Breaking News
Hiring Reporter’s For more Information Contact Above Number 876 225 4007 . Program producer
Home / ಸುದ್ದಿ / ಕರ್ನಾಟಕ / ಮಾಜಿ ಡಿಸಿಎಂ ಆರ್​.ಅಶೋಕ್​ಗೆ ‘ಭೂ’ ಕಂಟಕ..!

ಮಾಜಿ ಡಿಸಿಎಂ ಆರ್​.ಅಶೋಕ್​ಗೆ ‘ಭೂ’ ಕಂಟಕ..!

ಬೆಂಗಳೂರು: ಮಾಜಿ ಡಿಸಿಎಂ ಆರ್.ಅಶೋಕ್​​ಗೆ ಮತ್ತೆ ಸಂಕಷ್ಟ ಎದುರಾಗಿದೆ. ಸೋಮನಹಳ್ಳಿಯ ಬಗರ್ ಹುಕ್ಕುಂ ಭೂ ಪ್ರದೇಶವನ್ನು ಅಕ್ರಮ ಮಾಡಿಕೊಂಡಿರುವ ಆರೋಪ ಸಂಬಂಧ ಆರ್.ಅಶೋಕ್ ವಿರುದ್ಧ ಎಸಿಬಿ ತನಿಖೆಗೆ ಹೈಕೋರ್ಟ್ ಅಸ್ತು ಎಂದಿದೆ.
ಎಸಿಬಿ ದಾಖಲಿಸಿದ್ದ ಎಫ್​ಐಆರ್​ ರದ್ದು ಮಾಡುವಂತೆ ಕೋರಿ ಆರ್​.ಅಶೋಕ್ ಹೈಕೋರ್ಟ್​ ಮೆಟ್ಟಿಲೇರಿದ್ದರು. ಇಂದು ವಿಚಾರಣೆ ನಡೆಸಿದ ಹೈಕೋರ್ಟ್​, ಎಫ್ ಐಆರ್ ರದ್ದು ಮಾಡಲು ನಿರಾಕರಿಸಿದೆ.
ಮೇಲ್ನೋಟಕ್ಕೆ ಅಕ್ರಮ ನಡೆದಿರುವುದು ಸಾಬೀತಾಗುವುಂತೆ ಕಾಣುತ್ತಿದೆ. ಭ್ರಷ್ಟಚಾರ ನಿಯಂತ್ರಣ ಕಾಯ್ದೆಯಡಿ ತನಿಖೆ ನಡೆಸುವುದು ಉತ್ತಮ. ಎಸಿಬಿ ಪ್ರಕರಣದ ತನಿಖೆಯನ್ನ ನಡೆಸಲಿ ಅಂತಾ ಹೈಕೋರ್ಟ್​ ಆದೇಶ ನೀಡಿದೆ. ಅಲ್ಲದೇ ಆರ್​.ಅಶೋಕ್ ಎಫ್​ಐಆರ್​ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನೂ ವಜಾ ಮಾಡಿ ನ್ಯಾಯಮೂರ್ತಿ ಆರ್.ಬಿ.ಬೂದಿಹಾಳ್ ಆದೇಶ ಹೊರಡಿಸಿದ್ದಾರೆ.
ಏನಿದು ಆರೋಪ..?
ಈ ಹಿಂದೆ ಆರ್​.ಅಶೋಕ್, ಬೆಂಗಳೂರು ಉತ್ತರ ತಾಲೂಕಿನ ಭೂ ಪರಿವರ್ತನೆ ಸಮಿತಿಯ ಅಧ್ಯಕ್ಷರಾಗಿದ್ದರು. ಈ ವೇಳೆ ಸೋಮನಹಳ್ಳಿಯ 8 ಎಕರೆ ಬಗರ್ ಹುಕ್ಕುಂ ಭೂ ಪ್ರದೇಶವನ್ನು ಅಕ್ರಮ ಮಾಡಿದ ಆರೋಪ ಮಾಜಿ ಡಿಸಿಎಂ ಆರ್​.ಅಶೋಕ್ ಎದುರಿಸುತ್ತಿದ್ದಾರೆ. ಈ ಸಂಬಂಧ ಬಿಎಂಟಿಎಫ್ ಅಶೋಕ್ ವಿರುದ್ಧ ಎಫ್​ಐಆರ್​ ದಾಖಲಿಸಿತ್ತು. ಇದನ್ನ ಪ್ರಶ್ನಿಸಿ ಆರ್.ಅಶೋಕ್, ರಾಜಕೀಯ ದುರುದ್ದೇಶದಿಂದ ನನ್ನ ಮೇಲೆ ಎಫ್ಐಆರ್ ದಾಖಲಾಗಿದೆ. ಕೂಡಲೇ ಎಫ್​ಐಆರ್ ರದ್ದು ಮಾಡಬೇಕು ಎಂದು ಕೋರಿ ಹೈಕೋರ್ಟ್​ ಮೆಟ್ಟಿಲೇರಿದ್ದರು. ಇದರ ವಿಚಾರಣೆ ನಡೆಸಿದ್ದ ಹೈಕೋರ್ಟ್, ಎಫ್​ಐಆರ್​ ರದ್ದು ಮಾಡಿ ತನಿಖೆಗೆ ತಡೆ ನೀಡಿತ್ತು.
ಇದೀಗ ಮತ್ತೆ ತನಿಖೆಯನ್ನ ಎಸಿಬಿ ಕೈಗೆತ್ತಿಕೊಂಡು ಆರ್​ಅಶೋಕ್ ವಿರುದ್ಧ ಎಫ್​ಐಆರ್ ದಾಖಲಿಸಿತ್ತು. ಅದನ್ನ ಪ್ರಶ್ನಿಸಿ ಆರ್​.ಅಶೋಕ್ ಹೈಕೋರ್ಟ್​ ಮೇಟ್ಟಿಲೇರಿದ್ದರು. ಇಂದು ವಿಚಾರಣೆ ನಡೆಸಿದ ಹೈಕೋರ್ಟ್​, ಎಸಿಬಿ ತನಿಖೆ ನಡೆಸಲು ಅಸ್ತು ಎಂದಿದೆ. ಈ ಹಿನ್ನೆಲೆಯಲ್ಲಿ ಆರ್​ಅಶೋಕ್​ಗೆ ಮತ್ತೆ ಸಂಕಷ್ಟ ಎದುರಾಗಿದೆ.

Share

About Shaikh BIG TV NEWS, Hubballi

Check Also

Featured Video Play Icon

ಎಲ್ಲಡೆ ಶಿವನ ಆರಾಧನೆ ಭಕ್ತಿಯಲ್ಲಿ ಮಿಂದೆದ್ದ ಹುಬ್ಬಳ್ಳಿಯ ಜನರು | MAHA SHIVARATRI | BIG TV NEWS

Shaikh BIG TV NEWS, Hubballi See author's posts Share

Leave a Reply

Your email address will not be published. Required fields are marked *

error: Content is protected !!