Hiring Reporter’s For more Information Contact Above Number 876 225 4007 . Program producer
Home / ಸುದ್ದಿ / ವಾರ್ಡ್ ವಿಂಗಡಣೆ : ಮೀಸಲಾತಿ ವಾಪಾಸ್ ಪಡೆದ ಸರ್ಕಾರ

ವಾರ್ಡ್ ವಿಂಗಡಣೆ : ಮೀಸಲಾತಿ ವಾಪಾಸ್ ಪಡೆದ ಸರ್ಕಾರ

Spread the love

ಹುಬ್ಬಳ್ಳಿ:- ಬೆಳಗಾವಿ ಹಾಗೂ ಹು-ಧಾ ಮಹಾನಗರ ಪಾಲಿಕೆಗಳಿಗೆ 2018 ರಲ್ಲಿ ರಾಜ್ಯ ಸರ್ಕಾರ ಹೊರಡಿಸಿದ್ದ ನೂತನ ವಾರ್ಡ್ ವಿಂಗಡಣೆ ಹಾಗೂ ಮೀಸಲಾತಿ ಅಧಿಸೂಚನೆಯನ್ನು ಹಿಂಪಡೆಯುವುದಾಗಿ ಹೈಕೋರ್ಟ್ ಪೀಠಕ್ಕೆ ರಾಜ್ಯ ಸರ್ಕಾರದ ವಕೀಲರು ಗುರುವಾರ ಪ್ರಮಾಣಪತ್ರ ಸಲ್ಲಿಸಿದ್ದಾರೆ.
ಪ್ರಮಾಣ ಪತ್ರ ಪರಿಶೀಲಿಸಿದ ನ್ಯಾ.ಸುನಿಲದತ್ತ ಯಾದವ್ ಅವರಿದ್ದ ಏಕಸದಸ್ಯ ಪೀಠವು, ರಿಟ್ ಅರ್ಜಿದಾರರು ಪ್ರಶ್ನಿಸಿದ್ದ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹಿಂಪಡೆದಿದೆ‌. ಹೀಗಾಗಿ ಅರ್ಜಿಗಳ ವಿಚಾರಣೆ ಅಗತ್ಯವಿಲ್ಲ ಎಂದು ಇತ್ಯರ್ಥಪಡಿಸಿತು.
ಬೆಳಗಾವಿ ಹಾಗೂ ಹು-ಧಾ ಮಹಾನಗರ ಪಾಲಿಕೆ ಸದಸ್ಯರ ಅವಧಿ ಮುಕ್ತಾಯಗೊಂಡ ಹಿನ್ನಲೆಯಲ್ಲಿ ರಾಜ್ಯ ಸರ್ಕಾರವು 2018 ರಲ್ಲಿ ನೂತನ ವಾರ್ಡ್ ವಿಂಗಡಣೆ ಹಾಗೂ ಮೀಸಲಾತಿ ಅಧಿಸೂಚನೆಯನ್ನು ಹೊರಡಿಸಿತ್ತು. ಈ ಅಧಿಸೂಚನೆ ಪ್ರಶ್ನಿಸಿ ಧಾರವಾಡದ ಸಂಜಯ ಕಪಟಕರ, ಬೆಳಗಾವಿಯ ಬೈರಗೌಡ ಪಾಟೀಲ ಅವರು ರಿಟ್ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ಕೈಗೆತ್ತಿಕೊಂಡಿದ್ದ ಪೀಠವು, ಮದ್ಯಂತರ ಆದೇಶದಲ್ಲಿ ರಾಜ್ಯ ಸರ್ಕಾರದ ಅಧಿಸೂಚನೆಗೆ ತಡೆಯಾಜ್ಞೆ ನೀಡಿ ವಿಚಾರಣೆ ಮುಂದೂಡಿತ್ತು. ಗುರುವಾರ ರಾಜ್ಯ ಸರ್ಕಾರದ ವಕೀಲರು, ಈ ಹಿಂದೆ ಹೊರಡಿಸಿದ್ದ ಅಧಿಸೂಚನೆ ಹಿಂಪಡೆಯುವುದರ ಜೊತೆಗೆ ಹೊಸದಾಗಿ ಅಧಿಸೂಚನೆ ಹೊರಡಿಸುವುದಾಗಿ ಪ್ರಮಾಣಪತ್ರ ಸಲ್ಲಿಸಿದರು. ಹೀಗಾಗಿ ಅರ್ಜಿ ವಿಚಾರಣೆಯನ್ನು ಪೀಠವು ಇತ್ಯರ್ಥಪಡಿಸಿದೆ‌.

Check Also

ಬ್ಯಾಂಕ್‌ಗಳ ಸಾಲಗಳ ಮೇಲಿನ ಚಕ್ರಬಡ್ಡಿ ಮನ್ನಾ

Spread the loveನವದೆಹಲಿ: ನವರಾತ್ರಿ ಸಂದರ್ಭದಲ್ಲಿ ಸಾಲಗಾರರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ. ಮಾರ್ಚ್ 1ರಿಂದ ಆಗಸ್ಟ್ 31ರವರೆಗಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!