Breaking News
Hiring Reporter’s For more Information Contact Above Number 876 225 4007 . Program producer
Home / ಸುದ್ದಿ / ಕರ್ನಾಟಕ / ನೆರೆ ಪರಿಹಾರ ವಿಳಂಬ ಹಿನ್ನಲೆ ರಾಜ್ಯದ ಜನತೆಯಲ್ಲಿ ಕ್ಷಮೆ ಕೇಳಿದ ಶ್ರೀರಾಮಲು

ನೆರೆ ಪರಿಹಾರ ವಿಳಂಬ ಹಿನ್ನಲೆ ರಾಜ್ಯದ ಜನತೆಯಲ್ಲಿ ಕ್ಷಮೆ ಕೇಳಿದ ಶ್ರೀರಾಮಲು

ಚಿತ್ರದುರ್ಗ:- ಕೇಂದ್ರದಿಂದ ಬರ ಪರಿಹಾರ ಬರುವಲ್ಲಿ ವಿಳಂಬದ ಹಿನ್ನಲೆಯಲ್ಲಿ ರಾಜ್ಯದ ಜನತೆಯಲ್ಲಿ ಕ್ಷಮೆ ಕೇಳುತ್ತೇನೆಂದು ಶ್ರೀರಾಮುಲು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಮತ್ತು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದಾರೆ.‌‌‌‌‌‌ ಹಿರಿಯೂರಿನಲ್ಲಿ ಇಂದಿರಾ ಕ್ಯಾಂಟಿನ್ ಉದ್ಧಾಟಿಸಿ ಮಾತನಾಡಿದ ಅವರು, ಈಗಾಗಲೇ ಕೇಂದ್ರಕ್ಕೆ 3500 ಕೋಟಿ ರೂಪಾಯಿ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರದಿಂದ ಕಳುಹಿಸಿ ಕೊಡಲಾಗಿದೆ. ಪರಿಹಾರ ಹಣ ಇಷ್ಟೊತ್ತಿಗೆ ಬರಬೇಕಿತ್ತು, ಆದರೆ ಬಂದಿಲ್ಲ. ತಡವಾಗಿರೋದಕ್ಕೆ ಬಹಿರಂಗವಾಗಿ ಕ್ಷಮೆ ಯಾಚಿಸುತ್ತೇನೆ. ಅಲ್ಲದೇ ಇನ್ನೂ 2, 3 ದಿನದೊಳಗೆ ಕೇಂದ್ರದಿಂದ ಪರಿಹಾರ ಬರುವ ನೀರಿಕ್ಷೆ ಇದೆ ಎಂದರು. ಕೇಂದ್ರ ಸರ್ಕಾರ ಇದ್ದೂ ಸತ್ತಂತೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಬರ ಪರಿಹಾರ ಕಾರ್ಯದಲ್ಲಿ ಯಾರೂ ರಾಜಕಾರಣ ಮಾಡಬಾರದು. ಎರಡು ಮೂರು ದಿನದಲ್ಲಿ ಕೇಂದ್ರದಿಂದ ಪರಿಹಾರ ಬರದಿದ್ದರೆ ಪಕ್ಷಾತೀತವಾಗಿ ಎಲ್ಲರೂ ಸೇರಿ ಕೇಂದ್ರಕ್ಕೆ ನಿಯೋಗ ಹೋಗೋಣ. ನೆರೆ ವಿಚಾರದಲ್ಲಿ ರಾಜಕೀಯ ಮಾಡೋದನ್ನ ಸಿದ್ದರಾಮಯ್ಯ ನಿಲ್ಲಿಸಲಿ‌ ಎಂದರು. ಇನ್ನೂ ಸಿಎಂ ಯಡಿಯೂರಪ್ಪ ಖಜಾನೆ ಖಾಲಿ ಅಂತ ಹೇಳಿರೋದು ಬೇರೆ ಉದ್ದೇಶದಿಂದ, ಸಿಎಂ ಹೇಳಿಕೆಯನ್ನ ಮಾಧ್ಯಮಗಳಲ್ಲಿ ತಿರುಚಲಾಗಿದೆ. ಅಲ್ಲದೇ ರೈತರ, ಸಂತ್ರಸ್ತರ ಮನವೊಲಿಸುವ ಕೆಲಸ ಮಾಡುತ್ತಿದ್ದೇವೆ ಎಂದರು‌.

Share

About CHANNABASAVAIAH BIG TV NEWS, Chitradurga

Check Also

Featured Video Play Icon

ಎಲ್ಲಡೆ ಶಿವನ ಆರಾಧನೆ ಭಕ್ತಿಯಲ್ಲಿ ಮಿಂದೆದ್ದ ಹುಬ್ಬಳ್ಳಿಯ ಜನರು | MAHA SHIVARATRI | BIG TV NEWS

Shaikh BIG TV NEWS, Hubballi See author's posts Share

Leave a Reply

Your email address will not be published. Required fields are marked *

error: Content is protected !!