Breaking News
Hiring Reporter’s For more Information Contact Above Number 876 225 4007 . Program producer
Home / ಸುದ್ದಿ / ಧಾರವಾಡ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿಗೆ ಪೂರಕ ಬೆಂಬಲ ಸೂಚಿಸಲು ನಾವೆಲ್ಲರೂ ಸಿದ್ಧ: ಸನದಿ

ಧಾರವಾಡ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿಗೆ ಪೂರಕ ಬೆಂಬಲ ಸೂಚಿಸಲು ನಾವೆಲ್ಲರೂ ಸಿದ್ಧ: ಸನದಿ

Spread the love

ಹುಬ್ಬಳ್ಳಿ:ಧಾರವಾಡ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸನಿಂದ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಬೇಕಿತ್ತು ಆದರೇ ನೀಡಿಲ್ಲ. ಆದರೂ ಕೂಡ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲುವಿಗೆ ನಾವೆಲ್ಲರೂ ಶ್ರಮಿಸುತ್ತೇವೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅನೀಲಕುಮಾರ ಪಾಟೀಲ ಹಾಗೂ ಶಾಕೀರ್ ಸನದಿ ತಿಳಿಸಿದರು.ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಜಂಟಿಯಾಗಿ ಮಾತನಾಡಿದ ಅವರು, ಧಾರವಾಡ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿರುವ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಪಕ್ಷದ ಅಭ್ಯರ್ಥಿ ವಿನಯ ಕುಲಕರ್ಣಿ ಅವರಿಗೆ ಸರ್ವಾನುಮತದಿಂದ ಬೆಂಬಲ ಸೂಚಿಸುವ ಮೂಲಕ ಪಕ್ಷದ ಗೆಲುವಿಗೆ ಶ್ರಮಿಸುತ್ತೇವೆ ಎಂದರು‌‌. ಕಾಂಗ್ರೆಸ್ ಪಕ್ಷ ಯಾವತ್ತೂ ಕೂಡ ಅಲ್ಪಸಂಖ್ಯಾತರರನ್ನು ಕೈ ಬಿಟ್ಟಿಲ್ಲ ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರುವಲ್ಲಿ ನಾವೆಲ್ಲರೂ ಒಟ್ಟಾಗಿ ನಿಂತು ರಾಹುಲ ಗಾಂಧಿಯವರನ್ನು ಪ್ರಧಾನಮಂತ್ರಿ ಮಾಡಲು ಶ್ರಮಿಸುತ್ತೇವೆ ಎಂದು ಅವರು ಹೇಳಿದರು. ಕಾಂಗ್ರೆಸ್ ಪಕ್ಷದಲ್ಲಿ ಟಿಕೆಟಗಾಗಿ ಸುಮಾರು ಅಭ್ಯರ್ಥಿಗಳು ಮನವಿ ಸಲ್ಲಿಸಿರುತ್ತಾರೆ.ಆದರೇ ಪಕ್ಷದ ವರಿಷ್ಠರ ನಿರ್ಧಾರಕ್ಕೆ ನಾವೆಲ್ಲಾ ಬದ್ಧರಾಗಿದ್ದೇವೆ ಈ ನಿಟ್ಟಿನಲ್ಲಿ ವಿನಯ ಕುಲಕರ್ಣಿಯವರ ಗೆಲುವಿಗೆ ನಾವೆಲ್ಲ ಕಂಕಣಬದ್ದರಾಗಿ ಶ್ರಮಿಸುತ್ತೇವೆ ಎಂದರು. ಸ್ಥಳೀಯ ಎಂಪಿಯ ಬಗ್ಗೆ ಸರ್ಟಿಫಿಕೇಟ್ ನೀಡಿರುವ ರಾಹುಲ್ ಗಾಂಧಿಯವರು ಸ್ವತಃ ತಾವೇ ಸ್ಪಷ್ಟನೆ ನೀಡಲಿದ್ದಾರೆ ಎಂದು ಅವರು ಹೇಳಿದರು. ರಾಷ್ಟ್ರಮಟ್ಟದಲ್ಲಿ ಕಾರ್ಯ ಮಾಡುತ್ತಿರುವುದರಿಂದ ಸ್ಥಳೀಯ ಮಟ್ಟದ ಕಾರ್ಯಕರ್ತರೊಂದಿಗೆ ಬೆರೆಯುವಲ್ಲಿ ಸಾಧ್ಯವಾಗಲಿಲ್ಲ.‌ಈ ಹಿನ್ನೆಲೆಯಲ್ಲಿ ಟಿಕೆಟ್ ನೀಡುವಲ್ಲಿ ಹಿನ್ನಡೆಯಾಗಿದೆ ಎಂದು ಶಾಕೀರ್ ಸನದಿ ತಿಳಿಸಿದರು. ಕಾಂಗ್ರೆಸ್ ಪಕ್ಷ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಶ್ರಮಿಸಿದ್ದಾರೆ ಮುಂದಿನ ದಿನಮಾನಗಳಲ್ಲಿ ಕೂಡ ಶ್ರಮಿಸುತ್ತಾರೆ ಎಂಬುವಂತ ಬರವಸೆ ಇದೇ ಎಂದರು.ಬಳಿಕ ಕುಂದಗೋಳ ವಿಧಾನಸಭಾ ಉಪಚುನಾವಣೆ ಕುರಿತು ಮಾತನಾಡಿದ ಅವರು, ಕುಂದಗೋಳ ಕ್ಷೇತ್ರದ ಚುನಾವಣೆಗೆ ತಯಾರಾಗಿದೆ. ಜನರ ಅಭಿಪ್ರಾಯ ಕಲೆ ಹಾಕುತ್ತಿದ್ದೇವೆ. ಜನರ ಅಭಿಪ್ರಾಯದ ಮೇಲೆ ಟಿಕೆಟ್ ನೀಡಲಾಗುತ್ತದೆ ಎಂದು ಅವರು ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಅಲ್ತಾಫ್ ಹಳ್ಳೂರ, ಶಫಿ ಯಾದಗಿರಿ, ಝಾಕೀರ್, ಬಂಗಾರೇಶ ಹಿರೇಮಠ, ರಜತ್ ಉಳ್ಳಾಗಡ್ಡಿಮಠ ಸೇರಿದಂತೆ ಇತರರು ಇದ್ದರು.

Check Also

Featured Video Play Icon

ಯರಗುಪ್ಪಿ ಮುಖ್ಯ ರಸ್ಥೆಯಲ್ಲಿ ಗುಂಡಿಗಳದೇ ಕಾರುಬಾರು

Spread the love

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!