Hiring Reporter’s For more Information Contact Above Number 876 225 4007 . Program producer
Home / ಸುದ್ದಿ / ನಾಳೆ ಶ್ರೀ ವಿಘ್ನೇಶ್ವರ ವಿದ್ಯಾವರ್ಧಕ ಸಂಘದ ರಜತ ಮಹೋತ್ಸವ

ನಾಳೆ ಶ್ರೀ ವಿಘ್ನೇಶ್ವರ ವಿದ್ಯಾವರ್ಧಕ ಸಂಘದ ರಜತ ಮಹೋತ್ಸವ

Spread the love

ಹುಬ್ಬಳ್ಳಿ: ಶ್ರೀ ವಿಘ್ನೇಶ್ವರ ವಿದ್ಯಾವರ್ಧಕ ಸಂಘದ 25 ನೇ ವರ್ಷದ ರಜತಮಹೋತ್ಸವ ಸಂಭ್ರಮ ಕಾರ್ಯಕ್ರಮವನ್ನು ನಾಳೆ ಸಂಜೆ 4 ಗಂಟೆಗೆ ವಿದ್ಯಾನಗರದ ಶ್ರೀ ವಿಘ್ನೇಶ್ವರ ಪೌಢಶಾಲಾ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅಧ್ಯಕ್ಷರಾದ ಎನ್.ಎನ್.ಕಡಬಿಗೇರಿ ತಿಳಿಸಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಸಾಣೇಹಳ್ಳಿಯ ತರಳಬಾಳು ಜಗದ್ಗುರು ಡಾ. ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಹಾಗೂ ಡಾ. ಶಿವಾಚಾರ್ಯ ಸ್ವಾಮಿಗಳು ವಹಿಸಲಿದ್ದಾರೆ. ಉದ್ಘಾಟನೆಯನ್ನು ಮಾಜಿ ಮುಖ್ಯಮಂತ್ರಿಗಳಾದ ಜಗದೀಶ ಶೆಟ್ಟರ ಅವರು ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ವಿಘ್ನೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಎನ್.ಎನ್. ಕಡಬಿಗೇರ ಅವರು ವಹಿಸಲಿದ್ದಾರೆ.ಇದೇ ವೇಳೆ ವಿಧಾನ ಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ ಸ್ಮರಣ ಸಂಚಿಕೆಯನ್ನು ಬಿಡುಗಡೆ ಮಾಡಲಿದ್ದಾರೆ.ಸಂಸ್ಥೆಯ ಕಿರುಚಿತ್ರವನ್ನು ಶಾಸಕರಾದ ಬಸವರಾಜ ಬೊಮ್ಮಾಯಿ ಅವರು ಅನಾವರಣಗೊಳಿಸಲಿದ್ದಾರೆ. ಎಂದರು. ಹಾಗೂ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಇಂಚಗೇರಿ ಸಂಸ್ಥಾನಮಠದ ಪೀಠಾಧಿಕಾರಿಗಳಾದ ಡಾ. ಎ.ಸಿ. ವಾಲಿ, ಹು-ಧಾ ಮಹಾನಗರ ಪಾಲಿಕೆ ಸದಸ್ಯರಾದ ವೀರಣ್ಣ ಸವಡಿ, ಲಕ್ಷ್ಮೀ ಉಪ್ಪಾರ, ಜಿಲ್ಲಾ ವಕೀಲ ಸಂಘದ ಅಧ್ಯಕ್ಷರಾದ ಎನ್.ಟಿ. ಮಂಜುನಾಥ, ಕೆ.ಬಿ. ಚನ್ನಪ್ಪ, ಸಂಘದ ನಿರ್ದೇಶಕಿ ಗಿರಿಜಾ ಕಡಬಿಗೇರಿ ಆಗಮಿಸಲಿದ್ದಾರೆ ಎಂದು ಕಾರ್ಯಕ್ರಮದ ಮಾಹಿತಿ ನೀಡಿದರು. ಪತ್ರಿಕಾಗೋಷ್ಠಿಯಲ್ಲಿ ವಿನಯಕುಮಾರ ಕಡಬಗೇರಿ, ಉಪನ್ಯಾಸಕರಾದ ವಿ.ಐ. ಪಾಟೀಲ ಉಪಸ್ಥಿತರಿದ್ದರು.

Check Also

‘ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್

Spread the loveತಮಿಳುನಾಡು : ರಾಜ್ಯದ ಸರ್ಕಾರಿ ಕಚೇರಿಗಳು 2021ರ ಜನವರಿ 1ರಿಂದ ವಾರದಲ್ಲಿ ಐದು ದಿನ ಮಾತ್ರವೇ ಕೆಲಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!