ಮದ್ದೂರು :ಈಗಾಗಲೇ ನನಗೆ ನಾಲ್ಕೈದು ಕ್ಷೇತ್ರಗಳಿಂದ ವಿಧಾನ ಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸುವಂತೆ ಆಹ್ವಾನ ಬಂದಿದೆ.ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ನನ್ನ ಸ್ಪರ್ಧೆ ಇರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಹೇಳಿದರು. ಪಟ್ಟಣದ ಹೊರ ವಲಯದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಶ್ರೀ ಬಾಲಾಜಿ ಕಲ್ಯಾಣ ಮಂಟಪದಲ್ಲಿ ನಡೆದ ತಮ್ಮ ಸಹಪಾಠಿ ಪುಟ್ಟಿನಕೆರೆ ಸತ್ಯನಾರಾಯಣಪುತ್ರಿಯ ವಿವಾಹ ಮಹೋತ್ಸವದಲ್ಲಿ ಪಾಲ್ಗೊಂಡ ಬಳಿಕ ಸುದ್ಧಿಗಾರರೊಂದಿಗೆ ಮಾತನಾಡಿದರು. ಈ ಬಗ್ಗೆ ಇನ್ನೂ ಯಾವುದೇ …
Read More »ಆಟೋ ಅಪಘಾತದಲ್ಲಿ 5 ಭಾರತೀಯ ವಿದ್ಯಾರ್ಥಿಗಳು ಸಾವು
ಮಾರ್ಚ್ 13 ರಂದು ಟೊರೊಂಟೊ ಬಳಿ ಆಟೋ ಅಪಘಾತದಲ್ಲಿ ಕನಿಷ್ಠ 5 ಭಾರತೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ವಿದ್ಯಾರ್ಥಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆನಡಾದಲ್ಲಿ ಸಂಭವಿಸಿದೆ. ಕೆನಡಾದ ಭಾರತದ ಕಮಿಷನರ್ ಅಜಯ್ ಬಿಸಾರಿಯಾ ತಿಳಿಸಿದ್ದಾರೆ. ಟೊರೊಂಟೊದಲ್ಲಿರುವ ಭಾರತೀಯ ಕಾನ್ಸುಲೇಟ್ ಜನರಲ್ ತಂಡವು ಸಹಾಯಕ್ಕಾಗಿ ಸಂತ್ರಸ್ತರ ಸ್ನೇಹಿತರೊಂದಿಗೆ ಸಂಪರ್ಕದಲ್ಲಿದೆ.ಟ್ವಿಟರ್ನಲ್ಲಿ ಅಜಯ್ ಬಿಸಾರಿಯಾ ಅವರು ಸಂತ್ರಸ್ತರ ಕುಟುಂಬಗಳಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
Read More »ವೈರಮುಡಿ ಉತ್ಸವಕ್ಕೆ ಇಂದು ಸಿಎಂ ಚಾಲನೆ
ಮಂಡ್ಯ : ಐತಿಹಾಸಿಕ ಶ್ರೀಚಲುವನಾರಾಯಣಸ್ವಾಮಿಯ ವೈರಮುಡಿ ಉತ್ಸವಇಂದು ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆಯ ನಡೆಯಲಿದ್ದು, ಉತ್ಸವಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ಕೊರೊನಾ ಕಾರಣದಿಂದ ಕಳೆದ 2 ವರ್ಷಗಳಿಂದ ಸರಳವಾಗಿ ನಡೆದಿದ ವೈರಮುಡಿ ಉತ್ಸವ ಈ ಬಾರಿ ಅದ್ಧೂರಿಯಾಗಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಅಗತ್ಯ ಸಿದ್ಧತೆ ಮತ್ತು ಕ್ರಮಗಳನ್ನು ವಹಿಸಲಾಗಿದೆ.
Read More »ಇಂದಿನಿಂದ ಕೇಂದ್ರ ಬಜೆಟ್ ಪ್ರಾರಂಭ
ನವದೆಹಲಿ : ಸಂಸತ್ತಿನ ಬಜೆಟ್ ಅಧಿವೇಶನದ ಎರಡನೇ ಭಾಗವು ಇಂದಿನಿಂದ ಆರಂಭವಾಗಲಿದೆ. ಕೇಂದ್ರ ಬಜೆಟ್ಗೆ ಅನುಮೋದನೆ ಪಡೆದುಕೊಳ್ಳುವುದು ಮತ್ತು ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದ ಬಜೆಟ್ ಮಂಡನೆ ಸರ್ಕಾರದ ಪ್ರಮುಖ ಗುರಿಯಾಗಿದೆ. ಭವಿಷ್ಯ ನಿಧಿ ಬಡ್ಡಿ ದರ ಇಳಿಕೆ ಸೇರಿದಂತೆ ನಾನಾ ವಿಷಯಗಳಲ್ಲಿ ಸರ್ಕಾರದ ವಿರುದ್ಧ ಸಮರ ಸಾರಲು ವಿಪಕ್ಷಗಳು ಸಜ್ಜಾಗಿವೆ.
Read More »ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ವಾಮಾಚಾರ
ಧಾರವಾಡ: ಲಿಂಬಿ ಹಣ್ಣು ಹಾಗೂ ಕೋಳಿ ಮೋಟ್ಟೆ ಇಟ್ಟು ವಾಮಾಚಾರ ಮಾಡಿದ ಘಟನೆ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ನಡೆದಿದ್ದು. ಯಾವ ವಿಚಾರದಲ್ಲಿ ಈ ಮಾಟ ಮಂತ್ರ ಮಾಡಿದ್ದಾರೆ ಎಂದು ತಿಳಿದಿಲ್ಲ. ಆದರೆ ರಾತ್ರಿ ಹೊತ್ತು ಯಾರೋ ಕಿಡಿಗೇಡಿಗಳು ವಾಮಾಚಾರ ಮಾಡಿರುವ ಘಟನೆ ಭಾನುವಾರ ನಡೆದಿದೆ. ವಾಮಾಚಾರ ಮಾಡಿಸಿದ ಕಿಡಿಗೇಡಿಗಳು, ಲಿಂಬೆಹಣ್ಣು, ತತ್ತಿ ಜೋಡಿ ಇಟ್ಟು ವಾಮಾಚಾರ ಮಾಡಿಸಲಾಗಿದ್ದು ಸಂಪೂರ್ಣ ಲಿಂಬೆಹಣ್ಣಿನ ಮೇಲೆ ತಿಳಿಯದ ಅಕ್ಷರಗಳನ್ನು ಸಹ ನಮೂದಿಸಿ ಈ …
Read More »ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಡಾಕ್ಟರೇಟ್ ಪದವಿ
ಮೈಸೂರು: ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಗೆ ಮೈಸೂರು ವಿವಿಯಿಂದ ಗೌರವ ಡಾಕ್ಟರೇಟ್ ಘೋಷಣೆ ಮಾಡಲಾಗಿದೆ. ಸ್ವತಹ ಮೈಸೂರು ವಿವಿಯ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಅವರು, ಬೆಂಗಳೂರಿನ ಸದಾಶಿವನಗರದಲ್ಲಿನ ಪುನೀತ್ ನಿವಾಸಕ್ಕೆ ತೆರಳಿ, ಪತ್ನಿ ಅಶ್ವಿನಿಗೆ ಕಾರ್ಯಕ್ರಮಕ್ಕೆ ಆಗಮಿಸುವಂತೆ ಆಹ್ವಾನ ನೀಡಿದ್ದಾರೆ. ಈ ವೇಳೆ ಅಂದು ಪುನೀತ್ ರಾಜ್ ಕುಮಾರ್ ಹೇಳಿದ್ದ ಮಾತನ್ನು ನೆನಪು ಮಾಡಿಕೊಂಡ ಅವರು, ಈ ಹಿಂದೆ ಹಲವು ಬಾರಿ ಅಪ್ಪುಗೆ ಗೌರವ ಡಾಕ್ಟರೇಟ್ ನೀಡುವ …
Read More »ಬಿಜೆಪಿ ಜಗತ್ತಿನ ಅತೀದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ : ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ :ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಅದ್ದೂರಿ ಗೆಲುವು ಸಾಧಿಸಿದೆ. ಜಗತ್ತಿನ ಅತೀದೊಡ್ಡ ಪಕ್ಷವಾಗಿ ಬಿಜೆಪಿ ಹೊರಹೊಮ್ಮಿದೆ. ದೇಶದ ಜನರು ಪ್ರಧಾನಿ ಮೋದಿ ಮೇಲೆ ಇಟ್ಟ ವಿಶ್ವಾಸ ಕಂಡು ನಾನು ಬೆರಗಾಗಿದ್ದೇನೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ನಾನು ಉತ್ತರಖಾಂಡ್ ಬಗ್ಗೆ ಹೇಳೋದು ಇಷ್ಟೇ. ನಾಲ್ಕು ದಿನ ಪ್ರಧಾನಮಂತ್ರಿಗಳು ಉತ್ತರಾಖಂಡ್ ಭೇಟಿ ಗೆಲುವಿಗೆ ಕಾರಣವಾಯಿತು. ಉತ್ತರಾಖಂಡ ಗೆಲುವಿಗೆ ನಾನೊಬ್ಬನೇ ಕಾರಣ ಅಂತ …
Read More »ಬಿಜೆಪಿ ಎಂದರೆ ಬ್ರೋಕರ್ ಪಾರ್ಟಿ : ಡಿಕೆಶಿ
ಬೆಂಗಳೂರು: ಉತ್ತರಪ್ರದೇಶದಲ್ಲಿ ಸೀಟುಗಳ ಸಂಖ್ಯೆ ಕಡಿಮೆಯಾದ ಬಗ್ಗೆ, ಪಂಜಾಬ್ನಲ್ಲಿ ಅವರು ಎಷ್ಟು ಸ್ಥಾನ ಗೆದ್ದಿದ್ದಾರೆ? ಬಿಜೆಪಿ ಎಂದರೆ ಬ್ರೋಕರ್ ಪಾರ್ಟಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ. ಯುವಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಶೇ. 40ರಷ್ಟು ಪರ್ಸಂಟೇಜ್ ಅಲ್ಲ, ಹೊಟೇಲ್ನಲ್ಲಿ ತಿಂಡಿ ದರ ಪಟ್ಟಿ ಇದ್ದಂತೆ ಇಲಾಖೆಗಳಲ್ಲಿ ವರ್ಗಾವಣೆ, ಟೆಂಡರ್ ಸೇರಿ ಇತರೆ ಕೆಲಸಗಳಿಗೆ ಪಟ್ಟಿ ನೇತು ಹಾಕಲಾಗಿದೆ ಎಂದರು.ನಾವು ನಾಲ್ಕೂ ರಾಜ್ಯಗಳಲ್ಲಿ ಆಧಿಕಾರದಲ್ಲಿ ಇರಲಿಲ್ಲ. …
Read More »ಮಾ. 28 ರಂದು ಎಂ.ಬಿ ಪಾಟೀಲ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಪದಗ್ರಹಣ
ಬೆಂಗಳೂರು: ಹಿರಿಯ ಕಾಂಗ್ರೆಸ್ ನಾಯಕ ಎಂ.ಬಿ ಪಾಟೀಲ್ ಅವರನ್ನು ಜನವರಿ 25 ರಂದು ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ಮಾರ್ಚ್ 28ರಂದು ವಿದ್ಯುಕ್ತವಾಗಿ ಕೈ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಪದಗ್ರಹಣ ನಡೆಸಲಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ಅದ್ಧೂರಿ ಸಮಾರಂಭದಲ್ಲಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಈ ಸಮಾರಂಭಕ್ಕೆ ರಾಜ್ಯದ ಎಲ್ಲೆಡೆಯಿಂದ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ.
Read More »ಕಾಂಗ್ರೆಸ್ ಪಾರ್ಟ್ ಟೈಮ್ ಪಕ್ಷ, ರಾಹುಲ್ ಗಾಂಧಿ ಪಾರ್ಟ್ ಟೈಂ ನಾಯಕ : ಶ್ರೀ ರಾಮುಲು ಟೀಕೆ
ಮೈಸೂರು:ಐದು ರಾಜ್ಯಗಳ ಚುನಾವಣೆ ಬಳಿಕ ಕಾಂಗ್ರೆಸ್ ನಾಯಕರು ನಮ್ಮ ಸಂಪರ್ಕದಲ್ಲಿದ್ದಾರೆ.ಕಾಂಗ್ರೆಸ್ ಪಕ್ಷದ ಕೆಲ ಶಾಸಕರು ನಮ್ಮ ಸಂಪರ್ಕದಲ್ಲಿದ್ದು, ಬಿಜೆಪಿಗೆ ಬರಲು ಸಿದ್ದರಾಗಿದ್ದಾರೆ ಎಂದು ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕಾಂಗ್ರೆಸ್ ಧೂಳೀಪಟವಾಗಿದೆ. ಈ ಅದೊಂದು ಪಾರ್ಟ್ ಟೈಮ್ ಪಕ್ಷವಾಗಿದೆ ಎಂದರು. ರಾಹುಲ್ ಗಾಂಧಿ ಪಾರ್ಟ್ ಟೈಂ ನಾಯಕರಾಗಿದ್ದಾರೆ. ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಮಹಾತ್ಮ ಗಾಂಧೀಜಿ ಅವರ ಹೆಸರು ಇಟ್ಟುಕೊಂಡು ಕಾಂಗ್ರೆಸ್ ನಲ್ಲಿ ಹಲವು ನಕಲಿ ಗಾಂಧಿಗಳು ರಾಜಕಾರಣ ಮಾಡಿದರು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





