ಹುಬ್ಬಳ್ಳಿ: ಭಗವದ್ಗೀತೆಯನ್ನು ಪಠ್ಯದಲ್ಲಿ ಸೇರಿಸುವುದರಲ್ಲಿ ತಪ್ಪೆನಿಲ್ಲ. ಬಹಳ ಸ್ಪಷ್ಟವಾಗಿ ಹೇಳುತ್ತೇನೆ ಕೆಲ ವಿಚಾರಗಳು ಮಕ್ಕಳಿಗೆ ತಿಳಿಯಬೇಕು. ನೈತಿಕ ಶಿಕ್ಷಣ, ಧರ್ಮ ಕಲಿಯಬೇಕು. ಜಾತಿವಾದ ಮಾಡದೇ ಎಲ್ಲರೂ ಸ್ವಾಗತಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನಾನು ಇದನ್ನು ಸ್ವಾಗತ ಮಾಡುತ್ತೇನೆ. ಮಾಜಿ ಸಿಎಂ ಸಿದ್ದರಾಮಯ್ಯನವರು ಸ್ವಾಗತ ಮಾಡಿದರೇ ಅವರಿಗೆ ಸದ್ಬುದ್ಧಿ ಬಂದಿದೆ ಎಂದು ಅದನ್ನೂ ಕೂಡಾ ಸ್ವಾಗತ ಮಾಡುತ್ತೇನೆ ಎಂದು ಅವರು …
Read More »ಪಂಜಾಬ್ನಲ್ಲಿ ಇಂದು ಹೊಸ ಸಚಿವರ ಪ್ರಮಾಣವಚನ ಸಮಾರಂಭ
ಚಂಡೀಗಡ: ಪಂಜಾಬ್ನಲ್ಲಿ ಅಧಿಕಾರಕ್ಕೆ ಬಂದಿರುವ ಎಎಪಿ ಸರ್ಕಾರಕ್ಕೆ ಒಬ್ಬರು ಮಹಿಳೆ ಸೇರಿದಂತೆ ಹತ್ತು ಸಚಿವರು ಶನಿವಾರ ಸೇರ್ಪಡೆ ಆಗಲಿದ್ದಾರೆ. ಸಂಭಾವ್ಯ 10 ಸಚಿವರಲ್ಲಿ ಎಂಟು ಮಂದಿ ಮೊದಲ ಬಾರಿಗೆ ಶಾಸಕರಾದವರು. ಹೊಸ ಸಚಿವರ ಪ್ರಮಾಣವಚನ ಸಮಾರಂಭವು ರಾಜಭವನದಲ್ಲಿ ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.ಮುಖ್ಯಮಂತ್ರಿ ಭಗವಂತ ಮಾನ್ ಅವರು 10 ಸಚಿವರ ಹೆಸರನ್ನು ಶುಕ್ರವಾರ ಸಂಜೆ ಟ್ವೀಟ್ನಲ್ಲಿ ಪ್ರಕಟಿಸಿದ್ದಾರೆ.
Read More »ಚುನಾವಣೆ ನಡೆದರೆ ಮನೆಯಲ್ಲಿ ಮಲಗಿಕೊಳ್ಳೋದಕ್ಕೆ ಆಗಲ್ಲ :ಎಚ್.ಡಿ.ದೇವೇಗೌಡ
ಹಾಸನ: ಡಿಸೆಂಬರ್ನಲ್ಲಿ ಗುಜರಾತ್ ವಿಧಾನಸಭೆ ಚುನಾವಣೆ ಇದೆ. ಅದರ ಜೊತೆಗೆ ಕರ್ನಾಟಕದ ಚುನಾವಣೆ ನಡೆಯಲಿದೆ ಎನ್ನಲಾಗುತ್ತಿದೆ. ಚುನಾವಣೆ ನಡೆದರೆ ಮನೆಯಲ್ಲಿ ಮಲಗಿಕೊಳ್ಳೋದಕ್ಕೆ ಆಗಲ್ಲ. ಸೋಲೋ, ಗೆಲುವೋ ನಾವೂ ಕೂಡ ಹೋರಾಟ ಮಾಡುತ್ತೇವೆ ಎಂದು ರಾಜ್ಯಸಭಾ ಸದಸ್ಯ ಎಚ್.ಡಿ.ದೇವೇಗೌಡ ಹೇಳಿದರು. ಹೊಳೆನರಸೀಪುರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಮೇಲುಗೈ ಸಾಧಿಸಿದೆ. ಲೋಕಸಭೆ ಚುನಾವಣೆಗೆ ಇನ್ನೂ ಎರಡು ವರ್ಷವಿದೆ. ಬಿಜೆಪಿ ಬಲ ಹೆಚ್ಚಬಹುದು ಅಥವಾ ಕುಗ್ಗಬಹುದು. ರಾಜ್ಯಗಳ ಚುನಾವಣೆಗೂ, …
Read More »ನವೀನ್ ದೇಹವನ್ನು ದಾನ ಮಾಡಲು ಕುಟುಂಬಸ್ಥರು ತೀರ್ಮಾನ
ರಾಉಕ್ರೇನ್ ನಲ್ಲಿ ರಷ್ಯಾ ದಾಳಿಗೆ ಮೃತ ಪಟ್ಟ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ಚಳಗೇರಿ ಗ್ರಾಮದ ವೈದ್ಯಕೀಯ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಮೃತದೇಹವನ್ನು ದಾವಣಗೆರೆಯ ಎಸ್.ಎಸ್.ಆಸ್ಪತ್ರೆಗೆ ದಾನ ಮಾಡಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆ. ಈ ಕುರಿತು ಮಾತನಾಡಿದ ನವೀನ ಗ್ಯಾನಗೌಡರ ತಂದೆ ಶೇಖರಪ್ಪ, ” ಪಾರ್ಥಿವ ಶರೀರ ಸೋಮವಾರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರಿಗೆ ತಲುಪಿ, 9 ಗಂಟೆಗೆ ರಾಣೆಬೆನ್ನೂರು ತಾಲ್ಲೂಕಿನ ಚಳಗೇರಿ ಗ್ರಾಮಕ್ಕೆ ಮಗನ ಪಾರ್ಥಿವ ಶರೀರ ತಲುಪುತ್ತದೆ. …
Read More »ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಕುಸಿತ
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 106ಕ್ಕೆ ಕುಸಿದಿದೆ. ಐವರು ಮೃತರಾಗಿದ್ದಾರೆ.154 ಮಂದಿ ಚೇತರಿಸಿಕೊಂಡಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 2013ಕ್ಕೆ ಇಳಿದಿದೆ. 36,326 ಕೋವಿಡ್ ಪರೀಕ್ಷೆ ನಡೆದಿದ್ದು, ಶೇ.0.29ರ ಪಾಸಿಟಿವಿಟಿ ದರ ದಾಖಲಾಗಿದೆ. ಬೆಂಗಳೂರು ನಗರದಲ್ಲಿ 84 ಹೊಸ ಪ್ರಕರಣ ಪತ್ತೆಯಾಗಿದೆ.
Read More »ಹುಬ್ಬಳ್ಳಿಗೆ ತಂಪು ಏರಿಚಿದ ಮಳೆರಾಯ
ಹುಬ್ಬಳ್ಳಿ: ಬಿರು ಬಿಸಿಲಿನ ನಡುವೆಯೇ ಹುಬ್ಬಳ್ಳಿಯಲ್ಲಿ ಶುಕ್ರವಾರ ಮಧ್ಯಾಹ್ನ 3.30ರ ಸುಮಾರಿಗೆ, ನಗರದ ವಿವಿಧೆಡೆ ಕೆಲ ಹೊತ್ತು ಮಳೆ ತನ್ನ ಆರ್ಭಟ ತೋರಿಸಿತ್ತು. ಏಕಾಏಕಿ ಸುರಿದ ಮಳೆಯಿಂದಾಗಿ, ಸಾರ್ವಜನಿಕರು ದಿಕ್ಕು ತೋಚದೆ ಪರದಾಡಿದರು.ಮಳೆಗೆ ನೆನೆಯದಂತೆ ಸಮೀಪದ ಅಂಗಡಿ, ಕಟ್ಟಡಗಳ ಬಳಿ ನಿಂತರು. ಕೆಲವರು ವಿಧಿ ಇಲ್ಲದೆ ನೆನೆಯಬೇಕಾಯಿತು. ದ್ವಿಚಕ್ರ ವಾಹನ ಸವಾರರು ಮಳೆಯಲ್ಲೇ ಸವಾರಿ ಮಾಡಿದ ದೃಶ್ಯ ಅಲ್ಲಲ್ಲಿ ಕಂಡುಬಂತು.
Read More »ಮಾ. 21ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ
ಬೆಂಗಳೂರು : ಇಂದಿನಿಂದ ಮಾರ್ಚ್ 21 ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯಾದ್ಯಂತ ಮಳೆಯಾಗುವ ಸಾಧ್ಯತೆ ಇದೆ.ಇಂದು ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇಂದು ಚಿತ್ರದುರ್ಗ, ಶಿವಮೊಗ್ಗ, ತುಮಕೂರು ಮತ್ತು ದಾವಣಗೆರೆ ಜಿಲ್ಲೆಗಳನ್ನು ಹೊರತುಪಡಿಸಿ ಎಲ್ಲಾ ಜಿಲ್ಲೆಗಳ ಕೆಲವು ಕಡೆ ಮಳೆಯಾಗುವ ಇದೆ.
Read More »ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸುತ್ತಿರುವ ಜೇಮ್ಸ್
ಬೆಂಗಳೂರು: ಡಾ. ಪುನೀತ್ ರಾಜ್ ಕುಮಾರ್ಅ ವರ ಕೊನೆಯ ಚಿತ್ರ ಜೇಮ್ಸ್ ಮೊದಲ ದಿನವೇ ದಾಖಲೆ ಬರೆದಿತ್ತು. ನಿನ್ನೆ ಎರಡನೇ ದಿನವೂ ತನ್ನ ಅಬ್ಬರವನ್ನು ಮುಂದುವರೆಸಿದೆ. ಜೇಮ್ಸ್ ಚಿತ್ರ ಬಿಡುಗಡೆಯಾದ ಮೊದಲ ದಿನ ಅಂದರೆ ಗುರುವಾರ 25 ಕೋಟಿ ರೂ.ಗೂ ಅಧಿಕ ಗಳಿಕೆ ಕಂಡಿತ್ತು.ಇನ್ನೂ ಎರಡನೇ ದಿನ ಅಂದರೆ ಶುಕ್ರವಾರದ ಅಂತ್ಯಕ್ಕೆ 20 ಕೋಟಿ ರೂ. ಕಮಾಯಿ ಮಾಡಿದೆ ಎಂದು ಅಂದಾಜಿಸಲಾಗಿದ್ದು, ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸುತ್ತಿದೆ.
Read More »ಹಿಜಾಬ್ ಕುರಿತು ಹೈಕೋರ್ಟ್ ತೀರ್ಪಿ ಅಂತಿಮ, ಎಲ್ಲರೂ ಪಾಲಿಸಬೇಕು : ಬಿ.ಸಿ ನಾಗೇಶ್
ಬೆಂಗಳೂರು : ಹೈಕೋರ್ಟ್ ತೀರ್ಪಿನ ಅನುಸಾರ ಹಿಜಾಬ್ ಧರಿಸಿ ಶಾಲೆಗೆ ಹಾಜರಾಗಲು ಅಥವಾ ಪರೀಕ್ಷೆಗೆ ಹಾಜರಾಗಲು ಅವಕಾಶ ಇಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಾಬ್ ವಿಚಾರವಾಗಿ ಹೈಕೋರ್ಟ್ ತೀರ್ಪು ನೀಡಿದೆ ಹೀಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗುವ ವಿದ್ಯಾರ್ಥಿಗಳಿಗೆ ಯಾವುದೇ ಕಾರಣಕ್ಕೂ ಮತ್ತೆ ಅವಕಾಶ ಸಡಿಲಿಕೆ ಇರುವುದಿಲ್ಲ ಎಂದರು.
Read More »ಕಲಿಕಾ ಚೇತರಿಕೆ ಕಾರ್ಯ ಕ್ರಮವನ್ನು ಪರಿಚಯಿಸುತ್ತೀರುವ ಮೊದಲ ರಾಜ್ಯ ಕರ್ನಾಟಕ : ಬಿ.ಸಿ. ನಾಗೇಶ್
ಬೆಂಗಳೂರು: ದೇಶದ ಮೊದಲ ರಾಜ್ಯ ಕರ್ನಾಟಕ ಕಲಿಕಾ ಹಿನ್ನಡೆ ಸರಿದೂಗಿಸಲು ‘ಕಲಿಕಾ ಚೇತರಿಕೆ’ ಎಂಬ ವಿಶೇಷ ಕಾರ್ಯಕ್ರಮವನ್ನು ಜಾರಿಗೊಳಿಸುತ್ತಿರಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು. ಜಯನಗರದಲ್ಲಿರುವ ಆರ್.ವಿ. ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಕಲಿಕಾ ಚೇತರಿಕೆ ಕಾರ್ಯಕ್ರಮ ಉದ್ಘಾಟಿಸಿ ಸಚಿವರು ಮಾತನಾಡಿದರು. ಕೋವಿಡ್-19 ಸೋಂಕಿನ ಋಣಾತ್ಮಕ ಪರಿಣಾಮ ಶಿಕ್ಷಣ ಕ್ಷೇತ್ರದ ಮೇಲೆ ಅತಿ ಹೆಚ್ಚಿನ ಪ್ರಮಾಣದಲ್ಲಿ ಬೀರಿದೆ. ತರಗತಿಗಳಿಲ್ಲದೆ ಧೀರ್ಘಾವಧಿಯಲ್ಲಿ ಮಕ್ಕಳ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





