Breaking News
Hiring Reporter’s For more Information Contact Above Number 876 225 4007 . Program producer
Home / ಸುದ್ದಿ / ಕರ್ನಾಟಕ / ಮಂಗಳೂರು ನಗರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸುವಂತೆ ಅಭಿಯಾನ

ಮಂಗಳೂರು ನಗರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸುವಂತೆ ಅಭಿಯಾನ

ಮಂಗಳೂರು:- ದೇಶದಾದ್ಯಂತ ಅಕ್ಟೋಬರ್ 2 ರಿಂದ ಪ್ಲಾಸ್ಟಿಕ್ ಬಳಕೆ ಸಂಪೂರ್ಣ ನಿಷೇದ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಜನರಲ್ಲಿ ಪ್ಲಾಸಿಕ್ ಮುಕ್ತ ಮಾಡಲು ಜನಜಾಗ್ರತಿ ಮೂಡಿಸುವ ನಿಟ್ಟಿನಲ್ಲಿ ಪರಿಸರ ಅಧ್ಯಯನ ಕೇಂದ್ರ ನೆಲ್ಲಿಗುಡ್ಡೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ . ನಗರದ ಕೇಂದ್ರ ಮಾರುಕಟ್ಟೆ ಬಳಿ ಆಯೋಜಿಸಲಾಗಿದ್ದ ಅಭಿಯಾನಕ್ಕೆ ಪ್ರಾ .ಮಂಗಳೂರು ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಮೊಹಮ್ಮದ್ ನಜೀರ್ ಚಾಲನೆ ನೀಡಿದರು. ನಂತರ ಕೇಂದ್ರ ಮಾರುಕಟ್ಟೆ ಪ್ರದೇಶದಲ್ಲಿ ಹಲವಾರು ಜನರು ಪ್ಲಾಸ್ಟಿಕ್ ಬ್ಯಾಗ್ ಉಪಯೋಗಿಸಿದ್ದವರ ಹತ್ತಿರದಿಂದ ಪ್ಲಾಸ್ಟಿಕ್ ಬ್ಯಾಗ್ ಪಡೆದು ಬಟ್ಟೆಯ ಚೀಲ ನೀಡಲಾಯಿತು. ಅಲ್ಲದೇ ಕೈಗೆ ಒಂದು ಗುಲಾಬಿ ಹಾಗೂ ಪ್ಲಾಸ್ಟಿಕ್ ಬಳಕೆಯಿಂದ ಆಗುವ ದುಷ್ಪರಿಣಾಮಗಳ ಮಾಹಿತಿ ನೀಡುವ ಪುಸ್ತಕ ವೊಂದನ್ನು ಅವರಿಗೆ ನೀಡಿ ಪ್ಲಾಸ್ಟಿಕ್ ಬಗ್ಗೆ ಜನರಿಗೆ ಜಾಗೃತಿ ಮೂಡಿಸಲಾಯಿತು. ಇನ್ನೂ ಈ ಅಭಿಯಾನವು ಮುಂದಿನ ಒಂದು ತಿಂಗಳುಗಳ ಕಾಲ ನಡೆಯಲಿದ್ದು ನಗರದ ವಿವಿಧೆಡೆ ನಡೆಯಲಿದೆ. ಜೊತೆಗೆ ಅಕ್ಟೋಬರ್ 15 ರಿಂದ ಶಾಲೆಗಳಲ್ಲಿ ಪ್ಲಾಸಿಕ್ ಜಾಗ್ರತಿ ಅಭಿಯಾನ ನಡೆಯಲಿದ್ದು, ಶಾಲಾ ಮಕ್ಕಳಿಗೆ ಪ್ಲಾಸ್ಟಿಕ್ ದುಷ್ಪರಿಣಾಮಗಳ ಕುರಿತು ಪ್ರಭಂದ ಸ್ಪರ್ಧೆ ನಡೆಯಲಿದೆ. ಈ ಸಂದರ್ಭದಲ್ಲಿ ದಕ್ಷಿಣ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ನೆಲ್ಲಿಗುಡ್ಡೆ ಪರಿಸರ ಅಧ್ಯಯನ ಕೇಂದ್ರದ ಗಣೇಶ್ ನಾಯಕ ಸೇರಿದಂತೆ ಮುಂತಾದವರು ಹಾಜರಿದ್ದರು .

Share

About SRINIVAS BIG TV NEWS, MANGALORE

Check Also

Featured Video Play Icon

ಎಲ್ಲಡೆ ಶಿವನ ಆರಾಧನೆ ಭಕ್ತಿಯಲ್ಲಿ ಮಿಂದೆದ್ದ ಹುಬ್ಬಳ್ಳಿಯ ಜನರು | MAHA SHIVARATRI | BIG TV NEWS

Shaikh BIG TV NEWS, Hubballi See author's posts Share

Leave a Reply

Your email address will not be published. Required fields are marked *

error: Content is protected !!