admin

ರಾಜ್ಯದಲ್ಲಿ ಇಂದು 50,210 ಕೊರೋನಾ ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ  ಮಹಾಸ್ಪೋಟವೇ ಉಂಟಾಗಿದೆ. ಇದುವರೆದೆ 40 ಸಾವಿರ ಆಸುಪಾಸಿನಲ್ಲಿದ್ದಂತ ಕೊರೋನಾ ಪ್ರಕರಣಗಳ  ಸಂಖ್ಯೆ ಇಂದು ಅರ್ಧ ಲಕ್ಷ ದಾಟಿದೆ. ಕಳೆದ 24 ಗಂಟೆಯಲ್ಲಿ ಹೊಸದಾಗಿ 50,210 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಈ ಕುರಿತಂತೆ ಟ್ವಿಟ್ಟರ್ ನಲ್ಲಿ  ಮಾಹಿತಿ ಹಂಚಿಕಿಕೊಂಡಿರುವಂತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್  ಅವರು, ಕಳೆದ 24 2,20,459 ಮಂದಿಗೆ ಕೊರೋನಾ ಪರೀಕ್ಷೆ  ಮಾಡಲಾಗಿದೆ. ಇವರಲ್ಲಿ ಬೆಂಗಳೂರಿನ 26,299 ಸೇರಿದಂತೆ …

Read More »

ರಾಜ್ಯದಲ್ಲಿ 165 ಓಮಿಕ್ರಾನ್ ಕೇಸ್‍ ಪತ್ತೆ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್‌ ನ ರೂಪಾಂತರಿ ಓಮಿಕ್ರಾನ್‌ ತನ್ನ ಕಬಂದ ಬಾಹುಗಳನ್ನು ಕ್ಷಿಪ್ರಗತಿಯಲ್ಲಿ ಚಾಚುತ್ತಿದೆ. ರಾಜ್ಯದಲ್ಲಿಂದು 165 ಹೊಸ ಓಮಿಕ್ರಾನ್ ಕೇಸ್‍ಗಳು ವರದಿಯಾಗಿದೆ. ಈ ಎಲ್ಲಾ ಪ್ರಕರಣಗಳು ಬೆಂಗಳೂರಿನಲ್ಲಿಯೇ ಪತ್ತೆಯಾಗಿವೆ.ಈ ಬಗ್ಗೆ ಟ್ವೀಟ್ ಮಾಡಿರುವ ಆರೋಗ್ಯ ಸಚಿವ ಸುಧಾಕರ್ ಅವರು, ಬೆಂಗಳೂರಿನಲ್ಲಿ ಇಂದು 165 ಹೊಸ ಓಮಿಕ್ರಾನ್ ಪ್ರಕರಣಗಳು ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 931 ಕ್ಕೆ ತಲುಪಿದೆ ಎಂದು ತಿಳಿಸಿದ್ದಾರೆ. ಇನ್ನು ರಾಜ್ಯದಲ್ಲಿ …

Read More »

ಪತ್ರಕರ್ತ ಎಸ್​​.ಎಸ್​ ಗಂಗಾಧರ ಮೂರ್ತಿ ನಿಧನ

ಬೆಂಗಳೂರು: ನಗರದ ಟೌನ್​​ಹಾಲ್​​ ಮುಂಭಾಗ ನಡೆದ ಭೀಕರ ಲಾರಿ ಅಪಘಾತದಲ್ಲಿ ವಿಜಯವಾಣಿಯ ಮುಖ್ಯ ಉಪ ಸಂಪಾದಕರಾದ ಎಸ್​​.ಎಸ್​ ಗಂಗಾಧರ ಮೂರ್ತಿಯವರು (49) ನಿಧನರಾಗಿದ್ದಾರೆ. ಮೃತರು, ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಇಂದು ಮಧ್ಯಾಹ್ನ ಎಸ್​​.ಎಸ್​ ಗಂಗಾಧರ ಮೂರ್ತಿಯವರು ಬೈಕ್​​ನಲ್ಲಿ ಚಾಮರಾಜಪೇಟೆಯಲ್ಲಿರುವ ವಿಜಯವಾಣಿ ಕಚೇರಿಗೆ ಬರುತ್ತಿದ್ದಾಗ, ಟೌನ್ ಹಾಲ್ ಬಳಿ ನಿಯಂತ್ರಣ ತಪ್ಪಿದ ಲಾರಿ ಡಿವೈಡರ್ ಡಿಕ್ಕಿ ಹೊಡೆದು ಬಿದ್ದಿದೆ. ಈಗ ಲಾರಿ ಅಡಿಯಲ್ಲಿ ಸಿಲುಕಿದ ಗಂಗಾಧರ ಮೂರ್ತಿ ತೀವ್ರವಾಗಿ ಗಾಯಗೊಂಡಿದ್ದರು. …

Read More »

ಕಾಂಗ್ರೆಸ್ ವಿರುದ್ಧ ಆರೋಪ ಮಾಡಿದ ಸುಭಾಷ್ ಚಂದ್ರ ಬೋಸ್ ಅವರ ಪುತ್ರಿ

ನವದೆಹಲಿ :   ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125 ನೇ ಜನ್ಮದಿನ ಹಿನ್ನಲೆ ಇಂದು ದೆಹಲಿಯ ಇಂಡಿಯಾ ಗೇಟ್ ನಲ್ಲಿ ನೇತಾಜಿಯವರ ಹೊಲೊಗ್ರಾಮ್ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಅನಾವರಣಗೊಳಿಸಲಿದ್ದಾರೆ. ನೇತಾಜಿಗೆ ಅನ್ಯಾಯ ಮಾಡುವ ಒಂದು ವಿಭಾಗ ಕಾಂಗ್ರೆಸ್‌ ನಲ್ಲಿದೆ ಎಂದು ಅನಿತಾ ಬೋಸ್ ಹೇಳಿದ್ದಾರೆ. ಗಾಂಧೀಜಿ ನೆಹರೂ ಪರವಾಗಿ ನಿಂತರು. ನೇತಾಜಿ ಬಂಡಾಯ ಸ್ವಭಾವದವರಾಗಿದ್ದ ಕಾರಣ ಅವರಿಗೆ ನನ್ನ ತಂದೆಯನ್ನು ನಿಯಂತ್ರಿಸಲು ಸಾಧ್ಯವಾಗಲಿಲ್ಲ. …

Read More »

ಬೆಲೆ ಏರಿಕೆ ಕುರಿತು ಸಿಹಿ ಸುದ್ದಿ ನೀಡಿದ ಸಿಎಂ

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್, ಹಾಲಿನ ದರ ಏರಿಕೆ ಮಾಡಲು ಚಿಂತನೆ ನಡೆದಿತ್ತು. ಆದರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭರವಸೆ ನೀಡಿದಂತೆ ಸದ್ಯಕ್ಕೆ ವಿದ್ಯುತ್, ಹಾಲು ಹಾಗೂ ನೀರಿನ ದರ ಏರಿಕೆ ಮಾಡುವುದಿಲ್ಲ.ಈ ಬಗ್ಗೆ ಅವಸರದ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಕೆಎಂಎಫ್ ಹಾಲಿನ ದರ, ಎಸ್ಕಾಂಗಳ ವಿದ್ಯುತ್ ದರ ಮತ್ತು ಬೆಂಗಳೂರು ಜಲಮಂಡಳಿ ನೀರಿನ ದರ ಏರಿಕೆ ಪ್ರಸ್ತಾವನೆಗಳನ್ನು ಎಲ್ಲಾ ಆಯಾಮಗಳಿಂದ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ಈ ಕುರಿತಾಗಿ ಅವಸರದ ನಿರ್ಧಾರ ಕೈಗೊಳ್ಳುವುದಿಲ್ಲವೆಂದು …

Read More »

ಟ್ವಿಟರ್ ವಾರ್ : ಸಿದ್ಧರಾಮಯ್ಯ ವಿರುದ್ಧ ಕಿಡಿ ಕಾರಿದ ಹೆಚ್ ಡಿಕೆ

ಬೆಂಗಳೂರು: ನನ್ನನ್ನು ಕಂಡರೆ ಕುಮಾರಸ್ವಾಮಿಗೆ ಭಯ! ಅಂತಾರೆ. ಇದು ಭ್ರಮೆಯ ಪರಮಾವಧಿ. ಮತ್ತೆ ಸಿಎಂ ಆಗಲ್ಲ ಎಂದು ಖಚಿತವಾದ ಮೇಲೆ ಹತಾಶೆ, ಅಸಹನೆಯ ಬೆಂಕಿಯಲ್ಲಿ ಬೇಯುತ್ತಿದ್ದಾರೆ, ಪಾಪ. ಇದು ವಿಪರೀತಕ್ಕೆ ಹೋಗಿದೆ ಎನ್ನುವುದಕ್ಕೆ ಕಾಂಗ್ರೆಸ್ ಕಚೇರಿಯಲ್ಲಿ ಅವರು ಕೊಟ್ಟ ಹೇಳಿಕೆಗಳೇ ಸಾಕ್ಷಿ ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಸಿದ್ಧರಾಮಯ್ಯ ವಿರುದ್ಧ ಕಿಡಿ ಕಾರಿದ್ದಾರೆ. ಈ ಬಗ್ಗೆ ಸರಣಿ ಟ್ವಿಟ್ ಮಾಡಿರುವಂತ ಅವರು, ‘ಸ್ವಯಂ ಘೋಷಿತ ಸಂವಿಧಾನ ಪಂಡಿತ …

Read More »

ಬಸ್ ಅಪಘಾತ : 2 ಸಾವು, 8 ಜನರಿಗೆ ಗಾಯ

ತುಮಕೂರು: ಕಾಶಾಪುರ ರಸ್ತೆಯ ತಿರುವಿನಲ್ಲಿ ಬೇವಿನ ಮರಕ್ಕೆ ಸರ್ಕಾರಿ ಬಸ್ ಡಿಕ್ಕಿ  ಹೊಡೆದಿದೆ. ಅಪಘಾತದಲ್ಲಿ ಬಿಕ್ಷುಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವ ವ್ಯಕ್ತಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಾಶಪುರದ ಮುಖ್ಯರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ ಬಿಕ್ಷುಕನ ಮೇಲೆ ಬಸ್ ಹರಿದು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ನಂತರ ಅದೇ ಬಸ್ ರೈತ ಗೋಪಾಲಯ್ಯ ಎಂಬುವವರ ಮೇಲೆಯು ಹರಿದಿದೆ. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಗೋಪಾಲಯ್ಯ ಆಸ್ಪತ್ರೆಯಲ್ಲಿ ಮೃತ ಪಟ್ಟಿದ್ದಾರೆ. ಸರಕಾರಿ ಬಸ್ಸಿನ ಚಾಲಕ ಅಪಘಾತದ ನಂತರ ಸ್ಥಳದಿಂದ ಪರಾರಿ …

Read More »

ಶಿಕ್ಷಕರ ನೇಮಕಾತಿ ಕುರಿತು ಅಧಿಸೂಚನೆ ಪ್ರಕಟ

ಬೆಂಗಳೂರು: ರಾಜ್ಯದ ಪ್ರಾಥಮಿಕ ಶಾಲೆಗಳಲ್ಲಿ (6ರಿಂದ 8ನೇ ತರಗತಿ) ಬೋಧನೆಗೆ 15 ಸಾವಿರ ಪದವೀಧರ ಶಿಕ್ಷಕರ (ಜಿಪಿಟಿ) ನೇಮಕಾತಿ ಮಾಡಿಕೊಳ್ಳುವ ಸಂಬಂಧ ರಾಜ್ಯ ಸರಕಾರ ಕರಡು ಅಧಿಸೂಚನೆ ಪ್ರಕಟಿಸಿದೆ. ಈ ಬಾರಿ ಎಂಜಿನಿಯರಿಂಗ್‌ ಶಿಕ್ಷಣ ಪಡೆದಿರುವವರಿಗೂ ಶಿಕ್ಷಕರಾಗುವ ಅವಕಾಶ ಕಲ್ಪಿಸಿದೆ. 45 ವರ್ಷಗಳ ವರೆಗಿನ ವಯೋಮಿತಿ ನೀಡಲಾಗಿದೆ. ಪದವಿಯಲ್ಲಿ ಶೇ.50ರಷ್ಟು ಅಂಕ ಮತ್ತು ‘ಬಿ.ಇಡಿ’ ವಿದ್ಯಾರ್ಹತೆ ಹೊಂದಿದವರನ್ನು ಜಿಪಿಟಿ ಶಿಕ್ಷಕರ ಹುದ್ದೆಗಳಿಗೆ ಪರಿಗಣಿಸಲಾಗುತ್ತದೆ. ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ. …

Read More »

ಎನ್‌ಡಿಆರ್‌ಎಫ್ ಟ್ವಿಟರ್ ಖಾತೆ ಹ್ಯಾಕ್

ನವದೆಹಲಿ: ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರ್‌ಎಫ್) ಟ್ವಿಟರ್ ಖಾತೆಯನ್ನು ಶನಿವಾರ ತಡರಾತ್ರಿ ಹ್ಯಾಕ್ ಮಾಡಲಾಗಿದೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ. ತಾಂತ್ರಿಕ ತಜ್ಞರು ಈ ಕುರಿತು ಪರಿಶೀಲಿಸುತ್ತಿದ್ದು, ಎನ್‌ಡಿಆರ್‌ಎಫ್ ಖಾತೆಯನ್ನು ಶೀಘ್ರದಲ್ಲೇ ಮರುಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಎನ್‌ಡಿಆರ್‌ಎಫ್ ಮಹಾನಿರ್ದೇಶಕ ಅತುಲ್ ಕರ್ವಾಲ್, ‘ಶನಿವಾರ ರಾತ್ರಿ ಎನ್‌ಡಿಆರ್‌ಎಫ್ ಖಾತೆ ಹ್ಯಾಕ್ ಆಗಿದೆ. ಈ ಬಗ್ಗೆ ಪರಿಶೀಲಿಸಲಾಗುತ್ತಿದೆ’ ಎಂದು ಹೇಳಿದ್ದಾರೆ.

Read More »

ಅತಿಥಿ ಶಿಕ್ಷಕರಿಗೆ ಸಿಹಿಸುದ್ದಿ

ಬೆಂಗಳೂರು : ರಾಜ್ಯ ಸರ್ಕಾರವು ಅತಿಥಿ ಶಿಕ್ಷಕರಿಗೆ ಸಿಹಿಸುದ್ದಿ ನೀಡಿದ್ದು, ರಾಜ್ಯಾದ್ಯಂತ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ಗೌರವಧನ ಬಿಡುಗಡೆ ಮಾಡಿದೆ. ರಾಜ್ಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಒಟ್ಟು 23,078 ಮಂದಿ ಅತಿಥಿ ಶಿಕ್ಷಕರಿಗೆ ಒಟ್ಟು 121.47 ಕೋಟಿ ರೂ. ಗೌರವಧನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Read More »
You cannot copy content of this page