Breaking News
Hiring Reporter’s For more Information Contact Above Number 876 225 4007 . Program producer
Home / ಸುದ್ದಿ / ಕರ್ನಾಟಕ / ಹೈಕೋರ್ಟ್​ನಲ್ಲಿಂದು ಅರ್ಜುನ್​ ಸರ್ಜಾ ಅರ್ಜಿ ವಿಚಾರಣೆ ಸಾಧ್ಯತೆ..

ಹೈಕೋರ್ಟ್​ನಲ್ಲಿಂದು ಅರ್ಜುನ್​ ಸರ್ಜಾ ಅರ್ಜಿ ವಿಚಾರಣೆ ಸಾಧ್ಯತೆ..

ಬೆಂಗಳೂರು: ನಟ ನಿರ್ದೇಶಕ ಅರ್ಜುನ್ ಸರ್ಜಾ, ಎಫ್ಐಆರ್ ರದ್ದು ಕೋರಿ ಅರ್ಜಿ ಸಲ್ಲಿಸಿರುವ ಸಂಬಂಧ ಇಂದು ಹೈಕೋರ್ಟ್​ನಲ್ಲಿ ವಿಚಾರಣೆ ನಡೆಯುವ ಸಾಧ್ಯತೆ ಇದೆ. ಕಬ್ಬನ್ ಪಾರ್ಕ್ ಪೊಲೀಸ್​ ಠಾಣೆಯಲ್ಲಿ ಸರ್ಜಾ ಮೇಲೆ ಐಪಿಸಿ ಸೆಕ್ಷನ್​ 356 ಹಾಗೂ 354 (A) ಅಡಿ ದೂರು ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಅರ್ಜುನ್​ ಸರ್ಜಾ, ಇದು ದುರುದ್ದೇಶಪೂರಿತ ದೂರು, ಇದನ್ನು ರದ್ದು ಮಾಡಬೇಕೆಂದು ಹೈಕೋರ್ಟ್​ ಮೆಟ್ಟಿಲೇರಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಹೈಕೋರ್ಟ್‌ನ ಏಕಸದಸ್ಯಪೀಠ ಅರ್ಜಿ ವಿಚಾರಣೆ ನಡೆಸುವ ಸಾಧ್ಯತೆ ಇದೆ.ಪ್ರಕರಣದ ತನಿಖೆ ನಡೆಸುತ್ತಿರುವ ಕಬ್ಬನ್​ ಪಾರ್ಕ್​ ಪೊಲೀಸರು, ಯಾವುದೇ ಸಂದರ್ಭದಲ್ಲಿ ಸರ್ಜಾ ವಿರುದ್ಧ ಕ್ರಮ ಜರುಗಿಸುವ ಸಾಧ್ಯತೆ ಇದೆ. ಆದ್ದರಿಂದ ಈ ಅರ್ಜಿ ಇತ್ಯರ್ಥವಾಗುವವರೆಗೆ ಎಫ್‌ಐಆರ್‌ ಹಾಗೂ ಮುಂದಿನ ಪ್ರಕ್ರಿಯೆಗಳಿಗೆ ತಡೆ ನೀಡಬೇಕು ಎಂದು ಕೋರಿ ಸರ್ಜಾ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದಾರೆ.

Share

About Shaikh BIG TV NEWS, Hubballi

Check Also

Featured Video Play Icon

ಎಲ್ಲಡೆ ಶಿವನ ಆರಾಧನೆ ಭಕ್ತಿಯಲ್ಲಿ ಮಿಂದೆದ್ದ ಹುಬ್ಬಳ್ಳಿಯ ಜನರು | MAHA SHIVARATRI | BIG TV NEWS

Shaikh BIG TV NEWS, Hubballi See author's posts Share

Leave a Reply

Your email address will not be published. Required fields are marked *

error: Content is protected !!