Breaking News
Hiring Reporter’s For more Information Contact Above Number 876 225 4007 . Program producer
Home / ಸುದ್ದಿ / ಕರ್ನಾಟಕ / ಯುವಜನತೆ ಮೊಬೈಲ್ ಗೀಳು ಬಿಟ್ಟು ಓದುವ ಹವ್ಯಾಸ ಬೆಳೆಸಿಕೊಳ್ಳಲು ಸಾಹಿತಿ ಕುಮಾರಸ್ವಾಮಿ ಕರೆ.

ಯುವಜನತೆ ಮೊಬೈಲ್ ಗೀಳು ಬಿಟ್ಟು ಓದುವ ಹವ್ಯಾಸ ಬೆಳೆಸಿಕೊಳ್ಳಲು ಸಾಹಿತಿ ಕುಮಾರಸ್ವಾಮಿ ಕರೆ.

ಮಂಡ್ಯ : ಯುವಜನರು ಮೊಬೈಲ್ ಪ್ರಪಂಚದಲ್ಲಿ ಮುಳುಗಿ ಸ್ವಾಭಿಮಾನ ಕಳೆದುಕೊಳ್ಳದೇ ಕನ್ನಡ ಪುಸ್ತಕಗಳು ಮತ್ತು ಪತ್ರಿಕೆಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಲು ಸಾಹಿತಿ ಶಿ.ಕುಮಾರಸ್ವಾಮಿ ಕರೆ ನೀಡಿದರು.ಕೆ.ಆರ್.ಪೇಟೆ ಪಟ್ಟಣದ ಮಹಿಳಾ ಸರ್ಕಾರಿ ಪ್ರಥಮದರ್ಜೆ ಕಾಲೇಜಿಗನ ಗ್ರಂಥಾಲಯಕ್ಕೆ 100ವಿವಿಧ ಕನ್ನಡ ಪುಸ್ತಕಗಳನ್ನು ಹಸ್ತಾಂತರಿಸಿ, ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಿ ಮಾತನಾಡಿದ ಅವರು, ಕನ್ನಡ ಭಾಷೆಯು ಅತ್ಯಂತ ಪ್ರಾಚೀನ ಭಾಷೆಯಾಗಿದ್ದು ವಿಶ್ವದ ಜಾಗತಿಕ ಭಾಷೆಗೆ ಸರಿಸಮನಾಗಿದೆ.ವಿಶ್ವದಲ್ಲಿ ಅತೀ ಹೆಚ್ಚು ಜನರು ಬಳಸುವ ಶ್ರೀಮಂತ ಕನ್ನಡ ಭಾಷೆಯನ್ನು ನಾಶಪಡಿಸಲು ಯಾರಿಂದಲೂ ಸಾಧ್ಯವಿಲ್ಲ. ಕನ್ನಡಿಗರಾದ ನಾವು ಭಾಷೆ ನಾಡು ನುಡಿಯ ಬಗ್ಗೆ ನಿರಭಿಮಾನಿಗಳಾಗದೇ ಅಭಿಮಾನವನ್ನು ಬೆಳೆಸಿಕೊಳ್ಳಬೇಕು.ಕನ್ನಡಿಗರು ನಾವೆನ್ನಲು ಹೆಮ್ಮೆಪಡಬೇಕು ಎಂದು ವಿಶ್ರಾಂತ ಪ್ರಾಂಶುಪಾಲರಾದ ಶಿ.ಕುಮಾರಸ್ವಾಮಿ ಅಭಿಮಾನದಿಂದ ಹೇಳಿದರು.ಯುವಜನರು ನಮ್ಮ ನೆಲ, ಜಲ, ಭಾಷೆಯ ಬಗ್ಗೆ ವಿಶೇಷವಾದ ಅಭಿಮಾನವನ್ನು ಬೆಳೆಸಿಕೊಳ್ಳಬೇಕು.ಯುವಜನರು ಮೊಬೈಲ್ ಪೋನಿನ ದಾಸರಾಗದೇ ಪುಸ್ತಕಗಳು ಹಾಗೂ ಪತ್ರಿಕೆಗಳನ್ನು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು. ಕನ್ನಡ ಭಾಷೆಯ ಶ್ರೀಮಂತ ಸಂಸ್ಕೃತಿಯ ಬಗ್ಗೆ ವಿಶೇಷ ಅಭಿಮಾನವನ್ನು ಬೆಳೆಸಿಕೊಂಡು ಸಮಾಜಮುಖಿಯಾಗಿ ಹೆಜ್ಜೆಹಾಕಿ ಸಾಧನೆ ಮಾಡಬೇಕು ಎಂದು ಶಿ.ಕುಮಾರಸ್ವಾಮಿ ಮನವಿ ಮಾಡಿದರು.ಕಾಲೇಜಿನ ಪ್ರಾಂಶುಪಾಲರಾದ ಡಾ.ಸಿ.ರಮೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಪ್ರಾಧ್ಯಾಪಕರಾದ ಜಯಕೀರ್ತಿ ಮತ್ತು ತಾಲೂಕು ಕಸಾಪ ಮಾಜಿಅಧ್ಯಕ್ಷ ಕೆ.ಆರ್.ನೀಲಕಂಠ ಕಾರ್ಯಕ್ರಮದಲ್ಲಿ ಮಾತನಾಡಿದರು.ಕನ್ನಡ ಅಧ್ಯಾಪಕರಾದ ನಂಜುಂಡಯ್ಯ, ಧನಂಜಯ, ವಸಂತಕುಮಾರ್, ರಾಜಣ್ಣ, ಕನ್ನಡದ ಪರಿಚಾರಕ ಕೆ.ಜೆ.ನಾಗರಾಜು ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Share

About Bora nayak BIG TV NEWS, Mandya

Check Also

Featured Video Play Icon

ಎಲ್ಲಡೆ ಶಿವನ ಆರಾಧನೆ ಭಕ್ತಿಯಲ್ಲಿ ಮಿಂದೆದ್ದ ಹುಬ್ಬಳ್ಳಿಯ ಜನರು | MAHA SHIVARATRI | BIG TV NEWS

Shaikh BIG TV NEWS, Hubballi See author's posts Share

Leave a Reply

Your email address will not be published. Required fields are marked *

error: Content is protected !!