Breaking News
Hiring Reporter’s For more Information Contact Above Number 876 225 4007 . Program producer
Home / ಸುದ್ದಿ / ಸೆ. 4ರಂದು ನಗರಕ್ಕೆ ರೋಹಿಣಿ ಸಿಂಧೂರಿ ಆಗಮನ

ಸೆ. 4ರಂದು ನಗರಕ್ಕೆ ರೋಹಿಣಿ ಸಿಂಧೂರಿ ಆಗಮನ

Spread the love

ಬೇಲೂರು ಕೈಗಾರಿಕಾ ಪ್ರದೇಶದಲ್ಲಿರುವ ಟಾಟಾ ಹಿಟಾಚಿ ತರಬೇತಿ ಕೇಂದ್ರದಲ್ಲಿ ನಡೆಯುತ್ತಿರುವ ನೊಂದಾಯಿತ ಕಟ್ಟಡ ಕಾರ್ಮಿಕರಿಗೆ ಜ್ಯೂನಿಯರ್ ಎಕ್ಸಕವೇಟರ್ ಮತ್ತು ಜ್ಯೂನಿಯರ್ ಬ್ಯಾಕ್ ಹೋ ಆಪರೇಟರ್ ತರಬೇತಿಯ ಸಮಾರೋಪ ಸಮಾರಂಭವು ಸೆಪ್ಟೆಂಬರ್ 4 ರಂದು ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ.
ಕಾರ್ಯಕ್ರಮಕ್ಕೆ ಬೆಂಗಳೂರಿನ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಆಗಮಿಸುವರು. ಅವರು ನಂತರ ಹುಬ್ಬಳ್ಳಿಯ ಗೋಕುಲ ರಸ್ತೆಯ ಕ್ಲರ್ಕ್-ಇನ್ ಸಭಾಂಗಣದಲ್ಲಿ ಮಧ್ಯಾಹ್ನ 3 ರಿಂದ 4 ಗಂಟೆಗೆ ಬಿಲ್ರ‍್ಸ್ ಮತ್ತು ಗುತ್ತಿಗೆದಾರರೊಂದಿಗೆ ಸಂವಾದ ಕಾರ್ಯಕ್ರಮ ನಡೆಸುವರು. ಮಾರ್ಚ್ 19 ರಂದು ಧಾರವಾಡದ ಕುಮಾರೇಶ್ವರ ನಗರದಲ್ಲಿ ಸಂಭವಿಸಿದ ಕಟ್ಟಡ ದುರಂತದಲ್ಲಿ ಮೃತಪಟ್ಟ ಆರು ಕಟ್ಟಡ ಕಾರ್ಮಿಕರ ವಾರಸುದಾರರಿಗೆ ಮಂಡಳಿಯ ವತಿಯಿಂದ ರೂ.2 ಲಕ್ಷ ಚೆಕ್‌ನ್ನು ವಿತರಿಸಲಾಗುವುದು ಎಂದು ಸಹಾಯಕ ಕಾರ್ಮಿಕ ಆಯುಕ್ತರಾದ ಮೀನಾ ಪಾಟೀಲ ತಿಳಿಸಿದ್ದಾರೆ.

Check Also

ಡಿ ಬಾಸ್ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ

Spread the loveಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಚಿತ್ರತಂಡದಿಂದ ಮತ್ತೊಂದು ಸಿಹಿ ಸುದ್ದಿ ಅಭಿಮಾನಿಗಳಿಗೆ ಸಿಕ್ಕಿದೆ. ‘ರಾಬರ್ಟ್’ ಬಿಡುಗಡೆಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!