Breaking News
Hiring Reporter’s For more Information Contact Above Number 876 225 4007 . Program producer
Home / ಸುದ್ದಿ / ಕರ್ನಾಟಕ / ನೆರೆ ಪರಿಹಾರ ಹಣವನ್ನು ಹೆಚ್ಚಿಸುವಂತೆ ಆಗ್ರಹಿಸಿ ನಿರ್ಮಲಾ ಶೀತಾರಾಮನ್ ಅವರಿಗೆ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರಿಂದ ಘೇರಾವ್ ಪ್ರಯತ್ನ : ಬಂಧನ

ನೆರೆ ಪರಿಹಾರ ಹಣವನ್ನು ಹೆಚ್ಚಿಸುವಂತೆ ಆಗ್ರಹಿಸಿ ನಿರ್ಮಲಾ ಶೀತಾರಾಮನ್ ಅವರಿಗೆ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರಿಂದ ಘೇರಾವ್ ಪ್ರಯತ್ನ : ಬಂಧನ

ಹುಬ್ಬಳ್ಳಿ:- ಭೀಕರ ನೆರೆ ಹಾವಳಿಯಿಂದ ರಾಜ್ಯದ 22 ಜಿಲ್ಲೆಗಳಲ್ಲಿ ಜಲ ಪ್ರವಾಹ ಬಂದು ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡು ಜನ ತತ್ತರಿಸಿ ಹೋಗಿದ್ದು, ಈ ಬಗ್ಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ಬಿಡಿಕಾಸು ಪರಿಹಾರ ನೀಡಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿ ಕೇಂದ್ರ ಸಚಿವೆ ನಿರ್ಮಲಾ ಸಿತಾರಾಮನ್ ಅವರಿಗೆ ಘೇರಾವ್ ಹಾಕಿ ಪ್ರತಿಭಟನೆ ಮಾಡಲು ಮುಂದಾದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು. ಕೇಂದ್ರ ಸರ್ಕಾರಕ್ಕೆ ನೆರೆ ಪರಿಹಾರಕ್ಕೆ ರಾಜ್ಯ ಸರ್ಕಾರ 38 ಸಾವಿರ ಕೋಟಿ ನೆರೆ ಪರಿಹಾರ ಕೇಳಿತ್ತು ಆದರೆ ನಿನ್ನೆ ಕೇಂದ್ರ ಸರ್ಕಾರ ಕೇವಲ 1200 ಕೋಟಿ ಮಾತ್ರ ಪರಿಹಾರ ಬಿಡುಗಡೆ ಮಾಡಿದ್ದನ್ನು ವಿರೋಧಿಸಿ ಇಂದು ವಿಮಾನ ನಿಲ್ದಾಣಕ್ಕೆ ಕೇಂದ್ರದ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಆಗಮಿಸುತ್ತಿದ್ದ ವೇಳೆ ಸಚಿವರ ವಿರುದ್ಧ ವಿಮಾನ ನಿಲ್ದಾಣದ ಹೊರಗಡೆ ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದೀಪಾ ಗೌರಿ ಅವರ ನೇತೃತ್ವದಲ್ಲಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರ ಪ್ರತಿಭಟನೆಯ ಮಾಡಲು ಮುಂದಾಗುತಿದ್ದಂತೆ ಗೋಕುಲ ಪೊಲೀಸ್ ಠಾಣೆಯ ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು.

Share

About Shaikh BIG TV NEWS, Hubballi

Check Also

Featured Video Play Icon

ಎಲ್ಲಡೆ ಶಿವನ ಆರಾಧನೆ ಭಕ್ತಿಯಲ್ಲಿ ಮಿಂದೆದ್ದ ಹುಬ್ಬಳ್ಳಿಯ ಜನರು | MAHA SHIVARATRI | BIG TV NEWS

Shaikh BIG TV NEWS, Hubballi See author's posts Share

Leave a Reply

Your email address will not be published. Required fields are marked *

error: Content is protected !!