Hiring Reporter’s For more Information Contact Above Number 876 225 4007 . Program producer
Home / ಸುದ್ದಿ / 19ಕ್ಕೆ ಉಪ್ಪಾರ ಸಮಾಜದ ವಧು-ವರರ ಸಮಾವೇಶ ಹಾಗೂ ನೂತನ ವೆಬ್ ಸೈಟ್ ಉದ್ಘಾಟನೆ

19ಕ್ಕೆ ಉಪ್ಪಾರ ಸಮಾಜದ ವಧು-ವರರ ಸಮಾವೇಶ ಹಾಗೂ ನೂತನ ವೆಬ್ ಸೈಟ್ ಉದ್ಘಾಟನೆ

Spread the love

ಹುಬ್ಬಳ್ಳಿ: ಧಾರವಾಡ ಜಿಲ್ಲಾ ಶ್ರೀ ಭಗೀರಥ ಉಪ್ಪಾರ ಸಮಾಜ ಸೇವಾ ಸಂಘದ ವತಿಯಿಂದ ರಾಜ್ಯ ಮಟ್ಟದ ವಧು-ವರರ ಬೃಹತ್ ಸಮಾವೇಶವನ್ನು ಇದೇ 19ರಂದು ನಗರದ ನೆಹರು ಸ್ಟೇಡಿಯಂ ಹತ್ತಿರದ ನೌಕರರ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಮುಖಂಡರಾದ ಲೋಕೇಶ್ ಕಮ್ಮಾರ ತಿಳಿಸಿದರು.ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉಪ್ಪಾರ ಸೇವಾ ಸಂಘದಿಂದ ಪ್ರಥಮ ಬಾರಿಗೆ ವಧು-ವರರ ಹಾಗೂ ಪಾಲಕರ ಮುಖಾಮುಖಿ ಸಮಾವೇಶವನ್ನು ಆಯೋಜಿಸಲಾಗಿದ್ದು, ರಾಜ್ಯದ ಉಪ್ಪಾರ ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು. ಧಾರವಾಡ ಜಿಲ್ಲೆಯ ಉಪ್ಪಾರ ಸಮುದಾಯದ ಜನರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಸದುದ್ದೇಶದಿಂದ ನೂತನ ವೆಬ್ ಸೈಟ್ ಕೂಡ ಪ್ರಾರಂಭಿಸಲಾಗಿದ್ದು, ಅಂದು ನಡೆಯುವ ಸಮಾರಂಭದಲ್ಲಿ ಲೋಕಾರ್ಪಣೆಗೊಳಿಸಲಾಗುವುದು ಎಂದು ಅವರು ಹೇಳಿದರು. ಸಮಾವೇಶಕ್ಕೆ ರಾಜ್ಯದ ಉತ್ತರ ಕರ್ನಾಟಕ, ಹೈದ್ರಾಬಾದ್ ಕರ್ನಾಟಕ, ಮೈಸೂರ ಭಾಗದಿಂದಲೂ ಜನರು ಆಗಮಿಸಲಿದ್ದಾರೆ. ವಧು-ವರರ ಸಮಾವೇಶ ಸಂಪೂರ್ಣ ಉಚಿತವಾಗಿದೆ ಎಂದರು.ಹೆಚ್ಚಿನ ಮಾಹಿತಿಗಾಗಿ ದೂ.9448996059, 9845516506 ಸಂಪರ್ಕಿಸಲು ಕೋರಿದರು.ಪತ್ರಿಕಾಗೋಷ್ಠಿಯಲ್ಲಿ ಈಶ್ವರಪ್ಪ ಶಿರಕೋಳ, ಎಸ್.ಸಿ.ನೀರಾವರಿ, ಎಫ್‌.ಎಂ.ನೀರಾವರಿ, ಭರತ್, ಶಾಂತಪ್ಪ ಸೇರಿದಂತೆ ಇತರರು ಇದ್ದರು.

Check Also

ಮೈಸೂರು ದಸರಾ, ಎಷ್ಟೊಂದು ಸುಂದರ, ಜಂಬೂ ಸವಾರಿ; ನೋಡೋಣ ಬನ್ನಿ ರೀ.. !

Spread the loveಬೆಂಗಳೂರು: ವಿಶ್ವ ವಿಖ್ಯಾತ ಮೈಸೂರು ದಸರಾವನ್ನು ಈ ಬಾರಿ ಸರಳವಾಗಿ ಆಚರಿಸಲಾಯಿತು. ಕೋರೊನಾ ಹಿನ್ನಲೆಯಲ್ಲಿ ಸಾವಿರಾರು ಜನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!