Breaking News

admin

ಪಡಿತರ ಚೀಟಿದಾರರಿಗೆ ಬಿಗ್ ಶಾಕ್

ನ್ಯಾಯಬೆಲೆ ಅಂಗಡಿಗಳಲ್ಲಿ ಇದುವರೆಗೂ ವಿತರಿಸಲಾಗುತ್ತಿದ್ದ ಗೋಧಿ ಇನ್ನು ಪಡಿತರ ಚೀಟಿದಾರರಿಗೆ ಸದ್ಯಕ್ಕೆ ಸಿಗುವುದಿಲ್ಲ. ಮಾರ್ಚ್ ತಿಂಗಳೇ ಗೋಧಿ ವಿತರಣೆ ಕೊನೆಯಾಗಲಿದೆ. ಇದರ ಬದಲು ಏಪ್ರಿಲ್‌ನಿಂದ ಹೆಚ್ಚುವರಿಯಾಗಿ ಪ್ರತಿ ಸದಸ್ಯನಿಗೆ 1 ಕೆ.ಜಿ. ಅಕ್ಕಿ ವಿತಣೆಯಾಗಲಿದೆ. ಇದುವರೆಗೂ ಕೇಂದ್ರ ಮತ್ತು ರಾಜ್ಯ ಸರಕಾರದ ಕೋಟಾದಲ್ಲಿಪ್ರತಿ ಸದಸ್ಯನಿಗೆ 10 ಕೆ.ಜಿ. ಹಾಗೂ ಒಂದು ಪಡಿತರ ಕಾರ್ಡ್‌ಗೆ 2 ಕೆ.ಜಿ. ಗೋಧಿ ವಿತರಣೆ ಮಾಡಲಾಗುತ್ತಿತ್ತು. ಆದರೆ ಏಪ್ರಿಲ್‌ ತಿಂಗಳಿಂದ ಕೊರೊನಾ ಕಾರಣ ಕೇಂದ್ರ ಸರಕಾರ …

Read More »

ಪವರ್ ಸ್ಟಾರ್ ಗೆ ಮರಣೋತ್ತರ ಸಹಕಾರ ರತ್ನ ಪ್ರಶಸ್ತಿ

ಬೆಂಗಳೂರು: ಎಲ್ಲರ ಹೃದಯದಲ್ಲಿ ಅಚ್ಚಳಿಯಾಗಿರುವ ಪವರಸ್ಟಾರ್ ಗೆ ಇದೀಗ ಮತ್ತೊಂದು ಮರಣೋತ್ತರ ಪ್ರಶಸ್ತಿ ದೊರಕಲಿದೆ. ಡಾ. ಪುನೀತ್​​ ರಾಜ್​ ಕುಮಾರ್​​ ಅವರಿಗೆ ಮರಣೋತ್ತರ ಸಹಕಾರ ರತ್ನ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದೆ ಅಂತ ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ತಿಳಿಸಿದ್ದಾರೆ. ಅವರು ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡುತ್ತ ಈ ಬಗ್ಗೆ ಮಾಹಿತಿ ನೀಡಿದರು. KMF ಹಾಗೂ ಶಿಕ್ಷಣ ಕ್ಷೇತ್ರದ ರಾಯಭಾರಿ ಆಗಿದ್ರು , ಯಾವುದೇ ಸಂಭಾವನೆ ಪಡೆಯುತ್ತಿರಲಿಲ್ಲ ಅಂತ …

Read More »

ಭಾರತಕ್ಕೆ ಮಾ. 20 ರಂದು ನವೀನ್ ಪಾರ್ಥೀವ ಶರೀರ ಮರಳಿದೆ

ನವದೆಹಲಿ: ಉಕ್ರೇನ್‌ಲ್ಲಿ ಮೃತಪಟ್ಟ ರಾಣಿಬೆನ್ನೂರು ತಾಲೂಕಿನ ವೈದ್ಯಕೀಯ ವಿದ್ಯಾರ್ಥಿ ನವೀನ್ ಶೇಕರಪ್ಪ ಪಾರ್ಥೀವ ಶರೀರ ಮಾ. 20 ರಂದು ಮುಂಜಾನೆ 3 ಗಂಟೆಗೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಭಾನುವಾರ ಭಾರತಕ್ಕೆ ಆಗಮಿಸಲಿದೆ. ಘಟನೆ : ಮಾರ್ಚ್ 1 ರಂದು ಉಕ್ರೇನ್‌ನ ಖಾರ್ಕೀವ್‌ನಲ್ಲಿ ರಷ್ಯಾ ನಡೆಸಿದ ದಾಳಿಯಲ್ಲಿ ನವೀನ್ ಶೇಕರಪ್ಪ ಮೃತಪಟ್ಟಿದ್ದರು. ಯುದ್ಧದಿಂದಾಗಿ ಮೃತದೇಹ ತರಲು ಸಾಧ್ಯವಾಗಿರಿಲ್ಲ. ಈ ನಿಟ್ಟಿನಲ್ಲಿ ಭಾರತ ಸರ್ಕಾರ ಸತತ ಪರಿಶ್ರಮಪಟ್ಟಿತ್ತು. ದುರ್ಘಟನೆ ನಡೆದ ಖಾರ್ಕೀವ್‌ನಲ್ಲಿ ಈಗಿನ …

Read More »

ಸುತ್ತೂರು ಮಠದ ಸ್ವಾಮೀಜಿಗೆ ಮನವಿ ಮಾಡಿದ ಪ್ರಜ್ವಲ್ ರೇವಣ್ಣ

ಹಾಸನ: ಸುತ್ತೂರು ಮಠದ ಸ್ವಾಮೀಜಿ ಅವರು ಬರೀ ರೇವಣ್ಣ ಅವರ ಮೇಲೆ ಪ್ರೀತಿ ಇದ್ದರೆ ಸಾಲದು. ಅವರ ಮಗನ ಮೇಲೂ ಒಂದಷ್ಟು ಪ್ರೀತಿ, ಆಶೀರ್ವಾದ ಇದ್ದರೆ ಮುಂದಿನ ದಿನಗಳಲ್ಲಿ ನಾನೂ ಕೂಡ ಬೆಳೆಯಲು ಒಳ್ಳೆಯದಾಗುತ್ತೆ ಎಂದು ಸಂಸದ ಪ್ರಜ್ವಲ್ ರೇವಣ್ಣ ಮನವಿ ಮಾಡಿದರು. ಹೊಳೆನರಸೀಪುರ ತಾಲೂಕಿನ ಟಿ.ಮಾಯಗೌಡನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಶ್ರೀನಂಜುಂಡೇಶ್ವರ ದೇವಾಲಯ ಉದ್ಘಾಟನೆ ಹಾಗೂ ವಿಗ್ರಹ ಪ್ರತಿಷ್ಠಾಪನೆ ಮತ್ತು ಧಾರ್ಮಿಕ ಸಭೆ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಆಗಮಿಸಿದ ಪ್ರಜ್ವಲ್​ …

Read More »

ಸಭಾಪತಿ ವಿರುದ್ಧ ಎಫ್‌ಐಆರ್‌ ದಾಖಲು : ಇಂತಹ ಘಟನೆ ಮರುಕಳಿಸಿದರೆ ಕಠಿಣ ಕ್ರಮ : ಸಿಎಂ

ಬೆಂಗಳೂರು: ಸಭಾಪತಿ ಬಸವರಾಜ ಹೊರಟ್ಟಿ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದನ್ನು ಗಂಭೀರವಾಗಿ ಪರಿಗಣಿಸಿದ್ದು, ಮುಂದೆ ಇಂತಹ ಘಟನೆ ಮರುಕಳಿಸದಂತೆ ಕ್ರಮ ಕೈಗೊಳ್ಳಲಾಗು ವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ. ಶಿಷ್ಟಾಚಾರದ ಪ್ರಕಾರ ಸಭಾಪತಿ ಸ್ಥಾನ ಉನ್ನತವಾದುದು. ಸಾಂವಿಧಾನಿಕ ಹುದ್ದೆಗಳಲ್ಲಿರುವವರ ವಿರುದ್ಧ ದೂರು ದಾಖಲಿಸು ವಾಗ ಅದಕ್ಕೂ ಮೊದಲು ಕೆಲವು ಪ್ರಕ್ರಿಯೆ ಅನುಸರಿಸಬೇಕು. ಹೊರಟ್ಟಿ ಅವರ ಪ್ರಕರಣದಲ್ಲಿ ಯಾವುದೂ ಪಾಲನೆಯಾಗದೇ ಲೋಪಗಳಾಗಿದ್ದು, ಮೇಲ್ನೋಟಕ್ಕೆ ದೃಢಪಟ್ಟಿದೆ. ಹೀಗಾಗಿ ತಪ್ಪಿತಸ್ಥರ ವಿರುದ್ಧ …

Read More »

ಪವರ್ ಸ್ಟಾರ್ ಗೆ ಶೀಘ್ರ ಕರ್ನಾಟಕ ರತ್ನ ಪ್ರಶಸ್ತಿಯನ್ನು ಘೋಷಣೆ ಮಾಡಲಾಗುವುದು : ಬೊಮ್ಮಾಯಿ

ಬೆಂಗಳೂರು: ದಿವಂಗತ ನಟ ಪುನೀತ್ ರಾಜ್ ಕುಮಾರ್ ಗೆ ರಾಜ್ಯ ಸರ್ಕಾರದಿಂದ ಕರ್ನಾಟಕ ರತ್ನ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿತ್ತು. ಇದೀಗ ಈ ಪ್ರಶಸ್ತಿಯನ್ನು ಶೀಘ್ರವೇ ಪ್ರಧಾನ ಮಾಡೋದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪುನೀತ್ ಕುಟುಂಬ ಸದಸ್ಯರೊಂದಿಗೆ ಮಾತುಕತೆ ನಡೆಸಲಾಗುವುದು. ಪುನೀತ್ ಹಾಗೂ ಡಾ.ರಾಜ್ ಕುಮಾರ್ ಅವರಿಗೆ ಗೌರವ ತರುವ ರೀತಿಯಲ್ಲಿ ಕಾರ್ಯಕ್ರಮ ಏರ್ಪಡಿಸಲು ಸಮಿತಿ ರಚಿಸಲಾಗುವುದು ಎಂದು ತಿಳಿಸಿದ್ದಾರೆ.

Read More »

ಮಾ. 28 ರಿಂದ SSLC ಪರೀಕ್ಷೆ ಪ್ರಾರಂಭ

ಬೆಂಗಳೂರು: ಮಾರ್ಚ್ 28 ರಿಂದ ಏಪ್ರಿಲ್ 11 ರವರೆಗೆ ಎಸ್‌ಎಸ್‌ಎಲ್ಸಿ ಪರೀಕ್ಷೆ ಪ್ರಾರಂಭವಾಗಲಿವೆ. ಪರೀಕ್ಷಾ ಕೇಂದ್ರಗಳ ಬಳಿ ವಿದ್ಯಾರ್ಥಿಗಳು, ಪೋಷಕರು ಗುಂಪುಗೂಡುವುದನ್ನು ತಡೆಯಲು ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಸಲುವಾಗಿ ಮೊದಲೇ ವಿದ್ಯಾರ್ಥಿಗಳ ಪೋಷಕರ ಮೊಬೈಲ್ ಗಳಿಗೆ ವಿದ್ಯಾರ್ಥಿಗಳ ಪರೀಕ್ಷಾ ಕೇಂದ್ರ, ಕೊಠಡಿ, ಆಸನ ಸಂಖ್ಯೆ ಬಗ್ಗೆ ಮಾಹಿತಿಯನ್ನು ಎಸ್‌ಎಂಎಸ್ ಮೂಲಕ ಕಳುಹಿಸಲಾಗುತ್ತದೆ. ಎಸ್‌ಎಸ್‌ಎಲ್ಸಿ ಪರೀಕ್ಷೆ ಸಂದರ್ಭದಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿರುವ ಕೊಠಡಿ ಸಂಖ್ಯೆ, ಆಸನಗಳ ಕುರಿತಾಗಿ ಮುಂಚಿತವಾಗಿ ಎಸ್‌ಎಂಎಸ್ ಮೂಲಕ …

Read More »

ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿಗಳಿಗೆ ಪರೀಕ್ಷೆ ನಿರಾಕಣೆ : ಮನೆಗೆ ಮರಳಿದ ಮಕ್ಕಳು

ವಿಜಯಪುರ (ಬೆಂಗಳೂರು ಗ್ರಾಮಾಂತರ): ಹಿಜಾಬ್ಕುರಿತು ಹೈಕೋರ್ಟ್ ತೀರ್ಪನ್ನು ನೀಡಿದರು ಪ್ರತಿಭಟನೆಗೆ ಮುಕ್ತು ದೊರತ್ತೀಲ್ಲಾ. ಹಿಜಾಬ್ ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿನಿಯರಿಗೆ  ಪ್ರವೇಶ ನಿರಾಕರಿಸಲಾಯಿತು. ಸಿಬ್ಬಂದಿಯ ಈ ನಿರ್ಧಾರ ಖಂಡಿಸಿ ವಿದ್ಯಾರ್ಥಿನಿಯರು ಸರ್ಕಾರಿ ಪದವಿ ಪೂರ್ವ ಕಾಲೇಜು ಮುಂಭಾಗ ಪ್ರತಿಭಟನೆ ನಡೆಸಿದರು. ಪಿಯು ಪ್ರಥಮ ವರ್ಷದ 16 ವಿದ್ಯಾರ್ಥಿನಿಯರು ಮನೆಗೆ ಮರಳಿ ಹೋದರು.ಸ್ಥಳಕ್ಕೆ ಬಂದ ತಹಶೀಲ್ದಾರ್ ಶಿವರಾಜ್, ‘ಹೈಕೋರ್ಟ್ ಆದೇಶ ಉಲ್ಲಂಘಿಸಿದರೆ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ. ಹಿಜಾಬ್ ತೆರೆದಿಟ್ಟು ತರಗತಿಗೆ ಹೋಗಿ’ …

Read More »

ರಾಜ್ಯದಲ್ಲಿ ಸರ್ಕಾರಿ ಹುದ್ದೆಗಳು ಖಾಲಿ : ಬೊಮ್ಮಾಯಿ‌

ಬೆಂಗಳೂರು: ರಾಜ್ಯದಲ್ಲಿ ಇರುವ 38 ಇಲಾಖೆಗಳಿಗೆ 7,68,975 ಹುದ್ದೆಗಳು ಮಂಜೂರಾಗಿದ್ದು, ಈ ಪೈಕಿ 5,16,073 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ, 2,52,902 ಹುದ್ದೆಗಳು ಖಾಲಿ ಇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ತಿಳಿಸಿದರು. 15 ಸಾವಿರ ಶಿಕ್ಷಕರ ನೇಮಕಾತಿಗೆ ಅನುಮತಿ ನೀಡಲಾಗಿದೆ. ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಯನ್ನು ಆರ್ಥಿಕ ಸ್ಥಿತಿಗತಿಯ ಆಧಾರದ ಮೇಲೆ ಅನುಮತಿ ನೀಡಲಾಗುವುದು ಎಂದು ಭರವಸೆ ನೀಡಿದರು.

Read More »

ಸಾಹಿತಿ ಕಲಬುರ್ಗಿ ಹತ್ಯೆ : ಮತ್ತೇ ಚುರುಕುಗೊಂಡ ತನಿಖೆ

ಧಾರವಾಡ : ಕಲಬುರ್ಗಿ ಅವರನ್ನು ಗುಂಡಿಟ್ಟು ಹತ್ಯೆ ಮಾಡಿ ಹಲವು ದಿನಗಳು ಕಳೆದಿವೆ. ವಿಚಾರಣೆ ನಂತರ ಕಲಬುರ್ಗಿ ಹಂತಕರನ್ನು ಬಂಧಿಸಲಾಗಿತ್ತು. ಸದ್ಯ ಸುದೀರ್ಘ ಅವಧಿಯ ಬಳಿಕ ಈಗ ಆರೋಪಿಗಳ ಪ್ರಮುಖ ವಿಚಾರಣೆ ಧಾರವಾಡ ನ್ಯಾಯಾಲಯ ದಲ್ಲಿ ಆರಂಭಗೊಂಡಿದೆ. ಪ್ರಮುಖ ಆರೋಪಿಗಳಾದ ಗಣೇಶ ಮಿಸ್ಕಿನ್, ಅಮೂಲ್ ಕಾಳೆ, ಅಮಿತ್ ಬದ್ದಿ, ವಾಸುದೇವ ಸೂರ್ಯವಂಶಿ, ಪ್ರವೀಣ ಚತುರ್. ಈ ಆರೋಪಿಗಳನ್ನು ಈ ಹಿಂದೆಯೇ ವಿಚಾರಣೆ ಮಾಡಬೇಕಿತ್ತು. ಆದರೆ ಕೊರೊನಾ ಕಾರಣಕ್ಕೆ ಎರಡು ವರ್ಷ …

Read More »