Breaking News
Hiring Reporter’s For more Information Contact Above Number 876 225 4007 . Program producer
Home / ಸುದ್ದಿ / ಸಕಾಲ ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಡಿಸಿ ಎಂ.ದೀಪಾ ಸೂಚನೆ

ಸಕಾಲ ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಡಿಸಿ ಎಂ.ದೀಪಾ ಸೂಚನೆ

Spread the love

ಧಾರವಾಡ :ಜಿಲ್ಲೆಯಲ್ಲಿ ವಿವಿಧ ಇಲಾಖೆಗಳು ಸಕಾಲ ಕಾಯ್ದೆ ಅಡಿ ಒದಗಿಸಬೇಕಾದ ಸೇವೆಗಳನ್ನು ಪರಿಣಾಮಕಾರಿಯಾಗಿ ನಿಗದಿತ ಅವಧಿಯೊಳಗೆ ಜನರಿಗೆ ತಲುಪಿಸಿ, ಜನಪರ ಆಡಳಿತ ನೀಡಬೇಕು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಹೇಳಿದರು.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಎಸ್. ಸುರೇಶಕುಮಾರ್ ಅವರು ಇಂದು ಎಲ್ಲ ಜಿಲ್ಲೆಗಳ ಅಧಿಕಾರಿಗಳೊಂದಿಗೆ ಸಕಾಲ ಕಾಯ್ದೆ ಕುರಿತು ನಡೆಸಿದ ವಿಡಿಯೋ ಸಂವಾದದಲ್ಲಿ ಭಾಗವಹಿಸಿದ ಬಳಿಕ, ಜಿಲ್ಲಾಧಿಕಾರಿಗಳು ಜಿಲ್ಲಾ ಪಂಚಾಯತ್ ವಿಡಿಯೋ ಸಂವಾದ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು.
ಸಕಾಲ ಸೇವೆಗಳ ಅಡಿ ಅರ್ಜಿಗಳ ವಿಲೇವಾರಿ ಯಾವುದೇ ಕಾರಣಕ್ಕೂ ವಿಳಂಬವಾಗಬಾರದು. ಸಂಬಂಧಿಸಿದ ಇಲಾಖೆಗಳ ನೋಡಲ್ ಅಧಿಕಾರಿಗಳು ತಮ್ಮ ಕಚೇರಿಗಳಲ್ಲಿ ಕಡ್ಡಾಯವಾಗಿ ಫಲಕ ಅಳವಡಿಸಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು. ಸಕಾಲ ಸಹಾಯವಾಣಿ ಸಂಖ್ಯೆ 080-4454455 ನ್ನು ಹೆಚ್ಚು ಪ್ರಚುರಪಡಿಸಬೇಕು. ಅರ್ಜಿಗಳನ್ನು ಅನಗತ್ಯವಾಗಿ ತಿರಸ್ಕರಿಸುವ ಮನೋಭಾವ ಸರಿಯಲ್ಲ. ಎಲ್ಲ ನಾಡ ಕಚೇರಿಗಳಲ್ಲಿ ಕಡ್ಡಾಯವಾಗಿ ಸಕಾಲ ಸೇವೆಗಳ ಫಲಕ ಪ್ರದರ್ಶಿಸಬೇಕು. ಅಧಿಕಾರಿಗಳು ಪ್ರತಿದಿನ ಕಚೇರಿಗೆ ಬಂದ ಕೂಡಲೇ ಸಕಾಲ ಅರ್ಜಿಗಳ ವಿಲೇವಾರಿಗೆ ಮೊದಲ ಆದ್ಯತೆ ನೀಡಬೇಕು ಎಂದು ಸೂಚನೆ ನೀಡಿದರು.
ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಡಾ. ಬಿ.ಸಿ. ಸತೀಶ್, ಉಪ ವಿಭಾಗಾಧಿಕಾರಿ ಮೊಹಮ್ಮದ್ ಜುಬೇರ್, ಉಪ ಪೊಲೀಸ್ ಆಯುಕ್ತ ಶಿವಕುಮಾರ ಗುಣಾರಿ ಸೇರಿದಂತೆ ಮತ್ತಿತರರು ಇದ್ದರು

Check Also

ಡಿ ಬಾಸ್ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ

Spread the loveಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಚಿತ್ರತಂಡದಿಂದ ಮತ್ತೊಂದು ಸಿಹಿ ಸುದ್ದಿ ಅಭಿಮಾನಿಗಳಿಗೆ ಸಿಕ್ಕಿದೆ. ‘ರಾಬರ್ಟ್’ ಬಿಡುಗಡೆಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!