Breaking News
Hiring Reporter’s For more Information Contact Above Number 876 225 4007 . Program producer
Home / ಜಿಲ್ಲೆ / ಮಂಡ್ಯ / 64 ನೇ ಕನ್ನಡ ರಾಜ್ಯೋತ್ಸವ ಆಚರಣೆ.

64 ನೇ ಕನ್ನಡ ರಾಜ್ಯೋತ್ಸವ ಆಚರಣೆ.

ಮಂಡ್ಯ : ಹೊನ್ನೇನಹಳ್ಳಿ ಪಂಚಾಯಿತಿ ಮುಂಭಾಗದಲ್ಲಿ ಕರವೇ ವತಿಯಿಂದ ಅದ್ದೂರಿಯಾಗಿ ನಡೆದ 64ನೇ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಯಿತು.
ಕರವೇ ಅಧ್ಯಕ್ಷ ಹೊನ್ನೇನಹಳ್ಳಿ ವೇಣು ಕನ್ನಡ ಧ್ವಜಾರೋಹಣ ನೆರವೇರಿಸಿ ರಾಜ್ಯ ಸರ್ಕಾರದ ಕನ್ನಡ ವಿರೋಧಿ ಧೋರಣೆಯನ್ನು ತೀವ್ರವಾಗಿ ಖಂಡಿಸಿದರು.
ಹಿಂದಿಯನ್ನು ಹೇರಿಕೆ ಮಾಡುತ್ತಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಕನ್ನಡಿಗರ ಹಿತಕಾಯುವ ಬದ್ಧತೆಯನ್ನು ಪ್ರದರ್ಶನ ಮಾಡಬೇಕು.
ಸರೋಜಿನಿಮಹಿಷಿ ವರದಿಯನ್ನು ಜಾರಿಮಾಡುವ ಬದ್ಧತೆಯನ್ನು ಪ್ರದರ್ಶನ ಮಾಡುವ ಬದ್ಧತೆಯನ್ನು ಪ್ರದರ್ಶನ ಮಾಡದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಎಲ್ಲಾ ಹಂತಗಳಲ್ಲಿಯೂ ಕನ್ನಡವನ್ನೇ ಆಡಳಿತ ಭಾಷೆಯಾಗಿ ಜಾರಿಗೊಳಿಸಬೇಕು ಎಂದು ವೇಣು ಆಗ್ರಹಿಸಿದರು.ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕರವೇ ಜಿಲ್ಲಾ ಉಪಾಧ್ಯಕ್ಷರಾದ ಚೇತನಕುಮಾರ್, ಸಾಸಲು ಗುರುಮೂರ್ತಿ, ಉಪನ್ಯಾಸಕರಾದ ಧನಂಜಯ , ಟೆಂಪೋ ಶ್ರೀನಿವಾಸ, ಶ್ರೀನಿಧಿ ಶ್ರೀನಿವಾಸ್ ಸೇರಿದಂತೆ ನೂರಾರು ಕರವೇ ಕಾರ್ಯಕರ್ತರು ಭಾಗವಹಿಸಿದ್ದರು.

Share

About Bora nayak BIG TV NEWS, Mandya

Check Also

ರಾಜ್ಯ ಸರ್ಕಾರದಿಂದ ರೈತ ಸಮುದಾಯಕ್ಕೆ `ಶುಭಸುದ್ದಿ

ಮಂಡ್ಯ : ರಾಜ್ಯ ಸರ್ಕಾರವು ರೈತರಿಗೆ ಸಿಹಿಸುದ್ದಿ ನೀಡಲು ಮುಂದಾಗಿದ್ದು, ರಾಜ್ಯದಲ್ಲಿ ಯಶಸ್ವಿನಿ ಯೋಜನೆಯನ್ನು ಮತ್ತೆ ಜಾರಿಗೆ ತರಲು ಚಿಂತನೆ …

Leave a Reply

Your email address will not be published. Required fields are marked *

error: Content is protected !!