Hiring Reporter’s For more Information Contact Above Number 876 225 4007 . Program producer
Home / ಸುದ್ದಿ / ಪ್ರಧಾನಿ ನರೇಂದ್ರ ಮೋದಿ ಆಗಮನಕ್ಕೆ ಭರ್ಜರಿ ಸಿದ್ಧತೆ

ಪ್ರಧಾನಿ ನರೇಂದ್ರ ಮೋದಿ ಆಗಮನಕ್ಕೆ ಭರ್ಜರಿ ಸಿದ್ಧತೆ

Spread the love

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿಯವರ ಸ್ವಾಗತಕ್ಕೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಫೆಬ್ರವರಿ 10ರಂದು ಅಂದ್ರೆ ನಾಳೆ ಪ್ರಧಾನಿ ನರೇಂದ್ರ ಮೋದಿಯವರು ನಗರಕ್ಕೆ ಆಗಮಿಸಲಿದ್ದಾರೆ. ನಾಳೆ ಸಂಜೆ ಬಿಜೆಪಿಯ ಚುನಾವಣಾ ಪ್ರಚಾರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಹೀಗಾಗಿ ಗಬ್ಬೂರು ಬಳಿಯ ಕೆಎಲ್‌ಇ ಮೈದಾನದಲ್ಲಿ ಸಿದ್ಧತಾ ಕಾರ್ಯ ಭರದಿಂದ ಸಾಗಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರು ಕುಳಿತುಕೊಳ್ಳಲು ಪ್ರಧಾನ ವೇದಿಕೆ ಸಿದ್ಧಪಡಿಸಲಾಗುತ್ತಿದೆ. ಪ್ರಧಾನ ವೇದಿಕೆಯ ಪಕ್ಕದಲ್ಲಿ ಶಾಸಕರು ಮತ್ತು ಸಂಸದರಿಗಾಗಿ ಮತ್ತೊಂದು ವೇದಿಕೆ ಸಜ್ಜಾಗುತ್ತಿದೆ. 90ಸಾವಿರ ಜನರಿಗೆ ಆಸನ ವ್ಯವಸ್ಥೆ ಮಾಡಲಾಗುತ್ತಿದೆ. 65 ಎಕರೆ ಜಾಗವನ್ನು ಜೆಸಿಬಿಗಳಿಂದ ಸ್ವಚ್ಛಗೊಳಿಸಲಾಗಿದೆ. ಸಮಾವೇಶದ ತಯಾರಿ ಮತ್ತು ಕಣ್ಗಾವಲಿಗೆ ವಿಶೇಷ ಭದ್ರತಾ ಪಡೆ ಈಗಾಗಲೇ ನಗರಕ್ಕೆ ಆಗಮಿಸಿದೆ. ಮಾಜಿ ಸಿಎಮ್ ಜಗದೀಶ್ ಶೆಟ್ಟರ್ ಮತ್ತು ಸಂಸದ ಪ್ರಲ್ಹಾದ್ ಜೋಶಿಯವರು ಕಾರ್ಯಕ್ರಮದ ಸ್ಥಳ ಪರಿಶೀಲನೆ ಮಾಡಿದ್ದಾರೆ. ಬಿಜೆಪಿ ಸಮಾವೇಶ ಅಭೂತಪೂರ್ವ ಯಶಸ್ವಿಯಾಗಲಿದೆ. ಕೇಂದ್ರ ಬಜೆಟ್‌ಗೆ ದೇಶಾದ್ಯಂತ ಪೂರಕವಾದ ಬೆಂಬಲ ಸಿಗುತ್ತಿದೆ‌. ರಾಜ್ಯದ ಜನರು ಪ್ರಧಾನಿಗಳ ಆಗಮನಕ್ಕೆ ಕಾತುರತೆಯಿಂದ ಕಾಯುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಮೊದಲು ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಐಐಟಿ ಕಟ್ಟಡದ ಶಂಕುಸ್ಥಾಪನೆ. ಪೈಪ್ಡ್ ನ್ಯಾಚುರಲ್ ಗ್ಯಾಸ್ ಸಂಪರ್ಕಕ್ಕೆ ಚಾಲನೆ, ನ್ಯಾಚುರಲ್ ಗ್ಯಾಸ್ ಔಟ್ಲೆಟ್‌ ಮತ್ತು ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಮನೆಗಳ ಲೋಕಾರ್ಪಣೆ. ಸ್ವಾಸ್ಥ್ಯ ಸುರಕ್ಷಾ ಯೋಜನೆಯಡಿ ಕಿಮ್ಸ್‌ ಕಟ್ಟಡ ಉದ್ಘಾಟನೆ ಮಾಡಲಿದ್ದಾರೆ. ನಂತರ ಬಿಜೆಪಿಯ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ‌. ಧಾರವಾಡ, ಹಾವೇರಿ, ಗದಗ, ಬೆಳಗಾವಿ ಜಿಲ್ಲೆಯ ಜನರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

Check Also

ಭಾರಿ ಬೆಲೆ ಬಾಳುವ ಅಕ್ರಮ ಮದ್ಯ ನಾಶ ಮಾಡಿದ ಅಬಕಾರಿ ಅಧಿಕಾರಿಗಳು

Spread the loveಕೊಳ್ಳೇಗಾಲ ಭಾ.ತ.ಮ 553 ಲೀಟರ್, ಬಿಯರ್ 2.64, ಸೇಂದಿ 46, ಕಳ್ಳ ಭಟ್ಟಿ ಸಾರಾಯಿ 19 ವರೆ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!