Breaking News
Hiring Reporter’s For more Information Contact Above Number 876 225 4007 . Program producer
Home / ಸುದ್ದಿ / ಕರ್ನಾಟಕ / ಮಹಿಳೆಯರ ರಕ್ಷಣೆಗೆ ಪಿಂಕ್ ಗ್ರೂಪ್ ರಚನೆ: ಡಾ.ಪಿ.ಎಸ್.ಹರ್ಷ

ಮಹಿಳೆಯರ ರಕ್ಷಣೆಗೆ ಪಿಂಕ್ ಗ್ರೂಪ್ ರಚನೆ: ಡಾ.ಪಿ.ಎಸ್.ಹರ್ಷ

ಮಂಗಳೂರು: ನಗರದಲ್ಲಿ ಮಹಿಳೆಯ ರು ವಿದ್ಯಾರ್ಥಿ ನಿಯರ ದೂರುಗಳ ಬಗ್ಗೆ ತ್ವರಿತ ಗಮನಹರಿಸಲು ಪಿಂಕ್ ಗ್ರೂಫ್ ಎಂಬ ವಾಟ್ಸಫ್ ಗ್ರೂಪ್ ಒಂದನ್ನು ರಚಿಸಲಾಗುವುದು ಎಂದು ಪೊಲೀಸ್ ಕಮೀಷನರ್ ಡಾ.ಪಿ.ಎಸ್ .ಹರ್ಷ ತಿಳಿಸಿದ್ದಾರೆ.ದಕ್ಷಿಣ ಕನ್ನಡ ಕಾರ್ಯನಿರತಪತ್ರಕರ್ತರ ಸಂಘ ,ದ.ಕ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮತ್ತು ಬೆಸೆಂಟ್ ಮಹಿಳಾ ಕಾಲೇಜ್ ಸಹಯೋಗ ದೊಂದಿಗೆ ಬ್ರ್ಯಾಂಡ್ ಮಂಗಳೂರು ಕಾರ್ಯಕ್ರಮದ ಅಂಗವಾಗಿ ಶಾಲಾ ಕಾಲೇಜುಗಳಲ್ಲಿ ಮಾದಕ ದ್ರವ್ಯ, ಸೈಬರ್ ಕ್ರೈಂ ವಿರುದ್ಧ ಅಭಿಯಾನದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಮಂಗಳೂರು ಪೊಲೀಸ್ ಆಯುಕ್ತಾಲಯದ ವ್ಯಾಪ್ತಿಯಲ್ಲಿ ಜನಸ್ನೇಹಿ ಪೊಲೀಸ್ ವ್ಯವಸ್ಥೆ ಯ ಭಾಗವಾಗಿ ಮೈಬೀಟ್ ಮೈ ಪ್ರೈಡ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಅದೇ ರೀತಿ ಮಹಿಳೆಯರು, ವಿದ್ಯಾರ್ಥಿನಿಯರ ಸುರಕ್ಷತೆಯ ದೃಷ್ಟಿಯಿಂದ ಅವರ ನೆರವಿಗೆ ಮತ್ತು ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಅನುಕೂಲವಾಗುವಂತೆ ಈ ವಾಟ್ಸಫ್ ಗ್ರೂಪ್ ನ್ನು ರಚಿಸಲಾಗುವುದು ಎಂದು ಡಾ.ಹರ್ಷ ತಿಳಿಸಿದ್ದಾರೆ.ವಿದ್ಯಾರ್ಥಿಗಳು ಮಾದಕ ದ್ರವ್ಯದ ಚಟಕ್ಕೆ ಬಲಿಯಾಗದಿರಬೇಕಾದರೆ ತಮ್ಮ ಚಟುವಟಿಕೆಗಳನ್ನು ಮನಸ್ಸಿಗೆ ಮುದನೀಡುವ ಹವ್ಯಾಸಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು. ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಮ್ ಪ್ರಕರಣಗಳು ಹೆಚ್ಚುತ್ತಿದೆ. ಈ ಬಗ್ಗೆ ಎಚ್ಚರದಿಂದಿರಬೇಕು. ಅಪರಿಚಿರು ನಮ್ಮ ಮಾಹಿತಿಗಳನ್ನು ಪಡೆದುಕೊಂಡು ನಮಗೆ ವಂಚಿಸುವ ಸಾಧ್ಯತೆಗಳ ಎಚ್ಚರ ವಹಿಸಬೇಕಾದ ಅಗತ್ಯವಿದೆ ಎಂದರು.ವಿದ್ಯಾರ್ಥಿಗಳ ಸಂವಾದಗೋಷ್ಠಿ : ವಿದ್ಯಾರ್ಥಿನಿಯರ ಪ್ರಶ್ನೆಗಳಿಗೆ ಉತ್ತರಿಸುತ್ತಾ, ಮಾದಕವ್ಯಸನಕ್ಕೆ ಬಲಿಯಾದವರನ್ನು ಹೊರತರುವುದಕ್ಕೆ ಆಪ್ತ ಸಲಹೆ,ಕೆಲವೊಮ್ಮೆ ಅಮಲು ವ್ಯಸನದಿಂದ ಹೊರಬರಲು ಚಿಕಿತ್ಸೆಯ ಅಗತ್ಯವೂ ಕಂಡು ಬರಬಹುದು ಎಂದರು.ಸಮಾಜದಲ್ಲಿ ಅಪರಾಧಗಳನ್ನು ತಡೆಯಲು ಜವಾಬ್ದಾರಿಯುತ ನಾಗರಿಕರ ಪಾತ್ರವೂ ಮುಖ್ಯ. ಅಪರಾಧ ಸಂಭವಿಸಿದ ತಕ್ಷಣ ಈ ಬಗ್ಗೆ ಪೊಲೀಸರಿಗೆ ತಿಳಿಸುವ ತಕ್ಷಣ ಕ್ರಮ ಕೈಗೊಳ್ಳಲು ಪೊಲೀಸರಿಗೆ ಮಾಹಿತಿ ನೀಡಿದಂತಾಗುತ್ತದೆ.ಅದಕ್ಕಾಗಿ ತುರ್ತು ಕರೆ,ವಾಟ್ಸಫ್, ಇ ಮೇಲ್ ಗಳನ್ನು ಬಳಸಬಹುದು ಎಂದು ಪೊಲೀಸ್ ಕಮೀಷನರ್ ಹರ್ಷ ತಿಳಿಸಿದ್ದಾರೆ.ಸಮಾರಂಭದಲ್ಲಿ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷ ತೆ ವಹಿಸಿದ್ದರು. ಬೆಸೆಂಟ್ ಶಿಕ್ಷಣ ಸಂಸ್ಥೆಗಳ ಸಂಚಾಲಕ ದೇವಾನಂದ ಪೈ,ಕಾಲೇಜಿನ ಪ್ರಾಂಶುಪಾಲ ಸತೀಶ್ ಕುಮಾ ರ್ ಶೆಟ್ಟಿ, ಮೊದಲಾದವರು ಉಪಸ್ಥಿತರಿ ದ್ದರು.ಉಪನ್ಯಾಸಕಿ ಸ್ಮಿತಾ ಶೆಣೈ ಕಾರ್ಯ ಕ್ರಮ ನಿರೂಪಿಸಿದರು.ಪತ್ರಕರ್ತ ಆತ್ಮಭೂ ಷಣ್ ಸ್ವಾಗತಿಸಿದರು. ಹರೀಶ್ ಮೋಟು ಕಾನ ವಂದಿಸಿದರು.

Share

About SRINIVAS BIG TV NEWS, MANGALORE

Check Also

Featured Video Play Icon

ಎಲ್ಲಡೆ ಶಿವನ ಆರಾಧನೆ ಭಕ್ತಿಯಲ್ಲಿ ಮಿಂದೆದ್ದ ಹುಬ್ಬಳ್ಳಿಯ ಜನರು | MAHA SHIVARATRI | BIG TV NEWS

Shaikh BIG TV NEWS, Hubballi See author's posts Share

Leave a Reply

Your email address will not be published. Required fields are marked *

error: Content is protected !!