Breaking News
Hiring Reporter’s For more Information Contact Above Number 876 225 4007 . Program producer
Home / ರಾಜಕೀಯ / ಬೆಂಗಳೂರಿನಲ್ಲೇ ನಡೆಯುತ್ತಾ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ?

ಬೆಂಗಳೂರಿನಲ್ಲೇ ನಡೆಯುತ್ತಾ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ?

ಯಲಹಂಕ ಏರ್ ಫೋರ್ಸ್ ನಿಲ್ದಾಣದಲ್ಲಿ ನಡೆಯುವ ಪ್ರತಿಷ್ಠಿತ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದ 12ನೇ ಆವೃತ್ತಿಯು, ಬೆಂಗಳೂರಿನಿಂದ ಬೇರೆ ರಾಜ್ಯಕ್ಕೆ ಸ್ಥಳಾಂತರಗೊಳ್ಳಲಿದೆ ಎಂಬ ಊಹಾಪೋಹಕ್ಕೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಈ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವೆ ನಿರ್ಮಲಾ ಸೀತಾರಾಮನ್, ಏರ್ ಶೋ ನಡೆಸುವ ಬಗ್ಗೆ ಬೇರೆ ಬೇರೆ ರಾಜ್ಯಗಳು ಮನವಿ ಸಲ್ಲಿಸಿವೆ. ಆದರೆ ಇಲ್ಲಿಯವರೆಗೆ ಆ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಏರ್ ಶೋ ಸ್ಥಳಾಂತರದ ಬಗ್ಗೆ ಇನ್ನೂ ಕೂಡ ಯಾವುದೇ ಅಧಿಕೃತ ಪ್ರಕಟಣೆ ಹೊರಡಿಸಿಲ್ಲ. ಆದರೆ, ಈ ಮೊದಲು ಏರೋ ಇಂಡಿಯಾ ವೈಮಾನಿಕ ಪ್ರದರ್ಶನವನ್ನು ಬೆಂಗಳೂರಿನಿಂದ ಗೋವಾಗೆ ಸ್ಥಳಾಂತರಿಸಬಹುದು ಎಂದು ಸುದ್ದಿಯಾಗಿತ್ತು. ಇತ್ತೀಚೆಗೆ ಪ್ರತಿಷ್ಠಿತ ಏರೋ ಇಂಡಿಯಾ ವೈಮಾನಿಕ ಪ್ರದರ್ಶನವು ಉತ್ತರ ಪ್ರದೇಶಕ್ಕೆ ಶಿಫ್ಟ್ ಆಗಲಿದೆ ಎಂದು ಮಾಹಿತಿ ಲಭಿಸಿತ್ತು.
ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ರಕ್ಷಣಾ ಸಚಿವರು ಏರ್ ಶೋ ಸ್ಥಳಾಂತರದ ಬಗ್ಗೆ ಇದುವರೆಗೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ಬೆಂಗಳೂರಿನಲ್ಲೇ ನಡೆಯಲಿದೆಯೇ ಎಂಬುದನ್ನು ಕಾದುನೋಡಬೇಕಿದೆ

Share

About Shaikh BIG TV NEWS, Hubballi

Check Also

ಧರ್ಮೆಗೌಡ ಆತ್ಮಹತ್ಯೆ ಸ್ಥಳಕ್ಕೆ ಭೇಟಿ ನೀಡಿದ ಸಿ.ಟಿ. ರವಿ.

ಚಿಕ್ಕಮಗಳೂರು: ಪರಿಷತ್ ಉಪಸಭಾಪತಿ S.L.ಧರ್ಮೇಗೌಡ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಿಲ್ಲೆಯ ಕಡೂರು ತಾಲೂಕಿನ ಗುಣಸಾಗರ ಬಳಿ ತಡರಾತ್ರಿ 1.30ರ …

Leave a Reply

Your email address will not be published. Required fields are marked *

error: Content is protected !!