Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಯೋಜನೆ ಮನೆಗಳು ಶೀಘ್ರವೇ ಫಲನುಭವಿಗಳ ಕೈ ಸೇರಲಿವೆ! ಶಾಸಕ ಅರವಿಂದ್ ಬೆಲ್ಲದ ವಿಶ್ವಾಸ

ಯೋಜನೆ ಮನೆಗಳು ಶೀಘ್ರವೇ ಫಲನುಭವಿಗಳ ಕೈ ಸೇರಲಿವೆ! ಶಾಸಕ ಅರವಿಂದ್ ಬೆಲ್ಲದ ವಿಶ್ವಾಸ

ಹುಬ್ಬಳ್ಳಿ: ಆಶ್ರಯ ಯೋಜನೆ ಮನೆಗಳ ಕಾಮಗಾರಿ ಸಂಪೂರ್ಣ ಮುಕ್ತಾಯ ಹಂತಕ್ಕೆ ಬಂದಿದ್ದು ಇನ್ನೇನು ಕೆಲವೇ ದಿನಗಳಲ್ಲಿ ಫಲಾನುಭವಿಗಳಿಗೆ ಲಭ್ಯವಾಗಲಿವೆ ಎಂದು ಹುಬ್ಬಳ್ಳಿ ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ್ ಬೆಲ್ಲದ ವಿಶ್ವಾಸ ವ್ಯಕ್ತ ಪಡಿಸಿದರು.

ನಗರದಲ್ಲಿದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಸತಿ ರಹಿತ ಸ್ಲಮ್ ನಿವಾಸಿಗಳಿಗೆ ಆಶ್ರಯ ಯೋಜನೆಯಡಿ ಮನೆ ನಿರ್ಮಾಣ ಕಾಮಗಾರಿಯನ್ನು ಕಳೆದ ಎರಡಮೂರು ವರ್ಷಗಳ ಹಿಂದೆಯೇ ಭೂಮಿ ಪೂಜೆ ಮಾಡಲಾಗಿತ್ತು. ಆದರೆ ಆ ಸಮಯದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿ ಇದ್ದಿದ್ದರಿಂದ ಅನುದಾನ ನೀಡೋದನ್ನ ತಡೆ ಹಿಡಿದಿದ್ದರು. ನಂತರ ನಮ್ಮ ಪಕ್ಷ ಅಧಿಕಾರಕ್ಕೆ ಬಂದಮೇಲೆ ಸಮರ್ಪಕ ಅನುದಾನ ಬಿಡುಗಡೆ ಮಾಡಿ ಕಾಮಗಾರಿ ಸಂಪೂರ್ಣವಾಗಿ ಮುಗಿಸಿದ್ದೇವೆ. ಇನ್ನೂ ಕೆಲವೇ ದಿನಗಳಲ್ಲಿ ಆಶ್ರಯ ಮನೆಗಳ ಉಪಯೋಗವನ್ನ ಜನ ಫಲಾನುಭವಿಗಳು ಪಡೆಯಲಿದ್ದಾರೆ ಎಂದು ತಿಳಿಸಿದರು.

ಇನ್ನೂ ಹುಧಾ ಪಾಲಿಕೆ ಚುನಾವಣೆಯಲ್ಲಿ ಪಕ್ಷದ ವಿರುದ್ದ ಬಂಡಾಯ ಎದ್ದು ಸ್ಪರ್ಧೆ ಮಾಡಿದಂತಹ ಅಭ್ಯರ್ಥಿಗಳನ್ನ ಪಕ್ಷಕ್ಕೆ ಸೇರಿಸಿಕೊಳ್ಳುವ ಕುರಿತು ಪ್ರತಿಕ್ರಿಯಿಸಿದ ಅವರು, ವಾರ್ಡ್ ಭಾಗದಲ್ಲಿ ಸ್ಥಳೀಯರ ಸಲಹೆ ಪಡೆದು ಪಕ್ಷದ ಮುಖಂಡರು ತೀರ್ಮಾನ ತುಗೋತಾರೆ. ನಾವು ಯಾವ ಅಭ್ಯರ್ಥಿಗೂ ಟಿಕೆಟ್ ಕೊಡ್ತೇವೇ ಅಂಥಾ ಆಶ್ವಾಸನೆ ನೀಡಿರಲಿಲ್ಲ. ಆದರೆ ಆಕಾಂಕ್ಷಿಗಳ ಸಂಖ್ಯೆಯೆ ಹೆಚ್ಚಾಗಿದ್ದರಿಂದ ಟಿಕೆಟ್ ಹಂಚಿಕೆಯಲ್ಲಿ ಗೊಂದಲ ಉಂಟಾಗಿತ್ತು ಆದ್ದರಿಂದ ಕೆಲವರು ಪಕ್ಷದ ವಿರುದ್ದ ಬಂಡಾಯ ಎದ್ದು ಸ್ಪರ್ಧೆ ಮಾಡಿದ್ದರು. ಅಂಥವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಕುರಿತು ತೀರ್ಮಾನ ಮಾಡಲಾಗುವುದು ಎಂದರು.

Share

About Shaikh BIG TV NEWS, Hubballi

Check Also

ಡಿಕೆಶಿ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. …

Leave a Reply

Your email address will not be published. Required fields are marked *

error: Content is protected !!