ಬೆಂಗಳೂರು: ಜಮೀನುಗಳ ಸರ್ವೆ ಕಾರ್ಯಕ್ಕೆ ಮತ್ತಷ್ಟು ಚುರುಕು ನೀಡುವ ಸಲುವಾಗಿ, ರಾಜ್ಯ ಸರ್ಕಾರ ಇದೀಗ ಡ್ರೋನ್ ಸರ್ವೇ ನಡೆಸೋದಕ್ಕೆ ಮುಂದಾಗಿದೆ. ಈ ಮೂಲಕ ತ್ವರಿತವಾಗಿ ರೈತರ ಜಮೀನುಗಳ ಸರ್ವೇ ನಡೆಸುವಂತ ನಿರ್ಧಾರವನ್ನು ಕೈಗೊಂಡು, ಗುಡ್ ನ್ಯೂಸ್ ನೀಡಿದೆ. ವಿಧಾನಸಭೆಯಲ್ಲಿ ಇಂದು ಕಂದಾಯ ಸಚಿವ ಆರ್ ಅಶೋಕ್ ಮಾಹಿತಿ ನೀಡಿದ್ದು, 100 ವರ್ಷಗಳಿಂದ ಆಸ್ತಿ ಸರ್ವೇ ಕಾರ್ಯವಾಗಿಲ್ಲ. ಸರ್ವೇ ಕಾರ್ಯವನ್ನು ಮಾಡೋದಕ್ಕೆ ಡ್ರೋನ್ ಗಳನ್ನು ಬಳಕೆ ಮಾಡಲಾಗುತ್ತಿದೆ. ತ್ವರಿತವಾಗಿ ಡ್ರೋನ್ ಮೂಲಕ …
Read More »ಬಹುರಾಷ್ಟ್ರೀಯ ಕಂಪನಿ ಉದ್ಯೋಗಿ ನೇಣಿಗೆ ಶರಣು
ಧಾರವಾಡ: ಪೇಡೆನಗರದ ರಜತಗಿರಿಯ ಬಹುರಾಷ್ಟ್ರೀಯ ಕಂಪನಿಯ ಉದ್ಯೋಗಿಯೊಬ್ಬ ನೇಣಿಗೆ ಶರಣಾಗಿದ್ದಾನೆ.ಅಭಿಷೇಕ ಮಹಾದೇವಪ್ಪ ಮಾಳಗಿ (29) ಎಂಬಾತನೇ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡವನಾಗಿದ್ದು, ಈತ ಉತ್ತಮ ಕ್ರಿಕೆಟರ್ ಕೂಡ ಆಗಿದ್ದ. ಸ್ಥಳೀಯ ಎಸ್ಡಿಎಂ ಕ್ರಿಕೆಟ್ ಅಕಾಡೆಮಿ ಪರ ಆಟವಾಡುತ್ತಿದ್ದ. ಅಭಿಷೇಕ ಒಬ್ಬ ಒಳ್ಳೆ ವಿಕೇಟ್ ಕೀಪರ್ ಹಾಗೂ ಬ್ಯಾಟ್ಸ್ಮನ್ ಆಗಿದ್ದರು. ಎಂಬಿಎ ಪದವೀಧರನಾಗಿದ್ದ ಈತ ಬಹುರಾಷ್ಟ್ರೀಯ ಕಂಪನಿಯ ಉದ್ಯೋಗಿಯಾಗಿದ್ದು, ನಿನ್ನೆ ರಾತ್ರಿ ಮನೆಯಲ್ಲೇ ನೇಣು ಹಾಕಿಕೊಂಡಿದ್ದು ಆದರೆ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲವಾಗಿದೆ.ವಿದ್ಯಾಗಿರಿ …
Read More »ನೀರಾವರಿ ನಿಗಮದ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ
ಧಾರವಾಡ:ನೀರಾವರಿ ನಿಗಮದ ಎಇಇ ಬಸವರಾಜ ಪಾಟೀಲ ಎನ್ನುವವರ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಧಾರವಾಡದ ಸನ್ಮತಿನಗರದಲ್ಲಿ ಬಸವರಾಜ ಅವರ ಮನೆ ಇದ್ದು, ಅಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಯಾದಗಿರಿ ಎಸಿಬಿ ಅಧಿಕಾರಿಗಳಿಂದ ದಾಳಿ ನಡೆದಿದೆ. ಸನ್ಮತಿನಗರದಲ್ಲಿರುವ ಬಸವರಾಜ ಅವರ ಮನೆ ಸದ್ಯ ಲಾಕ್ ಆಗಿದ್ದು, ಸಂಬಂಧಿಕರನ್ನು ಸ್ಥಳಕ್ಕೆ ಕರೆಯಿಸಿ ಬಾಗಿ ತೆಗೆಯಲು ಅಧಿಕಾರಿಗಳು ಪ್ರಯತ್ನ ನಡೆಸಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದೇ ಇರುವುದರಿಂದ ಎಸಿಬಿ ಅಧಿಕಾರಿಗಳು ಹೊರಗಡೆ …
Read More »ತಿರುಪತಿ ದೇವಸ್ಥಾನ ಹಾಗೆಯೇ ಮೇಲುಕೋಟೆ ಅಭಿವೃದ್ಧಿ : ಸಿಎಂ ಭರವಸೆ
ಮೇಲುಕೋಟೆ: ‘ತಿರುಪತಿ ತಿರುಮಲ ದೇವಸ್ಥಾನದ ಮಾದರಿಯಲ್ಲಿ ಮೇಲುಕೋಟೆ ಅಭಿವೃದ್ಧಿ ಪ್ರಾಧಿಕಾರ ರಚಿಸಿ ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ಧಿ ಮಾಡಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು. ವೈರಮುಡಿ ಉತ್ಸವದ ಅಂಗವಾಗಿ ಮೇಲುಕೋಟೆಯಲ್ಲಿ ಸೋಮವಾರ ರಾತ್ರಿ ನಡೆದ ಸಮಾರಂಭದಲ್ಲಿ ಮಾತನಾಡಿದರು. ‘ಆಂಧ್ರಪ್ರದೇಶದ ಟಿಟಿಡಿ ಮಾದರಿ ಪ್ರಾಧಿಕಾರ ರಚಿಸಿದರೆ ಕ್ಷೇತ್ರದ ಪ್ರವಾಸಿ ತಾಣಗಳನ್ನು ಅಭಿವೃದ್ಧಿ ಪಡಿಸಬಹುದು. ಭಕ್ತರ ಅನುಕೂಲಕ್ಕಾಗಿ 50 ಕೊಠಡಿಗಳ ಯಾತ್ರಿನಿವಾಸ್ ನಿರ್ಮಿಸಲು ತಕ್ಷಣ ಕ್ರಮವಹಿಸಲಾಗುವುದು’ ಎಂದರು.
Read More »ಹೊಸ ಪರಿಕಲ್ಪನೆಯಡಿ ಡಿಸಿ ಗ್ರಾಮಗಳಿಗೆ ಭೇಟಿ
ಶಿವಮೊಗ್ಗ : ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ- ಕಂದಾಯ ಇಲಾಖೆ ಎಂಬ ಹೊಸ ಪರಿಕಲ್ಪನೆಯಡಿ ಪ್ರತಿ ತಿಂಗಳ 3ನೇ ಶನಿವಾರದಂದು ಜಿಲ್ಲಾಧಿಕಾರಿಗಳು ಗ್ರಾಮ ಭೇಟಿ ನೀಡಿ ವಾಸ್ತವ್ಯ ಮಾಡಲಿದ್ದಾರೆ. ಈ ಪರಿಕಲ್ಪನೆಯ ಅಂಗವಾಗಿ ದಿ:19/03/2022ರ ಶನಿವಾರ ಬೆಳಗ್ಗೆ 11.00ಕ್ಕೆ ತೀರ್ಥಹಳ್ಳಿ ತಾಲೂಕು ನೊಣಬೂರು ಗ್ರಾಮ ಪಂಚಾಯತಿ ಆವರಣದಲ್ಲಿ ಜಿಲ್ಲಾಧಿಕಾರಿಗಳು ಕಂದಾಯ ಮತ್ತು ಇತರೆ ಎಲ್ಲಾ ಇಲಾಖೆಯ ಎಲ್ಲಾ ಅಧಿಕಾರಿ/ಸಿಬ್ಬಂದಿಗಳೊಂದಿಗೆ ಸಾರ್ವಜನಿಕರನ್ನು ಭೇಟಿ ಮಾಡಿ ಕುಂದು ಕೊರತೆಗಳನ್ನು ಆಲಿಸಿ ಬಗೆಹರಿಸುವ ನಿಟ್ಟಿನಲ್ಲಿ …
Read More »ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಶಾಕ್ ಕೊಟ್ಟ ಎಸಿಬಿ ಅಧಿಕಾರಿಗಳು :78 ಕಡೆ ದಾಳಿ
ಬೆಂಗಳೂರು: ಬೆಳ್ಳಂಬೆಳಗ್ಗೆ ರಾಜ್ಯದ 18 ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಏಕಕಾಲಕ್ಕೆ ಇನ್ನೂರಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಸರ್ಕಾರಿ ಅಧಿಕಾರಿಗಳಿಗೆ ಎಸಿಬಿ ಅಧಿಕಾರಿಗಳು ಶಾಕ್ ನೀಡಿದ್ದು, ರಾಜ್ಯಾದ್ಯಂತ 78 ಕಡೆಗಳಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ 3 ಅಧಿಕಾರಿಗಳ ಮನೆ ಮತ್ತು ಕಚೇರಿ ಸೇರಿದಂತೆ 14 ಕಡೆಗಳಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಿ.ಕೆ ಶಿವಕುಮಾರ್ ಹೆಚ್ಚುವರಿ ನಿರ್ದೇಶಕ, ಕೈಗಾರಿಕೆ & ವಾಣಿಹಜ್ಯ ಇಲಾಖೆ, ಖನಿಜ ಭವನ, …
Read More »ಹಂದಿಗೆ ಗುದ್ದಿ ಕಾರ್ ಪಲ್ಟಿ : ಸಾವಿನಲ್ಲಿ ಒಂದಾಂದ ತಾಯಿ, ಮಗ
ಚಿತ್ರದುರ್ಗ: ರಸ್ತೆಯಲ್ಲಿ ಅಡ್ಡಬಂದ ಹಂದಿಗೆ ಗುದ್ದಿ ಕಾರ್ ಪಲ್ಟಿಯಾಗಿದ್ದು, ತಾಯಿ-ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ಐಮಂಗಲ ಸಮೀಪ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಘಟನೆ ನಡೆದಿದೆ. ರವಿಚಂದ್ರ(40), ತಾಯಿ ಎಲ್ಲಮ್ಮ(65) ಮೃತಪಟ್ಟವರು ಎನ್ನಲಾಗಿದೆ. ಇನ್ನು ಈ ಅಪಘಾತದಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಗಾಯಗೊಂಡಿರುವವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
Read More »2025 ಕ್ಕೆ ಕರ್ನಾಟಕ ನಂಬರ್ ಒನ್ ರಾಜ್ಯ ವಾಗಲಿದೆ : ಬೊಮ್ಮಾಯಿ
ಬೆಂಗಳೂರು : ಸಮಗ್ರ ಆರ್ಥಿಕ ಬೆಳಣಿಗೆಯಲ್ಲಿ 2025 ಕ್ಕೆ ಕರ್ನಾಟಕ ನಂಬರ್ ಒನ್ ರಾಜ್ಯ ವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಕ್ತಪಡಿಸಿದರು. ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಆಯೋಜಿಸಿದ್ದ ಕರ್ನಾಟಕ ವಿಷನ್ 2025 ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ 5 ಟ್ರಿಲಿಯನ್ ಡಾಲರ್ ಆರ್ಥಿಕತೆಯ ಕನಸಿಗೆ 1.5 ಟ್ರಿಲಿಯನ್ ಡಾಲರ್ ಗಳ ಕೊಡುಗೆ ಕರ್ನಾಟಕ ನೀಡಲಿದೆ ಎನ್ನುವ ವಿಶ್ವಾಸವನ್ನು ವ್ಯಕ್ತಪಡಿಸಿದರು. 2025 …
Read More »ದ ಕಾಶ್ಮೀರ್ ಫೈಲ್ಸ್ ಪ್ರಧಾನಿ ಸಂದೇಶ : ಕಾಂಗ್ರೆಸ್ ಆಕ್ರೋಶ ವ್ಯಕ್ತ
ಹೊಸದಿಲ್ಲಿ: ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದ ಕಾಶ್ಮೀರ್ ಫೈಲ್ಸ್’ ಚಿತ್ರಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ಸಂದೇಶದ ಬಗ್ಗೆ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರ ದ್ವೇಷ ಮತ್ತು ಸುಳ್ಳು ಹರಡುವ ಮೂಲಕ ಎಷ್ಟು ರಾಜಕೀಯ ಅವಕಾಶಗಳನ್ನು ಪಡೆಯಲು ಬಯಸಿದೆ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ಪ್ರಶ್ನಿಸಿದ್ದಾರೆ.
Read More »ಹುಬ್ಬಳ್ಳಿ ಯಲ್ಲಿ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಉಚಿತ ವೀಕ್ಷಣೆ
ಹುಬ್ಬಳ್ಳಿ: ಮಾ.16ರಿಂದ ಮಾ.20ರ ವರೆಗೆ `ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಉಚಿತ ವೀಕ್ಷಣೆಗೆ ಹುಬ್ಬಳ್ಳಿಯ ರೂಪಂ ಮತ್ತು ಧಾರವಾಡದ ಶ್ರೀನಿವಾಸ ಚಿತ್ರಮಂದಿರದಲ್ಲಿ ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ ಎಂದುಕೇಂದ್ರ ಸಚಿವ ಪ್ರಲ್ಹಾದ ಜೋಶಿ ವ್ಯವಸ್ಥೆ ಮಾಡಿದ್ದಾರೆ. ಬುಧವಾರದಿಂದ ಮಧ್ಯಾಹ್ನ 3 ಹಾಗೂ ಸಂಜೆ 6ರ ಪ್ರದರ್ಶನಗಳಲ್ಲಿ ಸಿನಿಮಾ ವೀಕ್ಷಣೆ ಮಾಡಬಹುದಾಗಿದೆ ಮೂರುಸಾವಿರ ಮಠದ ಗುರುಸಿದ್ಧ ರಾಜೇಂದ್ರ ಸ್ವಾಮೀಜಿ ಪ್ರದರ್ಶನಕ್ಕೆ ಚಾಲನೆ ನೀಡಲಿದ್ದಾರೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





