Breaking News
Hiring Reporter’s For more Information Contact Above Number 876 225 4007 . Program producer
Home / ರಾಜಕೀಯ / ಪಾಪದ ಕೊಡ ತುಂಬಿದ ನಂತರ ಮೈತ್ರಿ ಸರ್ಕಾರ ಬಿದ್ದಿದೆ: ಶೆಟ್ಟರ್ ವಾಗ್ದಾಳಿ

ಪಾಪದ ಕೊಡ ತುಂಬಿದ ನಂತರ ಮೈತ್ರಿ ಸರ್ಕಾರ ಬಿದ್ದಿದೆ: ಶೆಟ್ಟರ್ ವಾಗ್ದಾಳಿ

ಹುಬ್ಬಳ್ಳಿ: ಕಾಂಗ್ರೆಸ್-ಜೆಡಿಎಸ್ ಮಾಡಿಕೊಂಡ ಮೈತ್ರಿ ಸರ್ಕಾರ ಪಾಪದ ಕೊಡ ತುಂಬಿದ ನಂತರ ಬಿದ್ದು ಹೋಗಿದೆ. ಅಕ್ಕ-ಪಕ್ಕ ಕುರುತಿದ್ದ ಸಿದ್ದರಾಮಯ್ಯ, ಕುಮಾರಸ್ವಾಮಿ ಪರಸ್ಪರ ಕಿತ್ತಾಟ ನಡೆಸಿದ್ದಾರೆಂದು ಸಚಿವ ಜಗದೀಶ್ ಶೆಟ್ಟರ್ ಪ್ರತಿಪಕ್ಷಗಳ ವಿರುದ್ಧ ಹರಿಹಾಯ್ದರು. ನಗರದಲ್ಲಿ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನಲೆಯಲ್ಲಿ ಕರೆದಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿಪಕ್ಷಗಳಲ್ಲಿ ಒಗ್ಗಟ್ಟು ಇಲ್ಲ. ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮುರಿದ ನಂತರ ತಾವು ತಾವೇ ಜಗಳ ಮಾಡುತ್ತಿದ್ದಾರೆ. ಜೆಡಿಎಸ್ ಶಾಸಕರು ಜೆಡಿಎಸ್ ಪಕ್ಷ ಬಿಟ್ಟು ಹೊರಗೆ ಬರುತ್ತೇವೆ ಎಂದು ಜೆಡಿಎಸ್ ನಾಯಕರುಗಳೇ ಹೇಳುತ್ತಿದ್ದಾರೆ. ಇದರ ಲಾಭವನ್ನು ಬಿಜೆಪಿ ಪಡೆದು ಪದವೀಧರ ಚುನಾವಣೆಯನ್ನು ಗೆಲ್ಲಬೇಕು‌. ಈ ಹಿನ್ನಲೆಯಲ್ಲಿ ಪಶ್ಚಿಮ ಪದವೀಧರ ಕ್ಷೇತ್ರದ ವಿಚಾರದಲ್ಲಿ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಎಲ್ಲರ ಜೊತೆಗೆ ಸಮಾಲೋಚನೆ ನಡೆಸಲಾಗುವುದು. ಅಲ್ಲದೇ ಕೇಂದ್ರ ಮತ್ತು ರಾಜ್ಯದಲ್ಲಿ ನಮ್ಮದೇ ಬಿಜೆಪಿ ಸರ್ಕಾರವಿದ್ದು, ಪ್ರತಿಪಕ್ಷಗಳ ಜಗಳದ ಲಾಭ ಪಡೆದು ಚುನಾವಣೆ ಗೆಲ್ಲುವ ರಣತಂತ್ರ ರೂಪಿಸಲಾಗುವುದು. ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದ್ದು, ಈಗಾಗಲೇ ಕಾಂಗ್ರೆಸ್ ನಾಯಕರುಗಳೇ ಕಾಂಗ್ರೆಸ್ ಆಡಳಿತ ಬರುವುದಿಲ್ಲ ಎಂದು ಭವಿಷ್ಯ ನುಡಿದಿದ್ದಾರೆ. ಕಾಂಗ್ರೆಸ್ ಒಗ್ಗಟ್ಟಿನಲ್ಲಿ ಕೊರತೆ ಇದೆ. ಮುಂದಿನ ದಿನಗಳಲ್ಲಿ ದೇಶ ಕಾಂಗ್ರೆಸ್ ಮುಕ್ತವಾಗೋದು ಗ್ಯಾರಂಟಿ ಎಂದು ಭವಿಷ್ಯ ನುಡಿದರು. ಇನ್ನೂ ವಿಪಕ್ಷಗಳು ಕೇವಲ ನೆರೆ ವಿಚಾರವನ್ನಿಟ್ಟುಕೊಂಡು ಟೀಕೆ ಮಾಡುತ್ತಿವೆ. ಆದರೆ ನರೇಂದ್ರ ಮೋದಿ ಸರ್ಕಾರ ನೆರೆ ಪರಿಹಾರ ಬಿಡುಗಡೆ ಮಾಡಿದ ಅಂಕಿಅಂಶಗಳ ಬಗ್ಗೆ ಗೊತ್ತಿಲ್ಲದೇ ಮನಸ್ಸೋ ಇಚ್ಛೆ ಟೀಕೆ ಮಾಡುತ್ತಿದ್ದಾರೆ. ಕೇಂದ್ರದಿಂದ ಮಧ್ಯಂತರ ನೆರೆ ಪರಿಹಾರ ಬಿಡುಗಡೆಯಾಗಿದ್ದು, ಎನ್ ಡಿಆರ್ ಎಫ್ ನಿಯಮಗಳ ಪ್ರಕಾರ ನೆರೆ ಸಂತ್ರಸ್ತರಿಗೆ ಪರಿಹಾರ ಒದಗಿಸಲಾಗುವುದು. ಇನ್ನೂ ಕೇಂದ್ರದಿಂದ ನೆರೆ ಪರಿಹಾರದ ಬಗ್ಗೆ ನಿರಾಶ್ರಿತರಿಂದ ಯಾವುದೇ ದೂರ ಬಂದಿಲ್ಲ. ಕೇವಲ ವಿಪಕ್ಷಗಳು ರಾಜಕಾರಣ ಮಾಡುವ ಹಿನ್ನಲೆಯಲ್ಲಿ ಟೀಕೆ ಮಾಡುತ್ತಿದ್ದಾರೆ ಎಂದು ಹರಿಹಾಯ್ದರು.

Share

About Shaikh BIG TV NEWS, Hubballi

Check Also

ಧರ್ಮೆಗೌಡ ಆತ್ಮಹತ್ಯೆ ಸ್ಥಳಕ್ಕೆ ಭೇಟಿ ನೀಡಿದ ಸಿ.ಟಿ. ರವಿ.

ಚಿಕ್ಕಮಗಳೂರು: ಪರಿಷತ್ ಉಪಸಭಾಪತಿ S.L.ಧರ್ಮೇಗೌಡ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಿಲ್ಲೆಯ ಕಡೂರು ತಾಲೂಕಿನ ಗುಣಸಾಗರ ಬಳಿ ತಡರಾತ್ರಿ 1.30ರ …

Leave a Reply

Your email address will not be published. Required fields are marked *

error: Content is protected !!