Breaking News
Hiring Reporter’s For more Information Contact Above Number 876 225 4007 . Program producer
Home / ಸುದ್ದಿ / ಕರ್ನಾಟಕ / ಮಹಾರಾಷ್ಟ್ರದ ನಾಗಪುರ ದೀಕ್ಷಾ ಭೂಮಿ ಯಾತ್ರೆಗೆ ಚಾಲನೆ.

ಮಹಾರಾಷ್ಟ್ರದ ನಾಗಪುರ ದೀಕ್ಷಾ ಭೂಮಿ ಯಾತ್ರೆಗೆ ಚಾಲನೆ.

ಮಂಡ್ಯ: ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯ 7 ತಾಲ್ಲೂಕಿನಿಂದ 80 ಮಂದಿಗೆ ಮಹಾರಾಷ್ಟ್ರದ ನಾಗಪುರ ದೀಕ್ಷಾ ಭೂಮಿ ಯಾತ್ರೆಗೆ ಆಯೋಜಿಸಲಾದ ಎರಡು ವೊಲ್ವೋ ಬಸ್‍ಗಳಿಗೆ ಮಂಡ್ಯ ಬೆಂಗಳೂರು ಮುಖ್ಯ ರಸ್ತೆಯಲ್ಲಿರುವ ಮೆಟ್ರಿಕ್ ಪೂರ್ವ ಬಾಲಕ ವಿದ್ಯಾರ್ಥಿನಿಲಯ ಮುಂಭಾಗ ಇಂದು ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳಾದ ಮಾಲತಿ ಅವರು, ಜಿಲ್ಲೆಯ 7 ತಾಲ್ಲೂಕಿನಿಂದ 80 ಮಂದಿ ಆಯ್ಕೆಯಾಗಿದ್ದು, ಪ್ರಯಾಣದ ವೆಚ್ಚವನ್ನು ಸರ್ಕಾರ ಭರಿಸಲಿದೆ ಎಂದು ಅವರು ತಿಳಿಸಿದರು.ಬಳಿಕ ಮಾತನಾಡಿದ ದಲಿತ ಸಂಘರ್ಷ ಸಮಿತಿಯ ಮುಖಂಡರಾದ ಎಂ.ಬಿ.ಶ್ರೀನಿವಾಸ್ ಡಾ. ಬಿ.ಆರ್.ಅಂಬೇಡ್ಕರ್ ಅವರು ಯಾವುದೇ ಜಾತಿ, ಧರ್ಮ ಭೇಧ ಭಾವವಿಲ್ಲದೆ ಎಲ್ಲರೂ ಒಂದೆ ಎಂದು ಮಾನವೀಯ ಮೌಲ್ಯಗಳನ್ನು ತೋರಿಸಿಕೊಟ್ಟವರು ಎಂದು ತಿಳಿಸಿದ ಅವರು ಪ್ರಯಾಣ ಸುಖಕರವಾಗಿ ಇರಲಿ ಎಂದರು. ಇಂದಿನ ಸಮಾಜದಲ್ಲಿ ಬಾಬಾ ಸಾಹೇಬ ಅಂಬೇಡ್ಕರ್ ಅವರ ಅಲೋಚನೆಗಳನ್ನು ಅರಿಯಬೇಕಿದೆ.ಬುದ್ಧನು ಗಿಡ, ಮರ, ಪ್ರಾಣಿ ಪಕ್ಷಿಗಳಿಗೆ ಜಾತಿ ಇದೆ ಮಾನವರಿಗೆ ಜಾತಿ ಇಲ್ಲ ಎನ್ನುವ ಏಕೈಕ ಧರ್ಮ ಎಂದರೆ ಅದು ಬೌದ್ಧ ಧರ್ಮ ಎಂದು ಅವರು ತಿಳಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ವಾರ್ತಾಧಿಕಾರಿ ಹರೀಶ್, ಮಂಡ್ಯ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ನಾಗರತ್ನ ಹಾಗೂ ಸಮುದಾಯ ಮುಖಂಡರುಗಳು ಉಪಸ್ಥಿತರಿದ್ದರು.

Share

About Bora nayak BIG TV NEWS, Mandya

Check Also

Featured Video Play Icon

ಎಲ್ಲಡೆ ಶಿವನ ಆರಾಧನೆ ಭಕ್ತಿಯಲ್ಲಿ ಮಿಂದೆದ್ದ ಹುಬ್ಬಳ್ಳಿಯ ಜನರು | MAHA SHIVARATRI | BIG TV NEWS

Shaikh BIG TV NEWS, Hubballi See author's posts Share

Leave a Reply

Your email address will not be published. Required fields are marked *

error: Content is protected !!