Breaking News
Hiring Reporter’s For more Information Contact Above Number 876 225 4007 . Program producer
Home / ಸುದ್ದಿ / ಕರ್ನಾಟಕ / ಸ್ಯಾಕ್ಸೋಫೋನ್ ಕಲಾವಿದ ಕದ್ರಿ ಗೋಪಾಲ್ ನಾಥ್ ವಿಧಿವಶ‌.

ಸ್ಯಾಕ್ಸೋಫೋನ್ ಕಲಾವಿದ ಕದ್ರಿ ಗೋಪಾಲ್ ನಾಥ್ ವಿಧಿವಶ‌.

ಮಂಗಳೂರು: ಪ್ರಖ್ಯಾತ ಸ್ಯಾಕ್ಸೋಫೋನ್ ಕಲಾವಿದ ಕದ್ರಿ ಗೋಪಾಲ್ ನಾಥ್ ಅವರು ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಮಂಗಳೂರಿನ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗಿನ ಜಾವ ಅವರು ಕೊನೆಯುಸಿರೆಳೆದರು.ಸ್ಯಾಕ್ಸೋಫೋನ್ ವಾದಕರಾಗಿದ್ದ ಕದ್ರಿ ಅವರು ಕರ್ನಾಟಕ ಸಂಗೀತದಲ್ಲಿ ಅಚ್ಚಳಿಯದ ಹೆಜ್ಜೆಗುರುತು ನಿರ್ಮಿಸಿದವರು.ಸ್ಯಾಕ್ಸೋಫೋನ್ ಮೂಲಕ ವಿಶ್ವದೆಲ್ಲೆಡೆ ಕರ್ನಾಟಕ ಶಾಸ್ತ್ರೀಯ ಸಂಗೀತವನ್ನು ಮನೆಮಾತಾಗಿಸಿದ ಕೀರ್ತಿ ಕದ್ರಿ ಅವರಿಗೆ ಸಲ್ಲುತ್ತದೆ..1950 ರ ಡಿಸೆಂಬರ್ 11 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸಜೀಪ ಮೂಡ ಗ್ರಾಮದ ಮಿತ್ತಿಕೆರೆ ಎಂಬಲ್ಲಿ ಜನಿಸಿದರು.ಇದೀಗ ತಮ್ಮ ಸ್ವರಯಾತ್ರೆಗೆ ವಿದಾಯ ಹೇಳಿರುವ ಕದ್ರಿ ಅವರು ಪತ್ನಿ, ಪುತ್ರ ಮತ್ತು ಅಪಾರ ಬಂಧು, ಅಭಿಮಾನಿ ಬಳಗವನ್ನು ಅಗಲಿದ್ದಾರೆ.ಪದ್ಮಶ್ರೀ ಪುರಸ್ಕೃತ ಕದ್ರಿ ಅವ್ರು ಮೊದಲ ಬಾರಿಗೆ ಮೈಸೂರು ಅರಮನೆಯಲ್ಲಿ ಬ್ಯಾಂಡ್ ವೊಂದರಲ್ಲಿ ಸ್ಯಾಕ್ಸೋಫೋನ್ ನುಡಿಸುತ್ತಿದ್ದಿದ್ದುದನ್ನು ಕೇಳಿ ರೋಮಾಂಚನಗೊಂಡು ಸ್ಯಾಕ್ಸೋಫೋನ್ ಕಲಿಯುವ ಮನಸ್ಸು ಮಾಡಿದರು. ಮುಂದೊಮ್ಮೆ ಸ್ಯಾಕ್ಸೋಫೋನ್ ಚಕ್ರವರ್ತಿ ಎಂಬ ಬಿರುದನ್ನೂ ಪಡೆದು, ಸ್ಯಾಕ್ಸೋಫೋನ್ ಎಂದರೆ ಕದ್ರಿ ಗೋಪಾಲ್ ನಾಥ್ ಎಂಬಷ್ಟರ ಮಟ್ಟಿಗೆ ಅದರೊಂದಿಗೆ ಬೆರೆತರು, ಸಾಧಿಸಿದರು.ಕದ್ರಿ ಅವರ ಅಗಲಿಕೆಗೆ ನಾಡಿನ ಸಂಗೀತ ದಿಗ್ಗಜರು, ರಾಜಕಾರಣಿಗಳು ಸಂತಾಪ ಸೂಚಿಸಿದ್ದಾರೆ

Share

About Shaikh BIG TV NEWS, Hubballi

Check Also

Featured Video Play Icon

ಎಲ್ಲಡೆ ಶಿವನ ಆರಾಧನೆ ಭಕ್ತಿಯಲ್ಲಿ ಮಿಂದೆದ್ದ ಹುಬ್ಬಳ್ಳಿಯ ಜನರು | MAHA SHIVARATRI | BIG TV NEWS

Shaikh BIG TV NEWS, Hubballi See author's posts Share

Leave a Reply

Your email address will not be published. Required fields are marked *

error: Content is protected !!