Breaking News
Hiring Reporter’s For more Information Contact Above Number 876 225 4007 . Program producer
Home / ಸುದ್ದಿ / ಕರ್ನಾಟಕ / ಹುಲಿ ದಾಳಿ : ವ್ಯಕ್ತಿ ಸಾವು

ಹುಲಿ ದಾಳಿ : ವ್ಯಕ್ತಿ ಸಾವು

ಚಾಮರಾಜನಗರ: ರೈತನೊಬ್ಬ ಜಮೀನಿಗೆ ತೆರಳುತ್ತಿದ್ದ ವೇಳೆ ಹುಲಿ ದಾಳಿ ನಡೆಸಿದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಾಮರಾಜನಗರದ ಬಂಡೀಪುರ ಹುಲಿ ಯೋಜನೆಯ ಕುಂದಕೆರೆ ವಲಯದ ಮೂರುಕಲ್ಲು ಸಮೀಪ ನಡೆದಿದೆ. ಘಟನೆಯಲ್ಲಿ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಚೌಡಹಳ್ಳಿ ಗ್ರಾಮದ ನಿವಾಸಿ ಶಿವಲಿಂಗಪ್ಪ (55) ಮೃತ ವ್ಯಕ್ತಿಯಾಗಿದ್ದು, ಇವರು ಜಮೀನಿಗೆ ತೆರಳುವ ವೇಳೆ ಈ ಘಟನೆ ಸಂಭವಿಸಿದೆ. ಇನ್ನೂ ಈ ಘಟನೆಯಿಂದ ಒಂದು ತಿಂಗಳ ಅವಧಿಯಲ್ಲಿ ನರಭಕ್ಷಕ ಹುಲಿ ಎರಡನೇ ಬಲಿ ಪಡೆದಂತಾಗಿದೆ. ಇನ್ನೂ ಸಾರ್ವಜನಿಕರು ನರಭಕ್ಷಕ ಹುಲಿಯನ್ನು ಅರಣ್ಯ ಇಲಾಖೆ ಪತ್ತೆ ಹಚ್ಚಿಲ್ಲ. ಅರಣ್ಯಾಧಿಕಾರಿಗಳ ಬೇಜವಾಬ್ದಾರಿ ತನದಿಂದಲ್ಲೇ ಮತ್ತೊಂದು ಬಲಿಯಾಗಿದೆ ಎಂದು ಆರೋಪಿಸಿದ್ದಾರೆ. ಒಟ್ಟಿನಲ್ಲಿ ಈ ಘಟನೆಯಿಂದ ಚೌಡಹಳ್ಳಿ ಹಾಗೂ ಸುತ್ತಮುತ್ತಲ ಗ್ರಾಮಸ್ಥರು ಸಾವಿನ ಭಯದಲ್ಲಿ ಓಡಾಡುತ್ತಿದ್ದಾರೆ.

Share

About ASLAM PASHA BIG TV NEWS, Chamraj nagar

Check Also

Featured Video Play Icon

ಎಲ್ಲಡೆ ಶಿವನ ಆರಾಧನೆ ಭಕ್ತಿಯಲ್ಲಿ ಮಿಂದೆದ್ದ ಹುಬ್ಬಳ್ಳಿಯ ಜನರು | MAHA SHIVARATRI | BIG TV NEWS

Shaikh BIG TV NEWS, Hubballi See author's posts Share

Leave a Reply

Your email address will not be published. Required fields are marked *

error: Content is protected !!