Breaking News
Hiring Reporter’s For more Information Contact Above Number 876 225 4007 . Program producer
Home / ಸುದ್ದಿ / ವಿಧಾನಸಭೆ ಕಲಾಪದಲ್ಲಿ ಖಾಸಗಿ ಮಾಧ್ಯಮ ನಿಷೇಧ ಖಂಡಿಸಿ ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪ್ರತಿಭಟನೆ.

ವಿಧಾನಸಭೆ ಕಲಾಪದಲ್ಲಿ ಖಾಸಗಿ ಮಾಧ್ಯಮ ನಿಷೇಧ ಖಂಡಿಸಿ ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪ್ರತಿಭಟನೆ.

ಹುಬ್ಬಳ್ಳಿ: ವಿಧಾನ ಸಭೆ ಕಲಾಪದಲ್ಲಿ ಖಾಸಗಿ ಮಾಧ್ಯಮಗಳ ಕ್ಯಾಮರಾಗಳನ್ನು ನಿಷೇಧ ಮಾಡಿರುವುದನ್ನು ಖಂಡಿಸಿ ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪ್ರತಿಭಟನೆ ಮಾಡಿ ತಹಶಿಲ್ದಾರರ ಮೂಲಕ ಸಭಾಧ್ಯಕ್ಷರಿಗೆ ಮನವಿ ಸಲ್ಲಿಸಿದರು. ಇದಕ್ಕೂ ಮುನ್ನ ಪತ್ರಕರ್ತರ ಸಭಾಭವನದಿಂದ ತಹಶಿಲ್ದಾರರ ಕಚೇರಿವರೆಗೆ ರ್ಯಾಲಿ ನಡೆಸಲಾಯಿತು. ಈ ವೇಳೆ ಕಲಾಪದಲ್ಲಿ ಖಾಸಗಿ ಮಾಧ್ಯಮಗಳ ಮೇಲೆ ನಿರ್ಬಂಧ ಹೇರಿರುವುದನ್ನು ಖಂಡಿಸಿ ರಾಜ್ಯ ಸರ್ಕಾರ, ಮತ್ತು ಕಲಾಪದ ಸಭಾಧ್ಯಕ್ಷರ ವಿರುದ್ದ ಪ್ರತಿಭಟನಾ ನಿರತ ಪತ್ರಕರ್ತರು ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಮಾಧ್ಯಮದ ಮೇಲೆ ಸಭಾಧ್ಯಕ್ಷರು ತೆಗೆದುಕೊಂಡ ನಿರ್ಧಾರ ಖಂಡನೀಯವಾಗಿದ್ದು, ಈ ಮೂಲಕ ಕಲಾಪಗಳನ್ನು ಪಾರದರ್ಶಕತೆಯಿಂದ ದೂರ ಮಾಡುವ ಸಂಚು ರೂಪಿಸಲಾಗಿದೆ. ಈ ಹಿಂದೆ ಕಲಾಪಗಳಲ್ಲಿ ಸಚಿವರು ತೋರಿದ ಘಟನೆಗಳನ್ನು ಈ ಕಾಲದಲ್ಲಿ ನೆನೆದುಕೊಳ್ಳುವುದು ಸೂಕ್ತವಾಗಿದೆ. ಅಲ್ಲದೇ ಮಾಧ್ಯಮಗಳ ಮೇಲೆ ನಿರ್ಬಂಧ ಹೇರುವ ಮೂಲಕ ಸರ್ಕಾರ ಮತ್ತು ಜನರ ನಡುವಿನ ಸೇತುವೆಯನ್ನು ಹಾಳು ಮಾಡುವದಾಗಿದೆ. ಈ ಕೂಡಲೇ ರಾಜ್ಯ ಸರ್ಕಾರ ಮತ್ತು ಸಭಾಧ್ಯಕ್ಷರು ಖಾಸಗಿ ಮಾಧ್ಯಮಗಳ ಮೇಲೆ ಹೇರಿರುವ ನಿರ್ಬಂಧವನ್ನು ವಾಪಾಸ್ ಪಡೆದು ಮೊದಲಿನಂತೆ ಕಲಾಪಗಳ ದೃಶ್ಯಗಳನ್ನು ಸೆರೆ ಹಿಡಿಯಲು ಅವಕಾಶವನ್ನು ಕಲ್ಪಿಸಬೇಕೆಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷ ಗಣಪತಿ ಗಂಗೂಳಿ, ಉಪಾಧ್ಯಕ್ಷ ಸುಶೀಲೆಂದ್ರ ಕುಂದರಗಿ,ಬಸವರಾಜ ಹೂಗಾರ, ಕೇಶವ್ ಮೂರ್ತಿ, ಶಾಮುಲಾ ಪಟ್ಟಿ, ಪರಶುರಾಮ ತಹಶಿಲ್ದಾರ, ಗುರುರಾಜ ಹೂಗಾರ, ಕೃಷ್ಣ ದಿವಾಕರ್ ಸೇರಿದಂತೆ ಮುಂತಾದವರು ಇದ್ದರು.

Share

About Shaikh BIG TV NEWS, Hubballi

Check Also

Featured Video Play Icon

ಎಲ್ಲಡೆ ಶಿವನ ಆರಾಧನೆ ಭಕ್ತಿಯಲ್ಲಿ ಮಿಂದೆದ್ದ ಹುಬ್ಬಳ್ಳಿಯ ಜನರು | MAHA SHIVARATRI | BIG TV NEWS

Shaikh BIG TV NEWS, Hubballi See author's posts Share

Leave a Reply

Your email address will not be published. Required fields are marked *

error: Content is protected !!