Breaking News
Hiring Reporter’s For more Information Contact Above Number 876 225 4007 . Program producer
Home / ಸುದ್ದಿ / ಕರ್ನಾಟಕ / 3 ಮಹಾನಗರ ಪಾಲಿಕೆ, 102 ನಗರ ಸ್ಥಳೀಯ ಸಂಸ್ಥೆಗಳಿಗೆ ಇಂದು ಮತದಾನ..

3 ಮಹಾನಗರ ಪಾಲಿಕೆ, 102 ನಗರ ಸ್ಥಳೀಯ ಸಂಸ್ಥೆಗಳಿಗೆ ಇಂದು ಮತದಾನ..

ಬೆಂಗಳೂರು: ಮೈಸೂರು, ತುಮಕೂರು ಮತ್ತು ಶಿವಮೊಗ್ಗ ಮಹಾನಗರ ಪಾಲಿಕೆಗಳು ಮತ್ತು ಇತರ 102 ನಗರ ಸ್ಥಳೀಯ ಸಂಸ್ಥೆಗಳಿಗೆ ಇಂದು ಮತದಾನ ನಡೆಯಲಿದೆ. ಈ ಕ್ಷೇತ್ರಗಳಲ್ಲಿ ವಿವಿಧ ರಾಜಕೀಯ ಪಕ್ಷಗಳು ಮತ್ತು ಪಕ್ಷೇತರರು ಸೇರಿ ಒಟ್ಟು 9121 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ಇವಿಎಂಗಳನ್ನು ಬಳಸಲಾಗುತ್ತಿದೆ.
ಮತದಾನ ಬೆಳಿಗ್ಗೆ 7 ಗಂಟೆಗೆ ಆರಂಭವಾಗಿ ಸಂಜೆ 5 ರವರೆಗೆ ನಡೆಯಲಿದೆ. ವಿವಿಧ ನಗರ ಸಭೆಗಳ 12 ವಾರ್ಡ್ಗಳು ಮತ್ತು ಪುರಸಭೆಗಳ 17 ವಾರ್ಡ್ ಗಳಿಗೆ ಒಟ್ಟು 29 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪ್ರಕೃತಿ ವಿಕೋಪಕ್ಕೆ ತುತ್ತಾದ ಮಡಿಕೇರಿ 3 ಪಟ್ಟಣ ಪಂಚಾಯಿತಿಗಳಲ್ಲಿ ಈ ಚುನಾವಣೆಯನ್ನು ತಡೆಹಿಡಿಯಲಾಗಿದೆ.
ಇನ್ನು ಮತದಾರರು ಮತ ಚಲಾಯಿಸಲು ಅನುಕೂಲವಾಗುವಂತೆ ಆಯಾ ಮತ ಕ್ಷೇತ್ರಗಳ ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು, ಸರ್ಕಾರಿ ಸ್ವಾಮ್ಯದ ಅಂಗಸಂಸ್ಥೆಗಳಿಗೆ ಒಂದು ದಿನದ ಸಾರ್ವತ್ರಿಕ ರಜೆ ಘೋಷಿಸಲಾಗಿದೆ

Share

About Shaikh BIG TV NEWS, Hubballi

Check Also

Featured Video Play Icon

ಎಲ್ಲಡೆ ಶಿವನ ಆರಾಧನೆ ಭಕ್ತಿಯಲ್ಲಿ ಮಿಂದೆದ್ದ ಹುಬ್ಬಳ್ಳಿಯ ಜನರು | MAHA SHIVARATRI | BIG TV NEWS

Shaikh BIG TV NEWS, Hubballi See author's posts Share

Leave a Reply

Your email address will not be published. Required fields are marked *

error: Content is protected !!