ಬೆಂಗಳೂರು: ಇಂದಿನಿಂದ ವಿಧಾನ ಮಂಡಲದ ಅಧಿವೇಶನ ಪುನರಾರಂಭಗೊಳ್ಳಲಿದೆ. ಅಲ್ಲದೇ ಬಜೆಟ್ ಅಧಿವೇಶನದಲ್ಲಿ ಆಯವ್ಯಯದ ಮೇಲೆ ಬಿಸಿ ಬಿಸಿ ಚರ್ಚೆ ನಡೆಯಲಿದೆ. ಜಂಟಿ ಅಧಿವೇಶನದಲ್ಲಿ ಕಾಂಗ್ರೆಸ್ ಧರಣಿಯಿಂದ ಮೂರು ದಿನ ಮೊದಲೇ ಅಧಿವೇಶನ ಬರಖಾಸ್ತು ಗೊಂಡಿತ್ತು. ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ವೇಳೆ ಪ್ರತಿಪಕ್ಷದ ನಾಯಕರೇ ಮಾತನಾಡಿರಲಿಲ್ಲ. ಈ ಬಳಿಕ, ಇಂದು ಮತ್ತೆ ಬಜೆಟ್ ಮೇಲಿನ ಚರ್ಚೆ ನಡೆಸೋದಕ್ಕಾಗಿ ಅಧಿವೇಶನ ಪುನರಾರಂಭಗೊಳ್ಳಲಿದೆ.
Read More »ಅಧಿವೇಶನ ನಂತರ ದೆಹಲಿಗೆ ಪ್ರವಾಸ : ಬೊಮ್ಮಾಯಿ
ಹುಬ್ಬಳ್ಳಿ: ಕಳಸಾ ಬಂಡೂರಿ ನಾಲಾ ಯೋಜನೆಗೆ ಕೇಂದ್ರ ಅರಣ್ಯ ಇಲಾಖೆ ಅನುಮೋದನೆ ಪಡೆಯಲು ವಿಶೇಷ ಯತ್ನ ಕೈಗೊಂಡಿದ್ದು, ಈ ಸಂಬಂಧ ಅಧಿವೇಶನ ನಂತರ ದೆಹಲಿಗೆ ಹೋಗುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ನ್ಯಾಯಾಧೀಕರಣದಿಂದ ಹಂಚಿಕೆಯಾದ ನಮ್ಮ ಪಾಲಿನ ನೀರು ಬಳಕೆಗೆ ಯಾವುದೇ ಅಡ್ಡಿಯಾಗದು. ನಮ್ಮ ಡಿಪಿಆರ್ ಮಾದರಿಯಲ್ಲಿ ಕಾಮಗಾರಿ ಕೈಗೊಳ್ಳಲಾಗುವುದು. ಮಹದಾಯಿ ನದಿ ನೀರು ಹಂಚಿಕೆ ಬಗ್ಗೆ ಮೂರು ರಾಜ್ಯಗಳ ವ್ಯಾಜ್ಯ ಸುಪ್ರೀಂ ಕೋರ್ಟ್ …
Read More »ಮಾ. 7 ರಂದು ರಾಯಚೂರ ಬಂದ್
ರಾಯಚೂರ : ಮಾರ್ಚ್ 7 ರಂದು ನಗರ ಬಂದ್ ಗೆ ಕರೆ ನೀಡಲಾಗಿದೆ. ನಗರ ಶಾಸಕ ಡಾ.ಶಿವರಾಜ್ ಪಾಟೀಲ್ ನೇತೃತ್ವದಲ್ಲಿ ಬಂದ್ ಆಗಲಿದೆ. ನವೋದಯ ಶಿಕ್ಷಣ ಸಂಸ್ಥೆ ನಿಲುವಿನ ವಿರುದ್ದ ವಿವಿಧ ಸಂಘಟನೆಗಳಿಂದ ಹೋರಾಟ ನಡೆಯಲಿದೆ.ಸಂಸ್ಥೆಗೆ ಕಲಂ 371 ಜೆ ಅನ್ವಯಿಸದಂತೆ ಕೋರ್ಟ್ ಮೊರೆ ಹೋದ ಹಿನ್ನೆಲೆ ಬಂದ್ ಮಾಡಲಾಗ್ತಿದೆ.. ಮೆಡಿಕಲ್ ಸೀಟ್ ಹಂಚಿಕೆಯಲ್ಲಿ ವಿದ್ಯಾರ್ಥಿಗಳಿಗೆ ಅನ್ಯಾಯ ಆರೋಪವಿದ್ದು , ಈ ವರ್ಷ 106 ವಿದ್ಯಾರ್ಥಿಗಳಿಗೆ ವೈದ್ಯಕೀಯ ಸೀಟ್ ಕೈ …
Read More »ಭಾರತದಲ್ಲಿ ಗಣನೀಯವಾಗಿ ಇಳಿಕೆ ಕಂಡ ಕೋವಿಡ್ ಪ್ರಕರಣಗಳು
ಹೊಸದಿಲ್ಲಿ: ಭಾರತದಲ್ಲಿ ಮೂರನೇ ಅಲೆ ಮುಕ್ತಾಯವಾಗಿರುವ ಸ್ಪಷ್ಟ ಸೂಚನೆಗಳು ಸಿಕ್ಕಿವೆ. ಕಳೆದ 22 ತಿಂಗಳಲ್ಲೇ ಕನಿಷ್ಠ ಸಾಪ್ತಾಹಿಕ ಪ್ರಕರಣಗಳು ಕಳೆದ ವಾರ ದೇಶದಲ್ಲಿ ವರದಿಯಾಗಿವೆ. 2020ರ ಮೇ ತಿಂಗಳ ಬಳಿಕ ಇಷ್ಟೊಂದು ಕಡಿಮೆ ಪ್ರಕರಣಗಳು ವರದಿಯಾಗಿರುವುದು ಇದೇ ಮೊದಲು.ಕಳೆದ ನಾಲ್ಕು ವಾರಗಳಲ್ಲಿ ದೇಶದಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಪ್ರತಿ ವಾರ ಅರ್ಧದಷ್ಟು ಕಡಿಮೆಯಾಗಿದೆ. ಫೆಬ್ರವರಿ 21-27ರ ಅವಧಿಯಲ್ಲಿ ದೇಶದಲ್ಲಿ 86097 ಪ್ರಕರಣಗಳು ವರದಿಯಾಗಿದ್ದವು. ಅದಕ್ಕೂ ಹಿಂದಿನ ಮೂರು ವಾರಗಳಲ್ಲಿ ಅನುಕ್ರಮವಾಗಿ …
Read More »ರೈತರಿಗೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ
ಬೆಂಗಳೂರು: ರೈತರಿಗೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ.ಕಂದಾಯ ಮತ್ತು ಭೂಮಾಪನ ಇಲಾಖೆಯಿಂದ ಹೊಸ ಯೋಜನೆ ರೂಪಿಸಲಾಗಿದ್ದು, ಪಹಣಿ ಪತ್ರದಲ್ಲಿ ನಕ್ಷೆಯನ್ನು ಕೂಡ ನೀಡಲಾಗುತ್ತದೆ. ಪ್ರಾಯೋಗಿಕವಾಗಿ ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ನಂತರ ರಾಜ್ಯಾದ್ಯಂತ ವಿಸ್ತರಿಸಲಾಗುತ್ತದೆ. ಹೊಸ ಪಹಣಿಯಲ್ಲಿಯೂ ಹಳೆ ಪಹಣಿಯಲ್ಲಿ ಇರುವಂತೆಯೇ ಎಲ್ಲ ವಿವರಗಳು ಇರುತ್ತವೆ. ಎಡಗಡೆ ಡಿಜಿಟಲ್ ಸ್ಕೆಚ್ ಇರಲಿದೆ. ವಿಸ್ತೀರ್ಣ, ಜಮೀನು ಎಲ್ಲಿದೆ?, ಒತ್ತುವರಿ ಮಾಹಿತಿ, ಕ್ಯೂಆರ್ ಕೋಡ್, ಬಾರ್ಕೋಡ್ ಮೊದಲಾದವುಗಳನ್ನು ಒಳಗೊಂಡಂತೆ ಹೊಸ …
Read More »ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ
ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರಿಗೆ ವೇತನ ಭತ್ಯೆ ಹೆಚ್ಚಳಕ್ಕೆ ಸಂಬಂಧಿಸಿದಂತೆ 7ನೇ ವೇತನ ಆಯೋಗ ರಚನೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ತಿಳಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಗಿದೆ ಎಂದರು.
Read More »ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡದ ಶ್ರೀರಾಮುಲು
ಬಳ್ಳಾರಿ: 2022-23ನೇ ಸಾಲಿನ ರಾಜ್ಯ ಬಜೆಟ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಸಚಿವ ಶ್ರೀರಾಮುಲು, ಬಾಯಿ ಚಪಲಕ್ಕೆ ಮಾತನಾಡುವವರ ಬಾಯಿ ಮುಚ್ಚಿಸಲಾಗದು ಎಂದು ಹೇಳಿದ್ದಾರೆ. ರಾಜ್ಯ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಇದು ಅಡ್ಡಕಸಬಿ ಬಜೆಟ್ ಎಂದಿದ್ದರು. ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿರುವ ಶ್ರೀರಾಮುಲು, ಇದು ಸಿದ್ದರಾಮಯ್ಯ ಅವರ ಭಂಡತನ, ಮೊಂಡುತನಕ್ಕೆ ಸಾಕ್ಷಿ. ಸಿದ್ದರಾಮಯ್ಯನವರು 13 ಬಾರಿ ಬಜೆಟ್ ಮಂಡನೆ ಮಾಡಿದ್ದಾರೆ. …
Read More »ಮೆಟ್ರೋ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ
ಪುಣೆ : ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಪುಣೆಯಲ್ಲಿ ಮೆಟ್ರೋ ರೈಲಿಗೆ ಚಾಲನೆ ನೀಡಿದ್ದಾರೆ, ನಗರದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಭವ್ಯ ಪ್ರತಿಮೆಯನ್ನು ಅನಾವರಣ ಮಾಡಿದ್ದು, ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಇಂದು ಪುಣೆಯ ಅಭಿವೃದ್ಧಿಗೆ ಸಂಬಂಧಿಸಿದ ಅನೇಕ ಯೋಜನೆಗಳನ್ನು ಉದ್ಘಾಟಿಸಲಾಗಿದೆ ಮತ್ತು ಶಿಲಾನ್ಯಾಸವನ್ನೂ ಮಾಡಲಾಗಿದೆ.ಪುಣೆ ಮೆಟ್ರೋದ ಶಂಕುಸ್ಥಾಪನೆಗೆ ನನ್ನನ್ನು ಕರೆದಿದ್ದ ನೀವು ಈಗ ಅದನ್ನು ಉದ್ಘಾಟನೆ ಮಾಡುವ ಅವಕಾಶವನ್ನು ನೀಡಿರುವುದು ನನ್ನ ಸೌಭಾಗ್ಯ. ನಿಗದಿತ ಸಮಯದಲ್ಲಿ ಯೋಜನೆಗಳನ್ನು ಪೂರ್ಣಗೊಳಿಸಬಹುದು …
Read More »ಹರ್ಷ ಮನೆಗೆ ಮಾಜಿ ಸಿಎಂ ಭೇಟಿ: 25 ಲಕ್ಷ ರೂ. ಪರಿಹಾರ ವಿತರಣೆ
ಶಿವಮೊಗ್ಗ: ಹತ್ಯೆಗೀಡಾದ ಬಜರಂಗದಳದ ಕಾರ್ಯಕರ್ತ ಹರ್ಷ ಮನೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭೇಟಿ ನೀಡಿದ್ದು, ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ರಾಜ್ಯ ಸರಕಾರದ ಪರವಾಗಿ ಹರ್ಷ ಕುಟುಂಬಕ್ಕೆ ರೂ.25 ಲಕ್ಷ ಪರಿಹಾರದ ಚೆಕ್ ನೀಡಿದರು. ಸೀಗೆಹಟ್ಟಿಯಲ್ಲಿ ಹರ್ಷ ಕುಟುಂಬಸ್ಥರ ಭೇಟಿ ಬಳಿಕ ಮಾತನಾಡಿದ ಯಡಿಯೂರಪ್ಪ, 26 ವರ್ಷದ ಯುವಕ ಹರ್ಷ ಎಲ್ಲರ ಜೊತೆ ಆತ್ಮೀಯ ಸಂಬಂಧ ಹೊಂದಿದ್ದ. ಈ ಭಾಗದಲ್ಲಿ ಗೊಂದಲ, ಹೋರಾಟಕ್ಕೆ ಅವಕಾಶ ನೀಡುತ್ತಾ ಇರಲಿಲ್ಲ. ಹಿಂದೂ ಯುವ …
Read More »ಎ.ಪಿ.ಎಂ.ಸಿ ಮಹಾದ್ವಾರ, ಜಾನುವಾರು ಮಾರುಕಟ್ಟೆ ಹಾಗೂ ಈರುಳ್ಳಿ ಸಂಗ್ರಹಣಾ ಗೋದಾಮು ಉದ್ಘಾಟಿಸಿದ ಸಿಎಂ
ಹುಬ್ಬಳ್ಳಿ: ಅಮರಗೋಳದ ಜಗಜ್ಯೋತಿ ಬಸವೇಶ್ವರ ಎ.ಪಿ.ಎಂ.ಸಿ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಮಹಾದ್ವಾರ, ಜಾನುವಾರು ಮಾರುಕಟ್ಟೆ ಹಾಗೂ ಈರುಳ್ಳಿ ಸಂಗ್ರಹಣಾ ಗೋದಾಮು ಘಟಕವನ್ನು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಇಂದು ಉದ್ಘಾಟಿಸಿದರು. ಏಷ್ಯಾದ ಅತಿದೊಡ್ಡ ಎ.ಪಿ.ಎಂ.ಸಿ ಎಂಬ ಖ್ಯಾತಿ ಹೊಂದಿರುವ ಹುಬ್ಬಳ್ಳಿ ಎ.ಪಿ.ಎಂ.ಸಿ ಗೆ ಸಾಮಾಜಿಕ ಸುಧಾರಕ ಜಗಜ್ಯೋತಿ ಬಸವೇಶ್ವರ ಹೆಸರಿಡಲಾಗಿದೆ. ಇದಕ್ಕೆ ತಕ್ಕಹಾಗೆ ಮುಖ್ಯದ್ವಾರವನ್ನು ನಿರ್ಮಿಸಲಾಗಿದ್ದು, ಉತ್ತರ ಕರ್ನಾಟಕದ ರೈತ ಸಂಸ್ಕೃತಿಯನ್ನು ಬಿಂಬಿಸುತ್ತಿದೆ. ಬಸವಣ್ಣ, ನೇಗಿಲು ಹೊತ್ತ ರೈತ, ಅಲಂಕೃತ ಜೋಡೆತ್ತುಗಳ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





