Hiring Reporter’s For more Information Contact Above Number 876 225 4007 . Program producer
Home / ಸುದ್ದಿ / ಮಣಕವಾಡದಲ್ಲಿ ವಿಜೃಂಭಣೆಯ ರೈತ ಸಮಾವೇಶ

ಮಣಕವಾಡದಲ್ಲಿ ವಿಜೃಂಭಣೆಯ ರೈತ ಸಮಾವೇಶ

Spread the love

ಧಾರವಾಡ: ಜಿಲ್ಲೆಯ ಮಣಕವಾಡ ಗ್ರಾಮದಲ್ಲಿ ಆಯೋಜಿಸಲಾಗಿರುವ ದೇವಮಂದಿರದ ಸಿದ್ಧರಾಮದೇವರ ಚರಪಟ್ಟಾಧಿಕಾರ ಕಾರ್ಯಕ್ರಮದ ಅಂಗವಾಗಿ ಶನಿವಾರ ಆಯೋಜಿಸಲಾಗಿದ್ದ ಬೃಹತ್ ರೈತ ಸಮಾವೇಶ ಉದ್ಘಾಟನೆಯನ್ನು ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ನೆರವೇರಿಸಿದರು.ಬಳಿಕ ಮಾತನಾಡಿದ ಅವರು, ಮಣಕವಾಡ ಗ್ರಾಮದಲ್ಲಿ ಸಿದ್ಧರಾಮದೇವರ ಚರಪಟ್ಟಾಧಿಕಾರ ನೆರವೇರುತ್ತಿರುವುದು ಸಂತೋಷದ ಸಂಗತಿಯಾಗಿದೆ. ಅಲ್ಲದೇ ಬೃಹತ್ ಮಟ್ಟದಲ್ಲಿ ರೈತ ಸಮಾವೇಶ ಕೈಗೊಂಡಿರುವುದು ಶ್ಲಾಘನೀಯ ಸಂಗತಿಯಾಗಿದೆ. ಇಂದಿನ ದಿನಮಾನಗಳಲ್ಲಿ ಧಾರ್ಮಿಕ ಕಾರ್ಯಕ್ರಮದಲ್ಲಿ ಜನರ ಸಹಭಾಗಿತ್ವ ನೋಡಿದರೇ ನಿಜವಾಗಿಯೂ ಅಚ್ಚರಿಯಾಗುತ್ತದೆ ಎಂದರು.ನಂತರ ಮಾತನಾಡಿದ ಕೂಡಲಸಂಗಮ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮಿಜಿ, ಹರಗುರು ಚರ ಮೂರ್ತಿ ಸನ್ನಿಧಾನದಲ್ಲಿ ಸಿದ್ಧರಾಮದೇವರ ಚರಪಟ್ಟಾಧಿಕಾರ ಕಾರ್ಯಕ್ರಮ ಹಮ್ಮಿಕೊಂಡಿರುವುದು ವಿಶೇಷವಾಗಿದೆ. ಅಲ್ಲದೇ ಮೃತ್ಯುಂಜಯ ಮಹಾಸ್ವಾಮಿಗಳು ತಮ್ಮ ಜೀವನದ ಸಾರ್ಥಕತೆಯನ್ನು ಸಮಾಜದ ಉದ್ಧಾರಕ್ಕಾಗಿ ವಿನಿಯೋಗಿಸಿದ್ದಾರೆ.ಅವರು ಸಮಾಜಕ್ಕೆ ನೀಡಿದ ಕೊಡುಗೆ ಸ್ಮರಣೀಯವಾಗಿದೆ ಎಂದು ಅವರು ತಿಳಿಸಿದರು. ರಾಜ್ಯದಲ್ಲಿ ಬರಗಾಲದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಮುಂಬರುವ ದಿನಗಳಲ್ಲಿ ವರುಣ ದೇವ ಕಣ್ತೆರೆದು ಭೂತಾಯಿಯ ಮಡಿಲನ್ನು ಸಂತೈಸಲಿ ಎಂದು ಅವರು ಆಶಿಸಿದರು.ಕಾರ್ಯಕ್ರಮದಲ್ಲಿ ಶಿವಾನಂದ ಮಹಾಸ್ವಾಮಿಗಳು, ಪ್ರಭುಲಿಂಗ ಮಹಾಸ್ವಾಮಿಗಳು, ಸಿದ್ಧಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು, ಶಿವಕುಮಾರ ಮಹಾಸ್ವಾಮಿಗಳು, ಕೈವಲ್ಯಾನಂದ ಮಹಾಸ್ವಾಮಿಗಳು ಸಮ್ಮುಖ ವಹಿಸಿದ್ದರು.

Check Also

ಮೈಸೂರು ದಸರಾ, ಎಷ್ಟೊಂದು ಸುಂದರ, ಜಂಬೂ ಸವಾರಿ; ನೋಡೋಣ ಬನ್ನಿ ರೀ.. !

Spread the loveಬೆಂಗಳೂರು: ವಿಶ್ವ ವಿಖ್ಯಾತ ಮೈಸೂರು ದಸರಾವನ್ನು ಈ ಬಾರಿ ಸರಳವಾಗಿ ಆಚರಿಸಲಾಯಿತು. ಕೋರೊನಾ ಹಿನ್ನಲೆಯಲ್ಲಿ ಸಾವಿರಾರು ಜನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!