ಲಖನೌ: ವಾರಾಣಸಿಯಲ್ಲಿ ಮತಯಂತ್ರಗಳನ್ನು ಕದಿಯಲಾಗುತ್ತಿದೆ. ಟ್ರಕ್ಗಳಲ್ಲಿ ಇವಿಎಂಗಳನ್ನು ಸಾಗಿಸಲಾಗುತ್ತಿದೆ ಎಂದು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ. ಬಿಜೆಪಿ ಮತಗಳನ್ನು ಕದಿಯಲು ಪ್ರಯತ್ನಿಸುತ್ತಿದೆ ಎಂದು ಅಖಿಲೇಶ್ ಆರೋಪಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಬಿಜೆಪಿ ಗೆಲ್ಲುತ್ತದೆ ಎಂಬ ವಾತವರಣ ಸೃಷ್ಟಿಸಲು ಮತಗಟ್ಟೆ ಸಮೀಕ್ಷೆಗಳು ನಡೆದಿವೆ ಎಂದು ಎಂದ ಅವರು, ಸಮೀಕ್ಷೆ ಫಲಿತಾಂಶಗಳನ್ನು ತಳ್ಳಿಹಾಕಿದರು. ಬಿಜೆಪಿ ಈ ಚುನಾವಣೆಯಲ್ಲಿ ಸೋಲಲಿದೆ. ಹೀಗಾಗಿ ಮತಗಳ ಎಣಿಕೆಯನ್ನು ನಿಧಾನಗೊಳಿಸುವಂತೆ ಸರ್ಕಾರದ ಅಧಿಕಾರಿಗಳು ಅಧೀನ ಅಧಿಕಾರಿಗಳಿಗೆ ನಿರ್ದೇಶಿಸುತ್ತಿದ್ದಾರೆ …
Read More »ವಕೀಲ ಜಗದೀಶ್ ಮಹದೇವ್ ಬಿಡುಗಡೆ
ಬೆಂಗಳೂರು: ಕೋರ್ಟ್ ಆವರಣದಲ್ಲಿ ನಡೆದ ಗಲಾಟೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ 24 ದಿನ ಜೈಲಿನಲ್ಲಿದ್ದ ವಕೀಲ ಜಗದೀಶ್ ಮಹದೇವ್ ಅವರು ಮಂಗಳವಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಎರಡೂ ಪ್ರಕರಣದಲ್ಲಿ ಜಾಮೀನು ಸಿಕ್ಕ ಬಳಿಕ ಜಗದೀಶ್ ಮಂಗಳವಾರ ಸಂಜೆ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದರು. ಅವರ ಅಭಿಮಾನಿಗಳು ಜಗದೀಶ್ಗೆ ಹೂವಿನ ಹಾರ ಹಾಕಿ ಬರ ಮಾಡಿಕೊಂಡರು.
Read More »ಟಿಸಿಎಸ್ ವ್ಯವಸ್ಥಾಪಕ ನಿರ್ದೇಶಕ ಗಾಡ್ವಿನ್ ಜಯಪ್ರಕಾಶ್ ಬಂಧನ
ಕೊಪ್ಪ: ಇಲ್ಲಿನ ಸಹಕಾರ ಸಾರಿಗೆ ಸಂಸ್ಥೆಯ (ಟಿಸಿಎಸ್) ವ್ಯವಸ್ಥಾಪಕ ನಿರ್ದೇಶಕ ಗಾಡ್ವಿನ್ ಜಯಪ್ರಕಾಶ್ ಅವರನ್ನು ಮಾರ್ಚ್ 22ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಇಲ್ಲಿನ ಜೆಎಂಎಫ್ಸಿ ನ್ಯಾಯಾಲಯ ಮಂಗಳವಾರ ಆದೇಶ ನೀಡಿದೆ. ಗಾಡ್ವಿನ್ ಜಯಪ್ರಕಾಶ್ ಅವರು ಸಂಸ್ಥೆಯ ಕಾರ್ಮಿಕರ ಪಿಎಫ್ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ನೌಕರರ ಭವಿಷ್ಯ ನಿಧಿ ಸಂಘಟನೆಯ ಚಿಕ್ಕಮಗಳೂರು ಘಟಕದ ಅಧಿಕಾರಿಯು 2020ರ ಫೆಬ್ರುವರಿ 18ರಂದು ಕೊಪ್ಪ ಪೊಲೀಸ್ ಠಾಣೆಗೆ ದೂರು ನೀಡಿದ್ದರು. 2018ರ ಅಕ್ಟೋಬರ್ನಿಂದ …
Read More »ಸೇವಾನಿರತ ಯೋಧ ನಿಧನ
ನಿಪ್ಪಾಣಿ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಕುರ್ಲಿ ಗ್ರಾಮದ ನಿವಾಸಿ, ಸಿಐಪಿಎಫ್ನ ಯೋಧ ನವನಾಥ ದಿವಟೆ (30) ಉತ್ತರಪ್ರದೇಶದಲ್ಲಿ ಸೇವಾನಿರತನಿದ್ದಾಗ ಸಾವಿಗೀಡಾಗಿದ್ದಾರೆ.ಅವರಿಗೆ ಪತ್ನಿ, ತಾಯಿ, ತಂದೆ, ಪುತ್ರ, ಪುತ್ರಿ, ಸಹೋದರ ಮತ್ತು ಸಹೋದರಿ ಇದ್ದಾರೆ.ಪಾರ್ಥಿವ ಶರೀರವನ್ನು ಕುರ್ಲಿ ಗ್ರಾಮಕ್ಕೆ ಬುಧವಾರ ತರಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ. 10 ವರ್ಷಗಳಿಂದ ಅವರು ಭಾರತೀಯ ಸೈನ್ಯದಲ್ಲಿ ಕೆಲಸ ಮಾಡುತ್ತಿದ್ದರು. ಉತ್ತರಪ್ರದೇಶ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರು. ಸೋಮವಾರ ಬೆಳಿಗ್ಗೆ ಅಸ್ವಸ್ಥಗೊಂಡ …
Read More »ಪ್ರಧಾನಿ ಮೋದಿ ದೇಶವನ್ನು ಸರ್ವನಾಶ ಮಾಡಿದ್ದಾರೆ : ಸಿದ್ದರಾಮಯ್ಯ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ ಎಂದು ಹೇಳುತ್ತಾ ‘ಸಬ್ ಕಾ ಸರ್ವನಾಶ್’ ಮಾಡುತ್ತಿದ್ದಾರೆ ಎಂಬ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟೀಕೆಯು ಸದನದಲ್ಲಿ ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ಸದಸ್ಯರ ನಡುವೆ ತೀವ್ರ ಜಟಾಪಟಿಗೆ ಕಾರಣವಾಯಿತು. ಮಂಗಳವಾರ ಬಜೆಟ್ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ ‘ಬಜೆಟ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ನಾವು ರಾಜ್ಯವನ್ನು ಸುಭಿಕ್ಷಗೊಳಿಸುತ್ತೇವೆ ಎಂದು ಹೇಳಲಾಗಿದೆ. …
Read More »ಅಚ್ಚರಿ ಘೋಷಣೆ ಮಾಡಿದ ಯುದ್ದ ಪೀಡಿತ ಉಕ್ರೇನ್
ನ್ಯಾಟೋಗೆ ಸೇರುವ ಉದ್ದೇಶದಿಂದ ಯುದ್ಧ ಮಾಡುತ್ತಿರುವ ಉಕ್ರೇನ್ ಯುದ್ಧದಿಂದ ತತ್ತರಿಸಿದ್ದು, ಅಚ್ಚರಿ ನಿರ್ಧಾರ ಪ್ರಕಟಿಸಿದೆ. ಇನ್ನು ಮುಂದೆ NATO ಸದಸ್ಯತ್ವಕ್ಕೆ ಒತ್ತಾಯಿಸಲ್ಲ ಎಂದು ರಷ್ಯಾಕ್ಕೆ ಒಪ್ಪಿಗೆ ಸೂಚಿಸಿದೆ. ನಾವು ಅರ್ಥಮಾಡಿಕೊಂಡಿದ್ದೇವೆ. ಬಹಳ ಹಿಂದೆಯೇ ಈ ಪ್ರಶ್ನೆಗೆ ಸಂಬಂಧಿಸಿದಂತೆ ನಾನು ತಣ್ಣಗಾಗಿದ್ದೇನೆ. NATO ಸೇರಲು ಉಕ್ರೇನ್ ಸಿದ್ಧವಾಗಿಲ್ಲ ಎಂದು ಉಕ್ರೇನ್ ಅಧ್ಯಕ್ಷ ವೊಲಿಡಿಮಿರ್ ಝೆಲೆನ್ ಸ್ಕಿ ಹೇಳಿದ್ದಾರೆ. ವೊಲೊಡಿಮಿರ್ ಝೆಲೆನ್ಸ್ಕಿ ಅವರು, ಉಕ್ರೇನ್ಗೆ ನ್ಯಾಟೋ ಸದಸ್ಯತ್ವಕ್ಕಾಗಿ ಇನ್ನು ಮುಂದೆ ಒತ್ತಾಯಿಸುವುದಿಲ್ಲ. ಇದು …
Read More »ಪದವಿ ಶಿಕ್ಷಣದಲ್ಲಿ ಭಾಷೆ ಯ ಕುರಿತು ಹೈಕೋರ್ಟ್ ಗೆ ಪ್ರಮಾಣ ಪತ್ರ ಸಲ್ಲಿಕೆ
ಬೆಂಗಳೂರು : ಪದವಿ ಶಿಕ್ಷಣದಲ್ಲಿ ಕನ್ನಡ ಭಾಷೆ ಸೇರಿದಂತೆ ಯಾವುದೇ ಭಾಷೆ ಕಲಿಕೆ ಕಡ್ಡಾಯವಲ್ಲ ಎಂದು ಕೇಂದ್ರ ಸರ್ಕಾರ ಕರ್ನಾಟಕ ಹೈಕೋರ್ಟ್ ಗೆ ಪ್ರಮಾಣ ಪತ್ರ ಸಲ್ಲಿಸಿದೆ. ರಾಷ್ಟ್ರೀಯ ಶಿಕ್ಷಣ ನೀತಿ-2020 (NEP) ಹಾಗೂ ಅದರ ನಿಯಮಗಳಲ್ಲಿ ಕನ್ನಡ ಸೇರಿದಂತೆ ಯಾವುದೇ ಭಾಷೆಯನ್ನು ಪದವಿ ಶಿಕ್ಷಣದಲ್ಲಿ ಕಡ್ಡಾಯಗೊಳಿಸುವ ಸಂಬಂಧ ಉಲ್ಲೇಖಗಳಲ್ಲಿ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದ್ದು, ಕರ್ನಾಟಕ ಹೈಕೋರ್ಟ್ ಗೆ ಪ್ರಮಾಣ ಪತ್ರ ಸಲ್ಲಿಸಿದೆ. ಇದರಿಂದ ಪದವಿ ಹಂತದಲ್ಲಿ ಭಾಷೆಯಾಗಿ …
Read More »ಹುಬ್ಬಳ್ಳಿಯಲ್ಲಿ ಮಹಿಳಾ ದಿನಾಚರಣೆ ಆಚರಣೆ
ಹುಬ್ಬಳ್ಳಿ : ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಸಮಸ್ತ ಮರಾಠಾ ಸಮಾಜ ಸೇವಾ ಸಂಘದ ವತಿಯಿಂದ ಇಂದು ಸಾಯಂಕಾಲ ಶ್ರೀ ಭಾರತಿ ಮಠ ಮರಾಠಾ ಭವನ ದಲ್ಲಿ ಮಹಿಳಾ ದಿನಾಚರಣೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಹುಬ್ಬಳ್ಳಿಯ ಎಲ್ಲಾ ಭಾಗದ ತಾಯಂದಿರು ಅಕ್ಕತಂಗಿಯರು ಉಪಸ್ಥಿತರಿದ್ದರು.
Read More »ನವೀನ್ ಶವ ಪತ್ತೆಯಾಗಿದೆ, ಶವಾಗಾರದಲ್ಲಿ ಸಂರಕ್ಷಿಸಿಇಡಲಾಗಿದೆ : ಬೊಮ್ಮಾಯಿ
ಬೆಂಗಳೂರು: ಯೂಕ್ರೇನ್ ನ ಯುದ್ಧ ಭೂಮಿಯಲ್ಲಿ ಹುತಾತ್ಮರಾದ ಕನ್ನಡಿಗ ವೈದ್ಯ ವಿದ್ಯಾರ್ಥಿ ನವೀನ್ ಶವ ಪತ್ತೆಯಾಗಿದ್ದು, ಅಲ್ಲಿನ ಶವಾಗಾರದಲ್ಲಿ ಸಂರಕ್ಷಸಿಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದರು. ಆರ್ ಟಿ.ನಗರದ ತಮ್ಮ ನಿವಾಸದ ಬಳಿ ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು ವಿದೇಶಾಂಗ ಸಚಿವ ಎಸ್.ಜೈಶಂಕರ್ ಈ ವಿಷಯ ತಿಳಿಸಿದ್ದಾರೆ. ಸದ್ಯಕ್ಕೆ ಷೆಲ್ ದಾಳಿ ಮುಂದುವರಿದಿದೆ. ಹೀಗಾಗಿ ಅಲ್ಲಿನ ಶವಾಗಾರದ ಅಧಿಕಾರಿಗಳ ಜತೆಗೆ ಭಾರತೀಯ ರಾಯಭಾರಿ ಕಚೇರಿ ಅಧಿಕಾರಿಗಳು …
Read More »ಮೇಕೆದಾಟು ಯೋಜನೆ ಪಾದಯಾತ್ರೆ ಕುರಿತು ಬೇಸರ ವ್ಯಕ್ತ ಪಡಿಸಿದ ಮಾಜಿ ಪ್ರಧಾನಿ
ಮದ್ದೂರು: ‘ಮೇಕೆದಾಟು ಯೋಜನೆ ಜಾರಿಗಾಗಿ ಇತ್ತೀಚೆಗೆ ಕೆಲ ಸ್ನೇಹಿತರು ಪಾದಯಾತ್ರೆ ಮಾಡಿದ್ದಾರೆ. ರಾಜ್ಯಕ್ಕೆ, ಬೆಂಗ ಳೂರಿಗೆ ನೀರು ತರುತ್ತೇವೆ ಎಂದು ಹೇಳಿದ್ದಾರೆ. ಅವರಾರೂ ನನ್ನ ಹೆಸರು ಹೇಳದಿರುವುದಕ್ಕೆ ನನಗೆ ಬೇಸರ ವಾಗಿದೆ.ಆದರೆ ಅವರಿಗೆ ನಾನು ನಡೆಸಿದ ನೀರಾವರಿ ಹೋರಾಟದ ಅರಿವಿಲ್ಲ’ ಎಂದು ರಾಜ್ಯಸಭಾ ಸದಸ್ಯ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ವಿಷಾದಿಸಿದರು. ಪಟ್ಟಣದ ತಾಲ್ಲೂಕು ಕ್ರೀಡಾಂಗಣ ದಲ್ಲಿ ಎಂ.ಎಚ್.ಚನ್ನೇಗೌಡ ವಿದ್ಯಾಸಂಸ್ಥೆಯ ವತಿಯಿಂದ ಸಂಸ್ಥೆಯ ಗೌರವಾಧ್ಯಕ್ಷ ಕೆ.ಟಿ.ಚಂದು ಅವರಿಗೆ ಅಭಿನಂದನಾ ಕಾರ್ಯಕ್ರಮ, ‘ಅಪರೂಪ’ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





