರಡಿಸಿತ್ತು. ಇದು ಸಂವಿಧಾನದ ಆರ್ಟಿಕಲ್ 14, 15 ಹಾಗೂ 21ರ ಉಲ್ಲಂಘನೆಯಾಗುತ್ತದೆ. ಇದನ್ನು ರದ್ದು ಮಾಡಬೇಕು ಎಂದು ಕೋರಿ ಸಮಸ್ತ ಕೇರಳ ಕಮಾಯ್ತ್​​ ಉಲೀಮಾ ಎಂಬ ಮುಸ್ಲಿಂ ಸಂಘಟನೆ ಸುಪ್ರೀಂಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿತ್ತು.ಈ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು​ ವಜಾಗೊಳಿಸಿದೆ. ಈ ವಿಷಯದಲ್ಲಿ ಮಧ್ಯಪ್ರವೇಶಿಸುವ ಅಗತ್ಯವಿಲ್ಲ ಎಂದು ಕೋರ್ಟ್​ ಅಭಿಪ್ರಾಯಪಟ್ಟಿದೆ. ಸುಗ್ರೀವಾಜ್ಞೆ ಹೊರಡಿಸಿ 2 ತಿಂಗಳಾಗಿದೆ. ಅದರ ಅವಧಿ 6 ತಿಂಗಳು, ಶೀಘ್ರದಲ್ಲೇ ಚಳಿಗಾಲದ ಅಧಿವೇಶನ ಕೂಡ ಶುರುವಾಗಲಿದೆ ಎಂದು ಮುಖ್ಯ ನ್ಯಾಯಮೂರ್ತಿ ರಂಜನ್​​ ಗೊಗೋಯಿ ನೇತೃತ್ವದ ಪೀಠ ಹೇಳಿದೆ. ಕಳೆದ ಸೆಪ್ಟೆಂಬರ್​​ 19ರಂದು ಮುಸ್ಲಿಂ ಮಹಿಳೆಯರ ಮದುವೆ ಹಕ್ಕು ಮತ್ತು ರಕ್ಷಣೆ ಸುಗ್ರೀವಾಜ್ಞೆ 2018, ಸಂಪುಟದಲ್ಲಿ ಅಂಗೀಕಾರಗೊಂಡ ಕೆಲವೇ ಗಂಟೆಗಳಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್ ಇದಕ್ಕೆ ಸಹಿ ಹಾಕಿದ್ದರು

Share

About Shaikh BIG TV NEWS, Hubballi

Check Also

Featured Video Play Icon

ಬಾ ಬಾ ನಾ ರಡಿ….ರಾಬರ್ಟ್ ಗೆ ಜೈ ಅಂದ ಅಭಿಮಾನಿಗಳು | Roberrt movie craze after releasing | BIG TV NEW

Shaikh BIG TV NEWS, Hubballi See author's posts Share

Leave a Reply

Your email address will not be published. Required fields are marked *

error: Content is protected !!