Breaking News
Hiring Reporter’s For more Information Contact Above Number 876 225 4007 . Program producer
Home / ಸುದ್ದಿ / ಕರ್ನಾಟಕ / ಮಂಡ್ಯದ ಶ್ರೀ ಚಾಮುಂಡೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ವಿಜಯದಶಮಿ ನಿಮಿತ್ತ ಪಲ್ಲಕ್ಕಿ ಉತ್ಸವ

ಮಂಡ್ಯದ ಶ್ರೀ ಚಾಮುಂಡೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ವಿಜಯದಶಮಿ ನಿಮಿತ್ತ ಪಲ್ಲಕ್ಕಿ ಉತ್ಸವ

ಮಂಡ್ಯ :- ಜಿಲ್ಲೆಯ ವಿಠಲಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಣಿಗನಹಳ್ಳಿಯ ಶ್ರೀ ಚಾಮುಂಡೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ವಿಜಯದಶಮಿಯ ಅಂಗವಾಗಿ ದೇವಿಯ ಉತ್ಸವಮೂರ್ತಿಯ ಬೆಳ್ಳಿ ಪಲ್ಲಕಿ ಮೆರವಣಿಗೆಯು ಜಾನಪದ ಕಲಾತಂಡಗಳೊಂದಿಗೆ ಅದ್ದೂರಿಯಾಗಿ ನಡೆಯಿತು. ಮಹೇಶ್ವರಿ ವಂಶಸ್ಥರಾದ ಡಾ.ಕೆ.ಎನ್.ದಿನೇಶ್ ಅವರು ಶರನ್ನವರಾತ್ರಿ ಹಾಗೂ ವಿಜಯದಶಮಿಯ ಪೂಜಾ ಕಾರ್ಯಕ್ರಮಗಳ ನೇತೃತ್ವ ವಹಿಸಿದ್ದರು. ಈ ವೇಳೆ ಪೂಜಾ ಕುಣಿತ, ವೀರಭದ್ರ ನೃತ್ಯ ಹಾಗೂ ವೀರಗಾಸೆ ಕುಣಿತದ ಮೂಲಕ ಶ್ರೀ ಚಾಮುಂಡೇಶ್ವರಿ ದೇವಿಯ ಉತ್ಸವಮೂರ್ತಿಯನ್ನು ಬೆಳ್ಳಿಪಲ್ಲಕಿ ಉತ್ಸವದ ಮೂಲಕ ಮತ್ತಿಘಟ್ಟ, ಕಾಳೇಗೌಡನಕೊಪ್ಪಲು, ಯಡಹಳ್ಳಿ, ದೊದ್ದನಕಟ್ಟೆ ಹಾಗೂ ಮಣಿಗನಹಳ್ಳಿಯಲ್ಲಿ ಮೆರವಣಿಗೆ ನಡೆಸಿ, ಹೊಸಹೊಳಲು ದೊಡ್ಡಕೆರೆಯ ಕೋಡಿಯ ಹಳ್ಳದಲ್ಲಿ ಹರಿಯುತ್ತಿರುವ ನೀರಿನಲ್ಲಿ ತೆಪ್ಪೋತ್ಸವ ನಡೆಸಲಾಯಿತು. ಇನ್ನೂ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಭಕ್ತಾದಿಗಳಿಗೆ ಉಚಿತ ದಾಸೋಹ ಪ್ರಸಾದ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು. ಜಾನಪದ ಕಲಾತಂಡಗಳ ನೃತ್ಯ ವೈಭವವು ಬೆಳ್ಳಿ ಪಲ್ಲಕಿ ಮೆರವಣಿಗೆಯ ಸೌಂದರ್ಯವನ್ನು ಇಮ್ಮಡಿಗೊಳಿಸಿತ್ತು. ಇದೇ ಸಂದರ್ಭದಲ್ಲಿ ಬನ್ನಿ ಮರಕ್ಕೆ ವಿಶೇಷಪೂಜೆ ಸಲ್ಲಿಸಿ ಬನ್ನಿಮರದ ಎಲೆಗಳನ್ನು ನೀಡಿ ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳಲಾಯಿತು.

Share

About Bora nayak BIG TV NEWS, Mandya

Check Also

Featured Video Play Icon

ಎಲ್ಲಡೆ ಶಿವನ ಆರಾಧನೆ ಭಕ್ತಿಯಲ್ಲಿ ಮಿಂದೆದ್ದ ಹುಬ್ಬಳ್ಳಿಯ ಜನರು | MAHA SHIVARATRI | BIG TV NEWS

Shaikh BIG TV NEWS, Hubballi See author's posts Share

Leave a Reply

Your email address will not be published. Required fields are marked *

error: Content is protected !!