Hiring Reporter’s For more Information Contact Above Number 876 225 4007 . Program producer
Home / ಸುದ್ದಿ / 24ಕ್ಕೆ ನಿಸರ್ಗ ದಯಣ್ಣವರ ಭರತನಾಟ್ಯ ರಂಗಪ್ರವೇಶ ಕಾರ್ಯಕ್ರಮ

24ಕ್ಕೆ ನಿಸರ್ಗ ದಯಣ್ಣವರ ಭರತನಾಟ್ಯ ರಂಗಪ್ರವೇಶ ಕಾರ್ಯಕ್ರಮ

Spread the love

ಹುಬ್ಬಳ್ಳಿ: ನಿಸರ್ಗ ದಯಣ್ಣವರ ಇವರ ಭರತನಾಟ್ಯ ರಂಗಪ್ರವೇಶ ಕಾರ್ಯಕ್ರಮವನ್ನು ಇದೇ 24ರಂದು ಸಂಜೆ 5ಕ್ಕೆ ನಗರದ ಸವಾಯಿ ಗಂಧರ್ವ ಹಾಲನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ನೃತ್ಯ ಕಲಾ ಸಂಸ್ಥೆಯ ಅಧ್ಯಕ್ಷರಾದ ಪ್ರದೀಪ ಭಟ್ ಹಾಗೂ ಸಹನಾ ಭಟ್ ತಿಳಿಸಿದರು.ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಜಂಟಿಯಾಗಿ ಮಾತನಾಡಿದ ಅವರು, ದೇಶಿಯ ನೃತ್ಯ ಪರಂಪರೆಯನ್ನು ಉಳಿಸಿ ಬೆಳೆಸುವ ಹಾಗೂ ಭರತನಾಟ್ಯ ನೃತ್ಯವನ್ನು ಜನಪ್ರಿಯಗೊಳಿಸುವ ಸದುದ್ದೇಶದಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ನಿಸರ್ಗ ದಯಣ್ಣವರ ಅವರು ತಮ್ಮ ಐದನೇ ವಯಸ್ಸಿನಲ್ಲಿಯೇ ಗುರು ವೀಣಾ ಯಾದವ್ ಅವರಲ್ಲಿ ಭರತನಾಟ್ಯ ಅಭ್ಯಾಸವನ್ನು ಪ್ರಾರಂಭಿಸಿದ್ದು, ಪ್ರಸ್ತುತವಾಗಿ ನಮ್ಮಲಿ ಭರತನಾಟ್ಯ ಅಭ್ಯಾಸ ಮಾಡುತ್ತಿದ್ದು, ಈಗ ವಿದ್ವತ ಹಂತವನ್ನು ತಲುಪಿದ್ದಾರೆ. ಅಲ್ಲದೇ ಅಂದು ನಡೆಯುವ ಕಾರ್ಯಕ್ರಮದಲ್ಲಿ ಭರತನಾಟ್ಯ ರಂಗಪ್ರವೇಶ ಮಾಡಲಿದ್ದಾರೆ ಎಂದು ಅವರು ಹೇಳಿದರು. ಅಂದು ನಡೆಯುವ ಕಾರ್ಯಕ್ರಮದಲ್ಲಿ ಪುಷ್ಪಾಂಜಲಿ, ಅಲಾಪುರಿ, ಜತ್ತಸ್ವರ ಹಾಗೂ ಝಾನ್ಸಿ ರಾಣಿ ನೃತ್ಯ ರೂಪಕಗಳು ಪ್ರದರ್ಶನಗೊಳ್ಳಲಿವೆ.‌ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಧಾರವಾಡ ಆಕಾಶವಾಣಿಯ ಶಶಿಧರ ನರೇಂದ್ರ, ಯೋಗ ಶಿಕ್ಷಕರಾದ ವಿನಾಯಕ ತಲಗೇರಿ, ಸಿತಾರ ಕಲಾವಿದ ಶ್ರೀನಿವಾಸ ಜೋಶಿ, ಭರತನಾಟ್ಯ ಗುರುಗಳಾದ ಸುಜಾತ ರಾಹಗೋಪಾಲ ಆಗಮಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಕೀಲರಾದ ಮನೋಜ ಹಾನಗಲ್ ವಹಿಸಲಿದ್ದಾರೆ ಎಂದರು.ಪತ್ರಿಕಾಗೋಷ್ಠಿಯಲ್ಲಿ ಮಹಿಮಾ ಹೆಗಡೆ, ನಿಸರ್ಗ ದಯಣ್ಣವರ, ಗೌರವ ದಯಣ್ಣವರ, ಸುನೀತಾ ನ್ಯಾಮತಿ ಸೇರಿದಂತೆ ಇತರರು ಇದ್ದರು.

Check Also

ಬ್ಯಾಂಕ್‌ಗಳ ಸಾಲಗಳ ಮೇಲಿನ ಚಕ್ರಬಡ್ಡಿ ಮನ್ನಾ

Spread the loveನವದೆಹಲಿ: ನವರಾತ್ರಿ ಸಂದರ್ಭದಲ್ಲಿ ಸಾಲಗಾರರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ. ಮಾರ್ಚ್ 1ರಿಂದ ಆಗಸ್ಟ್ 31ರವರೆಗಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!