Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಪೌರಕಾರ್ಮಿಕರಿಗೆ ಆರೋಗ್ಯ ತಪಾಸಣಾ ಶಿಬಿರ.

ಪೌರಕಾರ್ಮಿಕರಿಗೆ ಆರೋಗ್ಯ ತಪಾಸಣಾ ಶಿಬಿರ.

ಮಂಡ್ಯ : ಕೃಷ್ಣರಾಜಪೇಟೆ ಪಟ್ಟಣದ ಪುರಸಭೆಯ ವ್ಯಾಪ್ತಿಯ ಪೌರಕಾರ್ಮಿಕರಿಗೆ ಹೆಪಟೈಟಿಸ್ ಬಿ ಲಸಿಕಾ ಅಭಿಯಾನ ಹಾಗೂ ಆರೋಗ್ಯ ತಪಾಸಣಾ ಕಾರ್ಯಕ್ರಮವು ಪಟ್ಟಣದ ದುಂಡಶೆಟ್ಟಿ ಲಕ್ಷ್ಮಮ್ಮ ಸ್ಮಾರಕ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆಯಿತು.
ಪೌರಕಾರ್ಮಿಕರ ಆರೋಗ್ಯ ತಪಾಸಣೆ ಹಾಗೂ ಹೆಪಟೈಟಿಸ್ ಬಿ ಲಸಿಕಾ ಅಭಿಯಾನ ಕಾರ್ಯಕ್ರಮಕ್ಕೆ
ಚಾಲನೆ ನೀಡಿದ ಮುಖ್ಯಾಧಿಕಾರಿ ಸತೀಶ್ ಕುಮಾರ್ ಮಾತನಾಡಿ ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವ ನಿಟ್ಟಿನಲ್ಲಿ ತಮ್ಮ ಜೀವದ ಹಂಗನ್ನೇ ತೊರೆದು ಕೆಲಸ ಮಾಡುವ‌ ಪೌರಕಾರ್ಮಿಕರು ಹಾಗೂ ಅವರ ಕುಟುಂಬದ ಸದಸ್ಯರ ಆರೋಗ್ಯ ಸಂವರ್ಧನೆಗೆ ಪುರಸಭೆಯ ವತಿಯಿಂದ ಆರೋಗ್ಯ ತಪಾಸಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಪೌರಕಾರ್ಮಿಕರು ಲೋಕದ ಸ್ವಚ್ಛತೆ ಹಾಗೂ ನೈರ್ಮಲ್ಯಕ್ಕೆ ಗಮನ ಹರಿಸುವಂತೆ ತಮ್ಮ ವೈಯಕ್ತಿಕ ಸ್ವಚ್ಛತೆ ಹಾಗೂ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕು.
ಆರೋಗ್ಯ ಭಾಗ್ಯಕ್ಕಿಂತ ಮಿಗಿಲಾದ ಭಾಗ್ಯವು ಯಾವುದೂ ಇಲ್ಲವೆಂಬ ಸತ್ಯವನ್ನು ಅರಿಯಬೇಕು ಎಂದು ಸತೀಶ್ ಕುಮಾರ್ ಮನವಿ ಮಾಡಿದರು.ಕಾರ್ಯಕ್ರಮದಲ್ಲಿ ಪರಿಸರ ಅಭಿಯಂತರ ರಕ್ಷಿತ್ ಗೌಡ, ಹಿರಿಯ ಆರೋಗ್ಯ ಪರಿವೀಕ್ಷಕರಾದ ನರಸಿಂಹಶೆಟ್ಟಿ, ಪೌರಕಾರ್ಮಿಕರ ಸಂಘದ ಅಧ್ಯಕ್ಷ ಮಂಟೇಮಂಜು, ಮೇಸ್ತ್ರಿ ಮುತ್ತಯ್ಯ, ಮುಖಂಡ ಕೃಷ್ಣ, ನಾಗರಾಜು
ಸೇರಿದಂತೆ ನೂರಾರು ಪೌರಕಾರ್ಮಿಕರು ಆರೋಗ್ಯ ತಪಾಸಣಾ ಶಿಬಿರದಲ್ಲಿ ಭಾಗವಹಿಸಿದ್ದರು.

Share

About Bora nayak BIG TV NEWS, Mandya

Check Also

ಹಿರಿಯ ಅಧಿಕಾರಿ ಕಿರುಕುಳಕ್ಕೆ ಬೇಸತ್ತು ಡೆತ್ ನೋಟ್ ಬರೆದಿಟ್ಟು ವೈದ್ಯಕೀಯ ಸಿಬ್ಬಂದಿ ಆತ್ಮಹತ್ಯೆಗೆ ಯತ್ನ…!

ಹುಬ್ಬಳ್ಳಿ: ವೈದ್ಯಕೀಯ ಸಿಬ್ಬಂದಿಯೊಬ್ಬರು ಡೇತ್‌ ನೋಟ್ ಬರೆದಿಟ್ಟು, ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹುಬ್ಬಳ್ಳಿ ತಾಲೂಕಿನ ನೂಲ್ವಿಯ ಪ್ರಾಥಮಿಕ …

Leave a Reply

Your email address will not be published. Required fields are marked *

error: Content is protected !!