Breaking News
Hiring Reporter’s For more Information Contact Above Number 876 225 4007 . Program producer
Home / ಸುದ್ದಿ / ಕರ್ನಾಟಕ / ಸಮಾಜದ ಅಂಕು ಡೊಂಕು ತಿದ್ದುವ ಶಕ್ತಿ ಪತ್ರಿಕೋದ್ಯಮಕ್ಕೆ ಇದೆ: ಸುಮಲತಾ ಅಂಬರೀಶ್.

ಸಮಾಜದ ಅಂಕು ಡೊಂಕು ತಿದ್ದುವ ಶಕ್ತಿ ಪತ್ರಿಕೋದ್ಯಮಕ್ಕೆ ಇದೆ: ಸುಮಲತಾ ಅಂಬರೀಶ್.

ಮಂಡ್ಯ : ಕೃಷ್ಣರಾಜಪೇಟೆ ಪಟ್ಟಣದ ರಾಮದಾಸ್ ಹೋಟೆಲ್ ಸುಲೋಚನಮ್ಮ ಸಭಾಂಗಣದಲ್ಲಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಮತ್ತು ಕೃಷ್ಣರಾಜಪೇಟೆ ಪ್ರೆಸ್ ಕ್ಲಬ್ ವತಿಯಿಂದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ನಡೆಯಿತು.ಮಂಡ್ಯ ಲೋಕಸಭಾ ಸದಸ್ಯೆ ಸುಮಲತಾ ಅಂಬರೀಶ್ ಪತ್ರಿಕಾ ದಿನಾಚರಣೆಯನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.ಸಮಾಜದ ಅಂಕುಡೊಂಕುಗಳನ್ನು ತಿದ್ದಿತೀಡಿ ಸರಿದಾರಿಯಲ್ಲಿ ಮುನ್ನಡೆಸುವ ಶಕ್ತಿಯು ಪತ್ರಿಕೋದ್ಯಮಕ್ಕಿದೆ. ಆದ್ದರಿಂದ ನಿಖರವಾದ ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವಂತಹ ಸುದ್ದಿಗಳನ್ನು ಮಾತ್ರ ಪ್ರಕಟಿಸಬೇಕು.ನನ್ನ ಗೆಲುವಿನಲ್ಲಿ ಮಾಧ್ಯಮಗಳ ಸಹಕಾರ ಸಂಪೂರ್ಣವಾಗಿ ದೊರೆತಿದೆ.ಮಾಧ್ಯಮಗಳ ಸಹಕಾರವನ್ನು ನನ್ನ ಜೀವನದಲ್ಲಿ ಎಂದಿಗೂ ಮರೆಯುವುದಿಲ್ಲ.ಮಂಡ್ಯ ಜಿಲ್ಲೆಯ ಸಮಗ್ರವಾದ ಅಭಿವೃದ್ಧಿಗೆ ಮಾತ್ರ ನಾನು ಬದ್ಧಳಾಗಿದ್ದು, ಪಕ್ಷಾತೀತವಾಗಿ, ಟೀಕೆಗಳಿಗೆ ಜಗ್ಗದೇ ಕೆಲಸ ಮಾಡುತ್ತೇನೆ ಎಂದು ತಾಲ್ಲೂಕಿನ ಮತದಾರ ಬಂಧುಗಳಿಗೆ ಧನ್ಯವಾದಗಳನ್ನು ಅರ್ಪಿಸಿದರು.ಅನರ್ಹ ಶಾಸಕ ಡಾ.ನಾರಾಯಣಗೌಡ, ಮಾಜಿಶಾಸಕ ಕೆ.ಬಿ.ಚಂದ್ರಶೇಖರ್, ಜಿಲ್ಲಾ ಪಂಚಾಯತ ಉಪಾಧ್ಯಕ್ಷೆ ಗಾಯತ್ರಿ, ತಾಲೂಕು ಪಂಚಾಯಿತಿ ಅಧ್ಯಕ್ಷೆ ಜಯಲಕ್ಷ್ಮೀ, ಜಿ.ಪಂ ಸದಸ್ಯ ಎಲ್.ದೇವರಾಜು, ಮಾಜಿಸದಸ್ಯ ಬಿ.ನಾಗೇಂದ್ರಕುಮಾರ್, ಸರ್ವಮಂಗಳಾ,ತಾಲೂಕು ಕಾಂಗ್ರೆಸ್ ಅಧ್ಯಕ್ಷ ಕಿಕ್ಕೇರಿ ಸುರೇಶ್, ಕೆ.ಆರ್.ರವೀಂದ್ರಬಾಬು, ಕರ್ನಾಟಕ ಜರ್ನಲಿಷ್ಟ್ ಯೂನಿಯನ್ ಅಧ್ಯಕ್ಷ ಬಿ.ನಾರಾಯಣ, ತಾಲೂಕು ಪ್ರೆಸ್ ಕ್ಲಬ್ ಅಧ್ಯಕ್ಷ ಸಿಂಕಾಸುರೇಶ್, ರಾಜ್ಯ ರೈತಸಂಘದ ಮಹಿಳಾಘಟಕದ ಅಧ್ಯಕ್ಷೆ ನಂದಿನಿ ಜಯರಾಂ, ಎನ್.ಕೃಷ್ಣೇಗೌಡ ಮತ್ತಿತರರು ಭಾಗವಹಿಸಿದ್ದರು.

Share

About Bora nayak BIG TV NEWS, Mandya

Check Also

Featured Video Play Icon

ಎಲ್ಲಡೆ ಶಿವನ ಆರಾಧನೆ ಭಕ್ತಿಯಲ್ಲಿ ಮಿಂದೆದ್ದ ಹುಬ್ಬಳ್ಳಿಯ ಜನರು | MAHA SHIVARATRI | BIG TV NEWS

Shaikh BIG TV NEWS, Hubballi See author's posts Share

Leave a Reply

Your email address will not be published. Required fields are marked *

error: Content is protected !!